ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ತಾಲ್ಲೂಕು ಪಂಚಾಯಿತಿಯಿಂದ ನೇರ ಪಾವತಿ ಸಾಧ್ಯತೆ
ಕರ್ನಾಟಕ ಸರ್ಕಾರದ (Karnataka Government) ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಹುತೇಕ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶ ಹೊಂದಿದ್ದು, ಇದು ಕಾಂಗ್ರೆಸ್ ಸರ್ಕಾರದ (Congress Government) ಪ್ರಮುಖ ಭರವಸೆಯಾಗಿತ್ತು. ಆದರೆ, ಯೋಜನೆಯ ಹಣ ಪಾವತಿಯಲ್ಲಿ ತಾಂತ್ರಿಕ ಮತ್ತು ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಇದರಿಂದಾಗಿ, ರಾಜ್ಯದ ಲಕ್ಷಾಂತರ ಫಲಾನುಭವಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಣ ಪಾವತಿಯ ವಿಧಾನದಲ್ಲಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲಿದೆ? ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಈಗಾಗಲೇ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ವಿಳಂಬವಾಗಿರುವುದು ಮಹಿಳೆಯರಲ್ಲಿ ಆತಂಕ ಮೂಡಿಸಿದೆ. ಇದರ ಜೊತೆಗೆ, ಹಣ ಪಾವತಿಯ ವಿಧಾನದಲ್ಲಿಯೂ ಸರ್ಕಾರ ಬದಲಾವಣೆ ತರುವ ನಿರ್ಧಾರಕ್ಕೆ ಮುಂದಾಗಿದೆ. ಈ ಬದಲಾವಣೆಯ ಪ್ರಕಾರ, ಇದುವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ (Department of Women and Child Welfare) ನಿರ್ದೇಶಕರ ಮೂಲಕ ಹಣ ಪಾವತಿ ಮಾಡಲಾಗುತ್ತಿತ್ತು. ಆದರೆ ಹೊಸ ನಿಯಮ ಪ್ರಕಾರ, ರಾಜ್ಯ ಕಾರ್ಯದರ್ಶಿಯಿಂದ ತಾಲ್ಲೂಕು ಪಂಚಾಯಿತಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಮತ್ತು ಬಳಿಕ ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ.
ಪಾವತಿ ವಿಧಾನದಲ್ಲಿ ಬದಲಾವಣೆಗೆ ಕಾರಣ ಏನು?:
ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಕಾರ್ಯನಿರ್ವಹಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜವಾಬ್ದಾರಿಯಾಗಿತ್ತು. ಆದರೆ, ಈ ಯೋಜನೆಯ ವ್ಯಾಪ್ತಿ ದೊಡ್ಡದಾದಂತೆ, ಇಲಾಖೆಯ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಇದು ಸರಕಾರಕ್ಕೆ ನಿರ್ವಹಣೆಯ ಒತ್ತಡವನ್ನು ಉಂಟುಮಾಡಿದೆ. ಅಲ್ಲದೆ, ರಾಜ್ಯ ಸರ್ಕಾರದ (State Government) ಮೂಲಗಳ ಪ್ರಕಾರ, ಅರ್ಥಪೂರಕವಾಗಿ ಹಣ ಹಂಚಿಕೆ ಮತ್ತು ಜವಾಬ್ದಾರಿಯ ಹಂಚಿಕೆಗಾಗಿ ತಾಲ್ಲೂಕು ಪಂಚಾಯಿತಿಗಳನ್ನು ಈ ಕಾರ್ಯಕ್ಕೆ ಬಳಸಲು ನಿರ್ಧರಿಸಲಾಗಿದೆ.
ಪಾವತಿ ವಿಳಂಬವಾಗಿದಕ್ಕೆ ಮಹಿಳೆಯರ ಆಕ್ರೋಶ:
ಇತ್ತೀಚಿನ ಕೆಲವು ತಿಂಗಳ ಅವಧಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ (Money Payment) ಮೂರು ಕಂತುಗಳವರೆಗೆ ವಿಳಂಬವಾಗಿದೆ. ಈ ಕಾರಣಕ್ಕೆ ಲಕ್ಷಾಂತರ ಮಹಿಳೆಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲ ಶಾಸಕರೇ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾ, ಸರ್ಕಾರದ ಬಳಿ ಅಭಿವೃದ್ಧಿ ಕಾಮಗಾರಿಗಳಿಗೆ ಬೇಕಾದಷ್ಟು ಹಣವಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ಈಗ ಈ ಯೋಜನೆಯ ಹಣ ಪಾವತಿಯ ಮಾದರಿಯನ್ನೇ ಬದಲಾವಣೆ ಮಾಡಲು ಮುಂದಾಗಿದೆ.
ಯೋಜನೆ ನಿರ್ವಹಣಾ ಹೊರೆ ತಗ್ಗಿಸುವ ಯತ್ನ ನಡೆಯುತ್ತಿದೆ :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ (Department of Women and Child Welfare) ನಿರ್ದೇಶಕರಿಗೆ ಈಗಾಗಲೇ ಹಲವು ಯೋಜನೆಗಳನ್ನು ನಿರ್ವಹಿಸುವ ಹೊಣೆಗಾರಿಕೆಯಿದೆ. ಈ ಹೊರೆ ಇನ್ನು ಹೆಚ್ಚದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ತಾಲೂಕು ಪಂಚಾಯಿತಿಗಳ (Taluk Panchayath) ಮೂಲಕ ವಿತರಿಸುವ ಕ್ರಮ ಸರ್ಕಾರ ಕೈಗೊಳ್ಳುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಇದರಿಂದ ಅಕ್ರಮ ಸಾಧ್ಯತೆ ಹೆಚ್ಚಬಹುದೆಂಬ ಅನುಮಾನವೂ ವ್ಯಕ್ತವಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (Prime Minister Kisan Scheme) ಮಾದರಿಯಲ್ಲೇ ಹಣ ಪಾವತಿ :
ಹಾಲಿ ವ್ಯವಸ್ಥೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಂತೆ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುವ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ. ಇದರಂತೆ ಗೃಹಲಕ್ಷ್ಮಿ ಯೋಜನೆಯಲ್ಲೂ ನೇರ ಬ್ಯಾಂಕ್ ಖಾತೆಗೆ (Bank Account) ಹಣ ವರ್ಗಾವಣೆ ಮಾಡಬಹುದೆಂಬ ಪ್ರಶ್ನೆ ಉದ್ಭವಿಸಿದೆ. ರಾಜ್ಯ ಸರ್ಕಾರ ಇದೀಗ ಈ ಹೊಸ ಯೋಜನಾ ಮಾದರಿಯನ್ನು ಪರಿಗಣಿಸುತ್ತಾ, ವಿಭಿನ್ನ ರೀತಿಯ ವಿತರಣಾ ವ್ಯವಸ್ಥೆಯನ್ನು ಅನುಸರಿಸಲು ಮುಂದಾಗಿದೆ.
ಬದಲಾವಣೆ ಬಗ್ಗೆ ಅಧಿಕೃತ ಆದೇಶದ ನಿರೀಕ್ಷೆ :
ಈ ನಿರ್ಧಾರದ ಬಗ್ಗೆ ಅಂತಿಮ ಘೋಷಣೆ ಆಗಿಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Laksmi Hebbalkar) ಆರೋಗ್ಯ ಸುಧಾರಿಸಿದ ನಂತರ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಇದರಿಂದ ಯೋಜನೆ ಇನ್ನಷ್ಟು ಪಾರದರ್ಶಕವಾಗುತ್ತದೆಯಾ ಅಥವಾ ಕಾನೂನು ಬಿಕ್ಕಟ್ಟಿಗೆ ಕಾರಣವಾಗುತ್ತದೆಯಾ ಎಂಬುದು ಕಾದುನೋಡಬೇಕಾದ ವಿಚಾರ. ಈ ಬದಲಾವಣೆ ಮಹಿಳಾ ಫಲಾನುಭವಿಗಳಿಗೆ ಅನುಕೂಲವಾಗುತ್ತದೆಯಾ ಅಥವಾ ಮತ್ತಷ್ಟು ದೋಷಪೂರಿತ ವ್ಯವಸ್ಥೆ ಆಗುತ್ತದೆಯಾ ಎಂಬ ಪ್ರಶ್ನೆಗಳು ಮುಂದುವರೆದಿವೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




