ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಮತ್ತು ಜನಪ್ರಿಯ ಯೋಜನೆ ಗೃಹಲಕ್ಷ್ಮಿ ಯೋಜನೆಯ ಲೋಕಸಭಾ ಚುನಾವಣೆವರೆಗೂ ಸರಿಯಾದ ಸಮಯಕ್ಕೆ ಹಣ ಜಮಾ ಆಗುತ್ತಾ ಬಂದಿತ್ತು. ಆದರೆ ಕೆಲವು ಕಾರಣಗಳಿಂದ ಕಳೆದ 2 ತಿಂಗಳಿನಿಂದ ಈ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಈ ಬಗ್ಗೆ ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಈ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಮೇ ತಿಂಗಳಿನವರೆಗೆ ಸರಿಯಾಗಿಯೇ ಹಣ ಪಾವತಿಯಾಗಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ₹6,000 ಗೃಹಿಣಿಯರ ಖಾತೆಗೆ ಜಮಾ!
ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಯು ಕರ್ನಾಟಕದಲ್ಲಿ ಮಹಿಳೆಯರಿಗೆ ಆರ್ಥಿಕ ಬೆಂಬಲದ ಮೂಲಾಧಾರವಾಗಿದೆ, ಇದು ರಾಜ್ಯಾದ್ಯಂತ ಮನೆಗಳಿಗೆ ಗಣನೀಯ ನೆರವು ನೀಡುತ್ತದೆ. ಮಹಿಳೆಯರಲ್ಲಿ ವ್ಯಾಪಕ ಜನಪ್ರಿಯತೆಯನ್ನು ಗಳಿಸಿರುವ ಈ ಯೋಜನೆಯು ನೇರ ಲಾಭ ವರ್ಗಾವಣೆ (ಡಿಬಿಟಿ) ಅರ್ಹ ಫಲಾನುಭವಿಗಳಿಗೆ ಪ್ರತಿ ಕಂತಿಗೆ ರೂ.2,000 ರಂತೆ ಇಲ್ಲಿಯವರೆಗೆ 13 ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಒಟ್ಟು ರೂ. 26,000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಾಗೂ 12 ಮತ್ತು 13ನೇ ಕಂತಿನ ಒಟ್ಟು ನಾಲ್ಕು ಸಾವಿರ ರೂಪಾಯಿ ಜಮಾ ಆಗುವ ಕುರಿತು ಬಿಗ್ ಅಪ್ಡೇಟ್ ಕೆಳಗೆ ಕೊಡಲಾಗಿದೆ.
ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಹಲವಾರು ಮಹಿಳೆಯರಿಗೆ ಇದೇ ತಿಂಗಳು 2000 ಹಣ ಜಮಾ ಆಗಿರುವ ಡಿ ಬಿ ಟಿ ಸ್ಟೇಟಸ್ ಅನ್ನು ನೀವು ಕೆಳಗೆ ಗಮನಿಸಬಹುದು.
ಕಳೆದ ತಿಂಗಳ 2000 ಹಣ 12ನೇ ತಾರೀಕು ಜಮಾ ಆಗಿದ್ದು. ಅಕ್ಟೋಬರ್ ತಿಂಗಳಲ್ಲಿ ಒಟ್ಟಿಗೆ ಎರಡು ತಿಂಗಳ ಹಣ ಜಮಾ ಆಗಿರುವ DBT ಸ್ಟೇಟಸ್ ಕೆಳಗೆ ಗಮನಿಸಬಹುದು.
ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.
ಈಗಾಗಲೇ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ 26.65 ಲಕ್ಷ ರೂಪಾಯಿ ವರ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ವರ್ಗಾವಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವು ತಾಂತ್ರಿಕ ದೋಷಗಳಿಂದ 12 ಮತ್ತು 13ನೇ ಕಂತಿನ ಹಣ ಜಮೆ ಆಗಿಲ್ಲ , ಈಗ ಎಲ್ಲಾ ಸರಿಯಾಗಿದ್ದು ಒಟ್ಟು ನಾಲ್ಕು ಸಾವಿರ ರೂಪಾಯಿ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ !
ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App: Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Ravi Davalara