Gruhalakshmi – ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಲು ಅಧಿಕೃತ ದಿನಾಂಕ ನಿಗದಿ, ಇಲ್ಲಿದೆ ಸಂಪೂರ್ಣ ಮಾಹಿತಿ

gruhalakshmi payment date

ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme )  ಫಲಾನುಭವಿಗಳಿಗೆ ಪ್ರತಿ ತಿಂಗಳ ಕಂತಿನ ಹಣ ವಿಳಂಬವಾಗುತ್ತಿರುವುದರಿಂದ ಪ್ರತಿ ತಿಂಗಳ ನಿಗದಿತ ದಿನಾಂಕದೊಳಗೆ ವರ್ಗಾಯಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (  Lakshmi Hebbalkar ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ ವಿಳಂಬವಾಗಿ ಜಮಾ ಆಗುತ್ತಿರುವ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಈ ಕುರಿತು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಯಜಮಾನಿಯರ ಖಾತೆಗೆ ಹಣ ಜಮೆ ಆಗದಿರಲು ಕಾರಣ ಮುಖ್ಯ ಕಾರಣ ಕೆವೈಸಿ ತೊಂದರೆ, ಮತ್ತು ಇನ್ನಿತರ ತಾಂತ್ರಿಕ ತೊಂದರೆ ಆಗಿದೆ ಆದ್ದರಿಂದ ಹಣ ವರ್ಗಾವಣೆಯ ವಿಳಂಬ ಆಗಿದೆ ಎಂದರು . ಆದರೆ ಎಲ್ಲರಿಗೂ ಹಣ ಸಿಗಲಿದೆ. ಈ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ( Technicle Problems ) ಬಗೆಹರಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ ಎಂದು ತಿಳಿಸಿದ್ದಾರೆ.

laxmi hebbalkar

ಸರಕಾರದಿಂದ ಖಾತೆಗೆ ಹಣ ಬರಲು ಈ ಹಿಂದೆ 25 ದಿನ ಬೇಕಾಗುತ್ತಿತ್ತು. ಈಗ ಅದನ್ನ ಬಹಳ ಸರಳೀಕರಣ ಮಾಡಿದ್ದೇವೆ. ಸರಕಾರ ಟ್ರೆಶರಿಗೆ ಕಳುಹಿಸಿ ಅಲ್ಲಿಂದ ನಮ್ಮ ಇಲಾಖೆಯ ಪ್ರಧಾನ ಕಚೇರಿಯಿಂದ ಎಲ್ಲರಿಗೂ ಹಣ ಹೋಗುವಂತೆ ಮಾಡಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರತಿ ತಿಂಗಳ 15-20 ರ ದಿನಾಂಕಗಳ ನಡುವೆ ಹಣವನ್ನು ವರ್ಗಾಯಿಸುವುದಾಗಿ ಮಾಹಿತಿ ತಿಳಿದು ಬಂದಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ಇಪ್ಪತ್ತು ಲಕ್ಷಕ್ಕೂ ಹೆಚ್ಚು ಮಹಿಳೆಯರು ಸ್ವೀಕರಿಸಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದವರ ಖಾತೆಗೆ ಹಣವನ್ನು ವರ್ಗಾಯಿಸುವಲ್ಲಿ ಹಲವಾರು ಸಮಸ್ಯೆಗಳು ಕಂಡು ಬಂದಿವೆ. ಹಾಗಾಗಿ ಈ ಎಲ್ಲ ಸಮಸ್ಯೆಗಳನ್ನು ಆದಷ್ಟು ಬೇಗ ಸರಿಪಡಿಸಿ ನಿಗದಿತ ದಿನಾಂಕ ದೊಳಗೆ ಹಣವನ್ನು ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಕೆವೈಸಿ ಯ ಸಮಸ್ಯೆ ಗಳನ್ನು ಪರಿಹರಿಸುತ್ತ ಬಂದಿದ್ದೇವೆ ಹಾಗೆಯೇ ಇನ್ನು ಉಳಿದ ಸಮಸ್ಯೆಗಳನ್ನು ಕೂಡಾ ಆದಷ್ಟು ಬೇಗ ಪರಿಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಹಣ ವರ್ಗಾವಣೆ ಆಗಿಲ್ಲ ಎಂದು ಮಹಿಳೆಯರು ಬ್ಯಾಂಕ್ ಗಳ ಮುಂದೆ ಸಲು ಸಾಲಾಗಿ ನಿಂತು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಇದು ಕೂಡ ಒಂದು ಸಮಸ್ಯೆ ಯಾಗಿ ಬಿಟ್ಟಿದೆ. ಇದರ ಬಗ್ಗೆ ಯಾರೂ ಚಿಂತಿತರಾಗುವುದು ಬೇಡ ಆದಷ್ಟು ಬೇಗ ಸಮಸ್ಯೆಗಳನ್ನು ಬಗೆ ಹರಿಸಿ ನಿಮ್ಮ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – Loan Scheme – ಮಹಿಳೆಯರಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ, ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ – ಭಾಗ್ಯಲಕ್ಷ್ಮಿ ಬಾಂಡ್ ಗೆ 18 ವರ್ಷ, ಎಲ್ಲಾ ಹೆಣ್ಣು ಮಗುವಿಗೆ ಬರುತ್ತೆ ಬರೋಬ್ಬರಿ 1 ಲಕ್ಷ ರೂಪಾಯಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!