ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಹಣ ಎಷ್ಟೋ ಮಹಿಳೆಯರಿಗೆ ಅನುಕೂಲವಾಗಿದ್ದು, ಪ್ರತಿ ತಿಂಗಳು ಎಲ್ಲಾ ಮಹಿಳೆಯರಿಗೆ ಹಣ ಜಮಾ ಆಗುತ್ತಿದೆ, ಬ್ಯಾಂಕ್ ಖಾತೆಗೆ ಹಣ ಬಂದಿರುವ ಸ್ಟೇಟಸ್ ಮೊಬೈಲ್ ಫೋನ್ ನಲ್ಲೆ ನೋಡಿಕೊಳ್ಳಬಹುದು, ಆದರೆ ಸರಿಯಾದ ಸಮಯಕ್ಕೆ ಸರ್ಕಾರ ಬಿಡುಗಡೆ ಮಾಡಿದಾಗ ತಮ್ಮ ಖಾತೆಗೆ ಹಣ ಬಂದಿದೆಯೋ ಅಂತ ತಿಳಿದುಕೊಳ್ಳಲು ಸಾಕಷ್ಟು ಮಹಿಳೆಯರಿಗೆ ಸಾಧ್ಯವಾಗುತ್ತಿಲ್ಲ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಒಂದು ಕಂತಿನ ಹಣ ಬಂದಿಲ್ಲ ಅಂದ್ರೆ ಹೀಗೆ ಮಾಡಿ
ನೀವು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಒಂದು ಕಂತಿನ ಹಣ ಬಂದೇ ಇಲ್ಲ ಎಂದು ಯೋಚಿಸುತ್ತಿದ್ದರೆ ಚಿಂತೆ ಬಿಡಿ ನೀವು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಈ ಬಾರಿ ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿಕೊಳ್ಳಿ.
ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ (ಮನೆ ಯಜಮಾನಿ ಅಂದರೆ ಅರ್ಜಿ ಸಲ್ಲಿಸುವವರ ಹೆಸರಲ್ಲಿ ಇರಬೇಕು ) ನಿಮ್ಮ ಆಧಾರ್ ಕಾರ್ಡ್,ರೇಷನ್ ಕಾರ್ಡ್, ಮತ್ತು ಬ್ಯಾಂಕ್ ಖಾತೆ ಹೆಸರು ಒಂದೇ ಆಗಿರಬೇಕು, ಹೆಸರಿನಲ್ಲಿ ಮಿಸ್ ಮ್ಯಾಚ್ ಇರಬಾರದು. ಮತ್ತು ಬ್ಯಾಂಕ್ ಖಾತೆಗೆ ekyc ವಹಿಸಿ ಕಡ್ಡಾಯವಾಗಿ ಆಗಿರಬೇಕು, NPCI ಮ್ಯಾಪಿಂಗ್ ಆಗಿರಬೇಕು, ಹಾಗೂ ಮುಖ್ಯವಾಗಿ ನಿಮ್ಮ ಖಾತೆ ಆಕ್ಟಿವ್ ಇರಬೇಕು. ಇವೆಲ್ಲವನ್ನ ಸರಿ ಮಾಡಿಕೊಂಡು ಮತ್ತೊಮ್ಮೆ ಅರ್ಜಿ ಸಲ್ಲಿಸಿ. ಖಂಡಿತ ವಾಗಿ ನಿಮಗೆ ಮುಂದಿನ ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ ಆಗುತ್ತದೆ. ಇದೊಂದು ಆಟೋಮ್ಯಾಟಿಕ್ ಪ್ರೋಸೆಸ್ ಆಗಿದ್ದು ದಾಖಲಾತಿ ಸರಿಯಿದ್ದಲ್ಲಿ ಹಣ ಖಂಡಿತ ಬರುತ್ತೆ.
7ನೇ ಕಂತಿನ ಹಣ ಬಿಡುಗಡೆ
ಇನ್ನೇನು ಮಾರ್ಚ್ ತಿಂಗಳು ಮುಗಿಯುತ್ತ ಬಂದಿದೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೌದು ರಾಜ್ಯದ ಈ ಕೆಳಗಿನ ಜಿಲ್ಲೆಗಳಲ್ಲಿ ಈಗಾಗಲೇ ಹಣ ಬಿಡುಗಡೆಯಾಗಿದ್ದು, ಎಲ್ಲಾ ಮಹಿಳಾ ಫಲಾನುಭವಿಗಳು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ.
ಶಿವಮೊಗ್ಗ, ಧಾರವಾಡ, ತುಮಕೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ರಾಮನಗರ, ಕೊಪ್ಪಳ, ದಕ್ಷಿಣ ಕನ್ನಡ, ತುಮಕೂರು, ಹಾವೇರಿ, ಉತ್ತರ ಕನ್ನಡ, ಕೋಲಾರ, ಗದಗ, ವಿಜಯನಗರ, ಬೀದರ್, ರಾಯಚೂರು, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ಯಾದಗಿರಿ
ಈ ಮೇಲಿನ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದ್ದು. ತಿಂಗಳ 31ನೇ ತಾರೀಖಿನೊಳಗೆ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ 7ನೇ ಕಂತಿನ ಹಣ ಜಮಾ ಆಗುತ್ತದೆ.
ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ಬಂದಿಲ್ವ?
ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಡಿಸೆಂಬರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಇದೇ ತಿಂಗಳು 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನ ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೀವು ನೋಡಬಹುದು.
DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ಈ ಕೆಳಗಿನ ಯೋಜನೆಗಳ ಹಣವನ್ನು ನೀವು ಈ ಆಪ್ ನಲ್ಲಿ ಚೆಕ್ ಮಾಡಬಹುದು.
ಗೃಹಲಕ್ಷ್ಮಿ ಯೋಜನೆ
ಅನ್ನಭಾಗ್ಯ ಯೋಜನೆ
ಪಿ ಎಂ ಕಿಸಾನ್ ಹಣ
Ssp ಸ್ಕಾಲರ್ಶಿಪ್ ಹಣ
ಹಾಲಿನ ಪ್ರೋತ್ಸಾಹ ಧನ
ರೈತ ಶಕ್ತಿ ಯೋಜನೆ ಹಣ
ಹಲವಾರು ಯೋಜನೆಗಳ ಹಣದ DBT ಸ್ಟೇಟಸ್ ಚೆಕ್ ಮಾಡಬಹುದು
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಗೃಹಜ್ಯೋತಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್, ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ
- ವೋಟರ್ ಐಡಿಗೆ ಅರ್ಜಿ ಸಲ್ಲಿಸುವುದು ಹೇಗೆ? ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸುವ ವಿಡಿಯೋ ಇಲ್ಲಿದೆ
- ಈ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ 2000/- ಹಣ ಜಮೆ ಆಗೋಲ್ಲ, ಇಲ್ಲಿದೆ ಕಾರಣ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.