ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ಹಣವನ್ನು ಸರ್ಕಾರವು ಮಹಿಳೆಯರ ಖಾತೆಗೆ ಜಮೆ ಮಾಡುತ್ತಿದೆ. ಕಳೆದ ಐದು ತಿಂಗಳುಗಳಿಂದ ಪ್ರತಿ ತಿಂಗಳ ಹಣವನ್ನು ಸರ್ಕಾರವು ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್‌ನ್ಯೂಸ್ ನೀಡಿದ್ದಾರೆ.
ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಈಗಾಗಲೇ ದಸರಾ ಹಬ್ಬದ ಸಂದರ್ಭದಲ್ಲಿ ಒಂದು ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಇದೀಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆಯಾಗಲಿದೆ. ಈ ಹಬ್ಬಕ್ಕೆ ₹2,000 ಹಣವು ಫಲಾನುಭವಿ ಮಹಿಳೆಯರ ಖಾತೆ ಸೇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗಿದ್ದು, ಆಗಸ್ಟ್ ತಿಂಗಳ ಹಣ ದೀಪಾವಳಿಗೂ ಮುನ್ನ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಇನ್ನು ಸೆಪ್ಟೆಂಬರ್ ತಿಂಗಳ ಹಣ ಮಾತ್ರ ಬಾಕಿ ಉಳಿದಿದ್ದು, ಅದನ್ನು ಆದಷ್ಟು ಬೇಗ ಜಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.
“ಮೊದಲ ಬಾರಿಗೆ ಹಾಸನಾಂಬೆ ದೇವಿಯ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಲಿ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
“ದೇವರು ಎಲ್ಲರಿಗೂ ಸೌಭಾಗ್ಯವನ್ನು ಕರುಣಿಸಲಿ. ತಾಯಿಯ ದರ್ಶನಕ್ಕಾಗಿ ಜಿಲ್ಲಾಡಳಿತ ಉತ್ತಮ ವ್ಯವಸ್ಥೆ ಮಾಡಿದೆ. ಹಾಸನಾಂಬೆಯ ಮಹತ್ವದ ಬಗ್ಗೆ ಕೇಳಿದ್ದೆ. ದೇವರ ದರ್ಶನ ಪಡೆದಿದ್ದು ಬಹಳ ಖುಷಿ ನೀಡಿದೆ” ಎಂದು ಸಚಿವರು ತಿಳಿಸಿದರು. ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳು ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಶಕ್ತಿಯನ್ನು ನೀಡಿವೆ. ನಮ್ಮ ಸರ್ಕಾರಕ್ಕೆ ಈ ಯೋಜನೆಗಳಿಂದ ಸಾರ್ಥಕತೆಯ ಭಾವನೆ ಮೂಡಿದೆ ಎಂದರು.
ಗೃಹಲಕ್ಷ್ಮಿಯ ಫಲಾನುಭವಿಗಳ ಪಟ್ಟಿ ಬಿಡುಗಡೆ
ಗೃಹ ಲಕ್ಷ್ಮಿ 2೦೦೦ ರೂಪಾಯಿ ಫಲಾನುಭವಿಗಳ ಲಿಸ್ಟ್ ಲಿಂಕ್ ಇದು. ಜಿಲ್ಲಾ, ತಾಲೂಕು, ಪಂಚಾಯತಿ,ಗ್ರಾಮ ಆಯ್ಕೆ ಮಾಡಿಕೊಂಡು ನೋಡಿ
ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.karnataka.gov.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ


ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




