Gruhalakshmi – ಗೃಹಲಕ್ಷ್ಮಿ ಉಚಿತ ₹2,000/- ಹಣ ಬ್ಯಾಂಕ್ ಗೆ ಜಮಾ ಆಗಲು ಈ ಕೆಲಸ ಕಡ್ಡಾಯ – ಅರ್ಜಿ ಹಾಕಿರೋರು ತಪ್ಪದೆ ಓದಿ

WhatsApp Image 2023 07 31 at 5.39.58 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruhalakshmi scheme) ಹಣ ಎಂದು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ? ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈಗಾಗಲೇ ರಾಜ್ಯದಲ್ಲಿ ಹಲವಾರು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಆಗಿದೆ. ಹಾಗಾಗಿ ಅರ್ಜಿ ಸಲ್ಲಿಸಿದ ಎಲ್ಲರೂ ಯಾವಾಗ ಹಣ ಬರುತ್ತದೆ ಎಂದು ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬ ಗೊಂದಲವು ಕೂಡ ಇರುತ್ತದೆ. ಈ ಎಲ್ಲಾ ಗೊಂದಲಗಳಿಗೆ ಉತ್ತರ ಇಲ್ಲಿದೆ, ಈ ಲೇಖನದಲ್ಲಿ ಗೃಹಲಕ್ಷ್ಮಿಯ ಹಣ ಯಾವ ಖಾತೆಗೆ ಎಂದೂ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿಯ 2,000/- ರೂಗಳ ಹಣ ಜಮೆ ಆಗುವ ದಿನಾಂಕ ನಿರ್ಧಾರ :

ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲರೂ ಇಷ್ಟಪಡುವಂತಹ ಯೋಜನೆಯಾಗಿದೆ. ವರದಿಯ ಪ್ರಕಾರ ಈಗಾಗಲೇ 60% ನಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇನ್ನು ಕೆಲವರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯ ತಿದ್ದುಪಡಿಯ ಸಮಸ್ಯೆಗಳಲ್ಲಿ ಸಿಲುಕಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದೆ. ಆದರೆ ಬಹುತೇಕ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಯಾವ ದಿನದಂದು ತಮ್ಮ ಖಾತೆಗೆ ಹಣ ಜಮಾ ಆಗುತ್ತದೆಯೋ ಎಂದು ನಿರೀಕ್ಷಿಸುತ್ತಿದ್ದಾರೆ. ಇದೇ ಸಮಯದಲ್ಲಿ ಸರ್ಕಾರವು ಒಂದು ಶುಭ ಸುದ್ದಿಯನ್ನು ನೀಡಿದೆ, ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ 2000/- ಖಾತೆಗೆ ಎಂದು ಜಮಾ ಆಗುತ್ತದೆ ಎಂಬ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

whatss

ಇದೇ ಆಗಸ್ಟ್ 15ನೇ ಸ್ವಾತಂತ್ರ್ಯ ದಿನಾಚರಣೆಯಂದು, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಖಾತೆಗೆ ಜಮಾ ಆಗಲು ಚಾಲನೆ ನೀಡಲಿದ್ದು, ಆಗಸ್ಟ್ 16 ಹಾಗೂ 17ನೇ ತಾರೀಕಿನಂದು ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮವಾಗಲಿದೆ. ಹಾಗಾಗಿ ನೀವೇನಾದರೂ ಇನ್ನೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಲ್ಲ ಎಂದರೆ ಕೂಡಲೇ ಅರ್ಜಿಗಳನ್ನು ಸಲ್ಲಿಸಿ 2000 ಹಣಗಳ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ 2000 ರೂಗಳು ಯಾವ ಖಾತೆಗೆ ಜಮಾ ಆಗುತ್ತದೆ?:

ಅನೇಕ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಜಮೆ ಆಗುತ್ತದೆ ಎಂಬುವ ಗೊಂದಲವಿದೆ. ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಲಿದೆ. ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎನ್ನುವುದನ್ನು ನೀವು ಸುಲಭವಾಗಿ ಮನೆಯಲ್ಲಿ ಕುಳಿತುಕೊಂಡು ತಿಳಿಯಬಹುದಾಗಿದೆ. ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಯಾವುದೆಂದು ತಿಳಿಯಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಆಧಾರ್ ಕಾರ್ಡ್ ನೊಂದಿಗೆ  ಡಿಬಿಟಿ ಲಿಂಕ್ ಮಾಡಿ :

ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ.  ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:

ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper

ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.

aa11

ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ

aa12

ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.

aa13

ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.

ಗೃಹಲಕ್ಷ್ಮಿ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್ : ಯಜಮಾನಿ ಹೆಸರು ಬದಲಾವಣೆಗೆ ಅವಕಾಶ

tel share transformed

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

Picsart 23 07 16 14 24 41 584 transformed 1

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!