Gruhalakshmi – ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ

gurulakhmi

ಕಾಂಗ್ರೆಸ್ ಸರ್ಕಾರ (congress government )ಅಧಿಕಾರಕ್ಕೆ ಬರುವ ಮುನ್ನ ಬಹಳಷ್ಟು ಭರವಸೆಗಳನ್ನು ನೀಡಿತ್ತು. ಅದರಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪೂರ್ತಿ ಮಾಡುವಲ್ಲಿ ಯಶಸ್ಸು ಕಂಡಿದ್ದು, ಆದರೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಸದುಪಯೋಗವನ್ನು ಹಲವು ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ತಾಂತ್ರಿಕ ದೋಷಗಳ(technical issues) ಕಾರಣಕ್ಕಾಗಿ  ಖಾತೆಗೆ ಹಣ ಜಮಾ ಆಗಿಲ್ಲ. ಆದ ಕಾರಣ ಇದೀಗ ಸರ್ಕಾರ ಒಂದು ಪರಿಹಾರ ಹುಡುಕಿದೆ ಅದೇನೆಂದು ಈ ಕೆಳಗಡೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹ ಲಕ್ಶ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ:

 ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಮುಖ್ಯಮಂತ್ರಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿ, ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಹೀಗೆ ಮತ್ತಿತರ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಬರದಿದ್ದರೆ ಅಂತಹ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲಿ ಅದಾಲತ್ ನಡಸಿ ಡಿಸೆಂಬರ್ ಒಳಗೆ ಅವುಗಳೆಲ್ಲವುಗಳನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ಹಾಗಾಗಿ ಇನ್ನು ಗೃಹಲಕ್ಷ್ಮಿಯ ಹಣ ಬಂದಿಲ್ಲ ಎಂದು ಚಿಂತಿಸುತ್ತಿರುವವರಿಗೆ ಇದು ಒಂದು ಸಂತಸದ ಸುದ್ದಿಯಾಗಿದೆ. ಎಲ್ಲಾ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಡಿಸೆಂಬರ್ ಒಳಗಾಗಿ ಖಾತೆಗೆ ಬಂದು ಜಮಾ ಆಗಲಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ:27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಈ ಕೆಳಕಂಡಂತ ಸೂಚನೆಗಳನ್ನು ನೀಡಲಾಗಿದೆ.

1. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.
2. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.
3. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.

4. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.\

5. ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
– ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
– ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
– ಇ-ಕೆವೈಸಿ ಅಪ್‌ಡೇಟ್ ಮಾಡುವುದು.
– ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
– ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.

tel share transformed

6. ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ದಿನಾಂಕ:22.12.2023 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.

7. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನಾಂಕ:27.12.2023 ರಿಂದ 29.12.2023 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.

8. ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು, 9. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.

10. ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು. ಮೇಲೆ ತಿಳಿಸಿದಂತೆ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ಗಳನ್ನು ಆಯೋಜಿಸಿ ಯಶಸ್ವಿಗೊಳಿಸಲು ಸೂಚಿಸಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

 

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!