gruhalakhmi navaratri

ಗೃಹಲಕ್ಷ್ಮಿಯರಿಗೆ ನವರಾತ್ರಿ ಹಬ್ಬದ ಬಂಪರ್ ಗಿಫ್ಟ್ – ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ರೂ. 4000/- ಒಟ್ಟಿಗೆ ಬ್ಯಾಂಕ್ ಖಾತೆಗೆ ಜಮಾ

Categories:
WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ ಹಣ ಜಮೆ ಆಗದ ಮಹಿಳೆಯರಿಗೆ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಒಟ್ಟಿಗೆ ಜಮೆ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮಹಿಳೆಯರಿಗೆ ನವರಾತ್ರಿ ಹಬ್ಬದ(Navaraatri Festival) ಸಮಯದಲ್ಲಿ ಸಿದ್ದರಾಮಯ್ಯನವರು ಒಂದು ಗಿಫ್ಟ್ ನೀಡುತ್ತಿದ್ದಾರೆ ಅಂತ ಹೇಳಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎರಡು ತಿಂಗಳಿಗಿಂತ ಹೆಚ್ಚಾದರೂ ಇನ್ನೂ ಕೂಡ ಹಣ ಬಂದಿಲ್ಲ ಎಂದು ಚಿಂತೆಯಲ್ಲಿರುವ ಮಹಿಳೆಯರಿಗೆ ಸಿದ್ದರಾಮಯ್ಯನವರು tweet ಮಾಡುವ ಮೂಲಕ ನವರಾತ್ರಿಯ ಭರ್ಜರಿ ಗಿಫ್ಟನ್ನು ಘೋಷಣೆ ಮಾಡಿದ್ದಾರೆ. ಅದೇನೆಂದರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಹಣಬರದಿದ್ದ ಮಹಿಳೆಯರಿಗೆ ಒಟ್ಟಿಗೆ ನಾಲ್ಕು ಸಾವಿರದ ಹಣವನ್ನು ಅಕೌಂಟಿಗೆ ಜಮಾ ಮಾಡಲಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಜಮೆ :

ಸಿದ್ದರಾಮಯ್ಯನವರು ನವರಾತ್ರಿ ಸಂಭ್ರಮದ  ಟ್ವೀಟ್ ಮೂಲಕ ಖುಷಿಯಾದ ವಿಷಯವನ್ನು ಹಂಚಿಕೊಂಡಿದ್ದಾರೆ ಅದರ ವಿವರ ಕೆಳಗಿನಂತಿದೆ : “ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು ರೂ. 4,449 ಕೋಟಿ ಅನುದಾನ ಬಳಕೆ ಮಾಡಿದೆ.

ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.” ಎಂದು ಟ್ವೀಟ್ ಮುಖಾಂತರ ತಿಳಿಸಿದ್ದಾರೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Popular Categories