Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣದ ಬಿಗ್ ಅಪ್ಡೇಟ್, ಪೆಂಡಿಂಗ್ ಹಣ ಪಡೆಯಲು ಈ ಕೆಲಸ ಕಡ್ಡಾಯ.!

gruhalakshmii pending

ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗೃಹಲಕ್ಷ್ಮಿ ಯೋಜನೆ ಭಾರಿ ಸದ್ದು ಮಾಡುತ್ತಿದೆ, ಹೌದು ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದೇ ಇಲ್ವಾ ಎನ್ನುವ ಹಲವಾರು ಮಹಿಳೆಯರಿಗೆ ಕಳೆದ ತಿಂಗಳು ಬರೋಬ್ಬರಿ 14,000 ಜಮಾ ಆಗಿದೆ. ಇನ್ನೂ ಹಲವಾರು ಕಡೆ ಗೃಹಲಕ್ಷ್ಮಿ ಹಣದಲ್ಲಿ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಗಳನ್ನು ಖರೀದಿಸಿದ ಕೆಲವು ಮಹಿಳೆಯರು ರಾಜ್ಯದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ, ಉತ್ತರ ಕರ್ನಾಟಕ ಭಾಗದಲ್ಲಿ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಮತ್ತು ಟಿವಿ ಖರೀದಿಸಿ ಪೂಜೆ ಮಾಡಿರುವ ವಿಡಿಯೋಗಳು ವೈರಲ್ ಆಗಿವೆ. ಇನ್ನೊಂದೆಡೆ ಕೇವಲ ನಮಗೆ ಎರಡು ಅಥವಾ ಮೂರು ಕಂತುಗಳು ಬಂದು ಇನ್ನುಳಿದ ಕಂತುಗಳು ಬಂದೇ ಇಲ್ಲ ಎನ್ನುವ ಮಹಿಳೆಯರು ಇದ್ದಾರೆ. ಹಾಗಾಗಿ ಹಣ ಬರದೇ ಇದ್ದವರ ಏನು ಮಾಡಬೇಕು, 8ನೇ ಕಂತಿನ ಹಣದ ಅಪ್ಡೇಟ್ ಕೆಳಗೆ ಕೊಡಲಾಗಿದೆ.

ಇತ್ತೀಚಿನ ದಿನಗಳಲ್ಲಿ , ಆಧಾರ್ ಕಾರ್ಡ್  ತುಂಬಾ ಅವಶ್ಯಕವಾದ  ದಾಖಲೆಯಾಗಿದೆ, ನೀವೇನಾದರೂ ಈ ಆಧಾರ್ ಕಾರ್ಡ್ ಅನ್ನೋ ಚಿಕ್ಕ ಪ್ರತಿ ಎಂದು ನಿರ್ಲಕ್ಷನೆ ಮಾಡಿ ನಿಮ್ಮ ಬಳಿ  ಹೊಂದಿಲ್ಲದಿದ್ದರೆ, ನಿಮ್ಮ ಅನೇಕ ಕೆಲಸಗಳು ಸ್ಥಗಿತವಾಗಬಹುದು ಹೌದು ಒಂದು ಚಿಕ್ಕ ಕೆಲಸದಿಂದ ಹಿಡಿದು ಸರ್ಕಾರಿ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳುವರೆಗೂ ಈ ಆಧಾರ್ ಕಾರ್ಡ್ ಅತ್ಯ ಅಗತ್ಯ ದಾಖಲೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ.

ಗೃಹಲಕ್ಷ್ಮಿ ಹಣ ಪಡೆಯಲು ಬ್ಯಾಂಕ್ ಲಿಂಕ್ ಕಡ್ಡಾಯ :

ಇತ್ತೀಚಿನ ದಿನಗಳಲ್ಲಿ ಗುರುತಿನ ಮತ್ತು ವಿಳಾಸದ ಪ್ರಮುಖ ಗುರುತಿನ ಪುರಾವೆಗಳಲ್ಲಿ ಆಧಾರ್ ಕಾರ್ಡ್( Adhar card) ಒಂದಾಗಿದೆ . ಇದನ್ನು ಸುಲಭವಾಗಿ ಡೌನ್‌ಲೋಡ್ ಮಾಡಬಹುದು, ಡಿಜಿಟಲ್ ರೂಪದಲ್ಲಿ ಸಾಗಿಸಬಹುದು ಮತ್ತು ದೃಢೀಕರಣ/ಪರಿಶೀಲನೆಗಾಗಿ ತಕ್ಷಣವೇ ಹಂಚಿಕೊಳ್ಳಬಹುದಾಗಿದೆ . ಅದೇ ಸಮಯದಲ್ಲಿ, ನೀವು ಬ್ಯಾಂಕಿನಲ್ಲಿ ಏನಾದರೂ ಖಾತೆಯನ್ನು ತೆರೆದಾಗ, ನಿಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆ(Bank Account)ಗೆ ಲಿಂಕ್ ಮಾಡಬೇಕಾಗುತ್ತದೆ . ಹೌದು, ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆದರೆ ನಿಮ್ಮ ಆಧಾರ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ ಮತ್ತು ಯಾವ ಖಾತೆಗೆ ಲಿಂಕ್ ಆಗಿಲ್ಲಾ ಎಂದು ಯೋಚನೆ ಮಾಡುತಿದ್ದಿರಿಯೇ, ಯೋಚನೆ ಬೇಡಾ ನಿಮ್ಮ ಬ್ಯಾಂಕ್ ಖಾತೆಯು ನಿಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಆಗಿದೆಯೇ ಇಲ್ಲವೇ ಎಂದು ಸುಲಭವಾಗಿ ಪರಿಶೀಲಿಸಬಹುದು.

UIDAI ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ:

NPCI ಮ್ಯಾಪರ್‌ನಲ್ಲಿ ನಿಮ್ಮ ಆಧಾರ್ ಮತ್ತು ಬ್ಯಾಂಕ್ ಖಾತೆ ಲಿಂಕ್ ಮಾಡುವ ಸ್ಥಿತಿಯನ್ನ  ಮತ್ತು ಆಧಾರ್‌ನೊಂದಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಸಹ  ಪರಿಶೀಲಿಸಲು ಈ ಕೆಳಗೆ ನೀಡಿರುವ ಸರಳ ಹಂತಗಳನ್ನು ಅನುಸರಿಸಿ: 

ಹಂತ 1: UIDAI ನ ವೆಬ್‌ಸೈಟ್‌ಗೆ ಭೇಟಿ ನೀಡಿ ಆಧಾರ್/ಬ್ಯಾಂಕ್ ಸೀಡಿಂಗ್ ಸ್ಥಿತಿಯನ್ನು ಪರಿಶೀಲಿಸಿ ಮೇಲೆ ಕ್ಲಿಕ್ ಮಾಡಿ .

https://resident.uidai.gov.in/bank-mapper

aa11

ಹಂತ 2: ನೀವು UID/VID, ಭದ್ರತಾ ಕೋಡ್ ಅನ್ನು ನಮೂದಿಸಬೇಕಾದ ಬ್ಯಾಂಕ್ ಮ್ಯಾಪರ್ ಪುಟಕ್ಕೆ ನಿಮ್ಮನ್ನು ಮರುನಿರ್ದೇಶಿಸಲಾಗುತ್ತದೆ ಮತ್ತು ” OTP ಕಳುಹಿಸಿ ” ಕ್ಲಿಕ್ ಮಾಡಿ .

aa12

ಹಂತ 3: UIDAI ನಲ್ಲಿ ನೋಂದಾಯಿಸಲಾದ ನಿಮ್ಮ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ. ಒದಗಿಸಿದ ಜಾಗದಲ್ಲಿ OTP ಅನ್ನು ನಮೂದಿಸಿ ಮತ್ತು ” ಸಲ್ಲಿಸು ” ಕ್ಲಿಕ್ ಮಾಡಿ . ಹಂತ 4: ಆಧಾರ್‌ನೊಂದಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

 

aa13

8ನೇ ಕಂತಿನ ಹಣ ಬಿಡುಗಡೆ 

ಈಗಾಗಲೇ ಎಂಟನೇ ಕಂತಿನ ಹಣವನ್ನು ಕೂಡ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಕೊನೆಯ ವಾರದ ಒಳಗೆ ಈ ಹಣ ಪ್ರತಿಯೊಬ್ಬರ ಖಾತೆಗೂ ತಲುಪಲಿದೆ. ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.

 ಪೆಂಡಿಂಗ್ ಹಣ ಪಡೆಯಲು ಇಲ್ಲಿದೆ ಪರಿಹಾರ 

ಇದುವರೆಗೂ ಒಂದು ಕಂತಿನ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರ ಬ್ಯಾಂಕ್ ಖಾತೆಯೇ ಕಾರಣ ಎನ್ನಬಹುದು, ಆದ್ದರಿಂದ ಅಂತಹ ಮಹಿಳೆಯರು ಕೂಡಲೇ ಬ್ಯಾಂಕಿಗೆ ಭೇಟಿ ನೀಡಿ ಖಾತೆಗೆ ಅಗತ್ಯ ಇರುವ ಎಲ್ಲಾ ಅಪ್ಡೇಟ್ಸ್ ಗಳನ್ನು ಮಾಡಿಸಿ, ಅದರಲ್ಲೂ ಮುಖ್ಯವಾಗಿ ಎನ್ಪಿಸಿಐ ಮ್ಯಾಪಿಂಗ್, ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಲೇಬೇಕು. ಆಧಾರ್ ಕಾರ್ಡ್ ಹತ್ತು ವರ್ಷಗಳಷ್ಟು ಹಳೆಯದಾಗಿದ್ದರೆ ತಕ್ಷಣ ಅದನ್ನು ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರದಲ್ಲಿ ತಪ್ಪದೇ ಅಪ್ಡೇಟ್ ಮಾಡಿಸಿ. ಆಧಾರ್ ಕಾರ್ಡ್ ನಲ್ಲಿ ಹೆಸರು, ಅಡ್ರೆಸ್, ಲಿಂಗ, ಜನ್ಮ ದಿನಾಂಕ ಮೊದಲಾದ ವಿವರಗಳನ್ನು ನವೀಕರಣಗೊಳಿಸಬಹುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!