ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(GruhaLakshmi Scheme) ಗೆ ಸಂಬಂಧಪಟ್ಟಂತೆ ಕೆಲವು ಪ್ರಶ್ನೆಗಳಿಗೆ ಉತ್ತರವನ್ನು ತಿಳಿಸಿಕೊಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆ ಶುರುವಾದಾಗಿನಿಂದಲೂ ಕೆಲವರಿಗೆ ಹಲವಾರು ಪ್ರಶ್ನೆಗಳು ಮತ್ತು ಗೊಂದಲಗಳು ಕಾಡುತ್ತಿರುತ್ತವೆ. ಆದರೆ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರವನ್ನು ಎಲ್ಲಿ ಹುಡುಕುವುದು ಎಂದುಕೊಂಡಿದ್ದರೆ, ಈ ಲೇಖನದಲ್ಲಿ ಅಂತಹ ಸಾಮಾನ್ಯ ಪ್ರಶ್ನೆಗಳಿಗೆ ಸರ್ಕಾರದಿಂದ ಉತ್ತರಗಳನ್ನು ನೀಡಿರುವುದರ ಬಗ್ಗೆ ನಿಮಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಲೇಖನವನ್ನು ಸಂಪೂರ್ಣವಾಗಿ ಓದುವುದರಿಂದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಗೊಂದಲಗಳಿಗೆ ಇಲ್ಲಿವೆ ಉತ್ತರ :
ಗೃಹಲಕ್ಷ್ಮಿ ಯೋಜನೆ ಎಂದರೆ ಹಲವರಿಗೆ 2000 ತೆಗೆದುಕೊಳ್ಳುವ ಒಂದು ಯೋಜನೆ ಎಂದು ಅಷ್ಟೇ ತಿಳಿದಿರುತ್ತದೆ. ಆದರೆ ಆ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳುವ ಮುಂಚೆ ಏನೆಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಬೇಕು?, ನೋಂದಣಿಯನ್ನು ಹೇಗೆ ಮಾಡಿಕೊಳ್ಳಬೇಕು?, ನೋಂದಣಿಯನ್ನು ಮಾಡಿಕೊಂಡ ನಂತರ ಏನೆಲ್ಲ ಮಾಡಬೇಕು?, ಹೇಗೆ ಹಣ ಜಮಾ ಆಗುತ್ತದೆ, ಹೀಗೆ ಹತ್ತು ಹಲವಾರು ಪ್ರಶ್ನೆಗಳು ಜನಸಾಮಾನ್ಯರನ್ನು ಕಾಡುತ್ತಿರುತ್ತವೆ. ಬಹು ನಿರೀಕ್ಷಿತ ಹಾಗೂ ಕಾತುರದಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (GruhaLakshmi Scheme) ನೋಂದಣಿ ಮಾಡಿಕೊಳ್ಳುವ ಮಹಿಳೆಯರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಗಳಾಗದಂತೆ ಕರ್ನಾಟಕ ಸರ್ಕಾರ (Karnataka Government) ಪ್ರಮುಖ ಮಾರ್ಗಸೂಚಿಗಳನ್ನು (Guidelines) ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ಮಾಡಿಕೊಳ್ಳಲು ಹೊಸ ಫೋನ್ ನಂಬರ್ ಬಿಡುಗಡೆ:
ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಲು ಈಗಾಗಲೇ ನಿಗದಿ ಪಡಿಸಿದ ನಂಬರ್ ಇದಾಗಿದೆ : 8147500500, ಇದರ ಜೊತೆಗೆ ಸರ್ಕಾರವು ಮತ್ತೊಂದು ನಂಬರನ್ನು ಅಪ್ಡೇಟ್ ಮಾಡಿದ್ದಾರೆ ಅದ್ಯಾವುದೆಂದರೆ : 8277000555. ಈ ಎರಡು ನಂಬರ್ ಗಳಿಗೂ ಕೂಡ ನೀವು ಮೆಸೇಜ್ ಮಾಡಿಕೊಂಡು, ಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ಮಾಡಿಕೊಳ್ಳಲು ದಿನಾಂಕ, ಸ್ಥಳ ಹಾಗೂ ಸಮಯವನ್ನು ಖಾತರಿಪಡಿಸಿಕೊಳ್ಳಬಹುದು.
ನಿಮ್ಮ ಪ್ರಶ್ನೆಗಳಿಗೆ ನಮ್ಮ ಉತ್ತರ :
ಗೃಹ ಲಕ್ಷ್ಮಿ ಯೋಜನೆ ಎಂದರೇನು?
“ಗೃಹಲಕ್ಷ್ಮಿ ಯೋಜನ” ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ.
ನಾನು ಈ ಯೋಜನೆಗೆ ಅರ್ಹಳೇ? :ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳು,
ಇದನ್ನೂ ಓದಿ: ನಕಲಿ ಅರ್ಜಿಗಳಿಂದ ಎಚ್ಚರ – ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಮಾಡಿ, ನಂತರ ಗೃಹಲಕ್ಷ್ಮಿ ಉಚಿತ 2000 ರೂ. ಯೋಜನೆಗೆ ಅರ್ಜಿ ಹಾಕಿ,
ಮನೆಯ ಯಜಮಾನಿ ಯಾರು?
ರೇಷನ್ ಕಾರ್ಡ್’ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನು ‘ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.
ಪಡಿತರ ಚೀಟಿಯಲ್ಲಿ ಅತ್ತೆ ಯಾಜಮಾನಿಯಾಗಿದ್ದು, ಸದಸ್ಯರ ಪಟ್ಟಿಯಲ್ಲಿ ಸೊಸೆಯ ಹೆಸರಿದ್ದು, ಸೊಸೆಯನ್ನೇ ಫಲಾನುಭವಿಯನ್ನಾಗಿಸುವ ಸೌಲಭ್ಯವಿದೆಯೇ?
ಇಲ್ಲ, ಪಡಿತರ ಚೀಟಿಯಲ್ಲಿಯ(Ration card) ಯಜಮಾನಿಯೇ ಈ ಯೋಜನೆ ಫಲಾನುಭವಿಯಾಗಿರುತ್ತಾರೆ.
ಕುಟುಂಬದ ಯಜಮಾನಿಯು ಇತ್ತೀಚೆಗೆ ನಿಧನರಾದರೆ, ಈ ಸನ್ನಿವೇಶದಲ್ಲಿ ಏನು ಮಾಡಬಹುದು?
ಪಡಿತರ ಚೀಟಿಯಲ್ಲಿ ಅಗತ್ಯ ತಿದ್ದು ಪಡಿಯಾದ ನಂತರ ನೊಂದಾಯಿಸಬಹುದು. ಮೊದಲನೆಯದಾಗಿ ಮರಣ ಪತ್ರವನ್ನು ಮಾಡಿಸಬೇಕಾಗುತ್ತದೆ.
ಕುಟುಂಬದ ಯಜಮಾನಿಯು ಮರಣ ಹೊಂದಿದಲ್ಲಿ ಮುಂದಿನ ಕ್ರಮವೇನು?
ಕುಟುಂಬದ ಯಜಮಾನಿಯು ಮರಣ ಹೊಂದಿದಲ್ಲಿ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುವುದು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಕುಟುಂಬದ ಮುಖ್ಯಸ್ಥರು ಮೃತ ಪಟ್ಟರು ಸಹ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆಯದಿರುವ ಪಡಿತರ ಚೀಟಿಗಳನ್ನು ಪರಿಗಣಿಸಲಾಗುತ್ತದೆಯೇ?
ನಿಮ್ಮ ಸಮೀಪದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಕಛೇರಿಯನ್ನು
ಸಂಪರ್ಕಿಸುವುದು.
ಈ ಯೋಜನೆಗೆ ನೋಂದಾಯಿಸುವುದು ಹೇಗೇ?
ಈ ಯೋಜನೆಯನ್ನು ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಿಬಿಎಂಪಿ ವಾರ್ಡ್ ಕಛೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳ ಮೂಲಕ ಉಚಿತವಾಗಿ ನೋಂದಾಯಿಸಬಹುದು.
ಅಥವಾ ಸ್ಥಳೀಯ ಮಟ್ಟದಲ್ಲಿ ಸರ್ಕಾರದಿಂದ ನೇಮಕವಾದ ಪ್ರಜಾ ಪ್ರತಿನಿಧಿಗಳು ಮನೆಮನಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.
ಇದನ್ನೂ ಓದಿ: Gruha lakshmi – ಕೇವಲ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೆ ಗೃಹಲಕ್ಷ್ಮಿಯ ನೋಂದಣಿ ಮಾಡಿ, ಟೋಕನ್ ಮೆಸೇಜ್ ಪಡೆಯಿರಿ
ಈ ಯೋಜನೆಯ ಪ್ರಯೋಜನವನ್ನು ಸೇವಾ ಕೇಂದ್ರಗಳಿಗೆ ಹೋಗದೇ ಪಡೆಯಬಹುದೇ? : ಹೌದು, ಸ್ಥಳೀಯ ಮಟ್ಟದಲ್ಲಿ ಸರ್ಕಾರದಿಂದ ನೇಮಕಗೊಂಡ ಪ್ರಜಾಪ್ರತಿನಿಧಿಗಳು ಮನೆಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಲಿದ್ದಾರೆ.
ಈ ಯೋಜನೆ ಪಡೆಯಲು ಯಾವ ದಾಖಲೆಗಳನ್ನು ಸಲ್ಲಿಸಬೇಕು?
ರೇಷನ್ ಕಾರ್ಡ್ ಪ್ರತಿ, ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಛಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಆಗತ್ಯವಿದೆ.
ಯೋಜನೆಗೆ ನೋಂದಾಯಿಸುವಾಗ ಶುಲ್ಕ ಪಾವತಿಸಬೇಕೆ?
ಈ ಯೋಜನೆಯ ನೋಂದಣಿ ಸಂಪೂರ್ಣ ಉಚಿತ. (ಯಾವುದೇ ಕಾರಣಕ್ಕೂ ಯಾರಿಗೂ ಹಣ ನೀಡಬೇಡಿ).
ಈ ಯೋಜನೆಗೆ ನೋಂದಾಯಿಸಲು ಕೊನೆಯ ದಿನಾಂಕ ಯಾವಾಗ?
ಈ ಯೋಜನೆಗೆ ಯಾವುದೇ ಕೊನೆಯ ದಿನಾಂಕದ ಮಿತಿಯಿಲ್ಲ, ಯಾವುದೇ ಸಮಯದಲ್ಲಿ ಬೇಕಿದ್ದರೂ ನೋಂದಾಯಿಸಬಹುದು.
ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಅರ್ಹರೇ?
ಇಲ್ಲ, ಸದ್ಯದ ಮಾರ್ಗಸೂಚಿ ಪುಕಾರ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಅರ್ಹರಲ್ಲ.
ಕುಟುಂಬದ ಮುಖ್ಯಸ್ಮರಿಗಾಗಿ ನಾವು ಈಗ ರೇಷನ್ ಕಾರ್ಡ್ ನಲ್ಲಿ ಬದಲಾವಣೆಗಳನ್ನು ಮಾಡಬಹುದೇ. (ಉದಾ: ಪತಿ ಕುಟುಂಬದ ಮುಖ್ಯಸ್ಥ)
ನಿಮ್ಮ ಸಮೀಪದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಕಛೇರಿಯನ್ನು
ಸಂಪರ್ಕಿಸುವುದು.
ನೋಂದಣಿ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?
ಹೌದು, ನೋಂದಣಿ ಸಮಯದಲ್ಲಿ ಮೆಸೇಜ್/ಎಸ್.ಎಂ.ಎಸ್ ಅನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ.
ಫಲಾನುಭವಿಗಳಿಗೆ ಹಣ ಹೇಗೆ ತಲುಪುತ್ತದೆ?
ಅರ್ಹ ಕುಟುಂಬದ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ (RTGS) ಮೂಲಕ ಮಾಸಿಕ ರೂ. 2000/- ವಿತರಿಸಲಾಗುತ್ತದೆ.
ಕುಟುಂಬದ ಯಜಮಾನಿ ಬೇರೆ ಸದಸ್ಯರ ಬ್ಯಾಂಕ್ ಖಾತೆ ನೀಡಬಹುದಾ?
ಇಲ್ಲ. ಕುಟುಂಬದ ಯಜಮಾನಿ ತಮ್ಮದೇ ಬ್ಯಾಂಕ್ ಖಾತೆಯನ್ನು ನೀಡಬೇಕು.
ಗಂಡ ಮತ್ತು ಹೆಂಡತಿ ಜಂಟಿ ಖಾತೆಯನ್ನು ಹೊಂದಿದ್ದರೆ, ಜಂಟಿ ಖಾತೆ ವಿವರಗಳನ್ನು ನೊಂದಾಯಿಸಲು ಒದಗಿಸಬಹುದೇ?
ಇಲ್ಲ, ಯೋಜನೆಯಡಿ ನೊಂದಾಯಿಸಿಕೊಳ್ಳುವವರು ಹೊಸ ಬ್ಯಾಂಕ್ ಖಾತೆಯನ್ನು ತೆರೆದು ಪಾಸ್ ಪುಸ್ತಕದ ಪ್ರತಿಯನ್ನು ಒದಗಿಸಬೇಕು.
ಮಹಿಳೆಯ ಪತಿ ಅಥವಾ ಪುತ್ರ ಜಿಎಸ್‌ಟಿ ಪಾವತಿದಾರ ಆಗಿದ್ದರೆ ಯೋಜನೆಯ ಹಣ ಸಿಗುತ್ತದೆಯೇ?
ಇಲ್ಲ
ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಲು ಮೆಸೇಜ್ ಕಳುಹಿಸಿದ ನಂತರ ಸರ್ಕಾರದಿಂದ ನಿಮಗೆ ಕೆಲವೊಮ್ಮೆ ಏಕೆ ಮೆಸೇಜ್ ಬರುವುದಿಲ್ಲ?
ನೋಂದಣಿ ಮಾಡಿಕೊಳ್ಳುವಾಗ ಬ್ಯಾಂಕ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆ ಸರಿಯಾಗಿ ಇದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲದಿಲ್ಲ ಒಟಿಪಿ ಬರುತ್ತಿಲ್ಲ
ನಿಮ್ಮ ಬಳಿ ಬೇಸಿಕ್ ಮೊಬೈಲ್ ಸೆಟ್ ಇದ್ದರೆ ಆ ಫೋನ್‌ನಲ್ಲಿರುವ ಮೆಸೇಜ್ ಬ್ಯಾಕ್ಸ್ ಫುಲ್ ಆಗಿದ್ದರೆ ನೋಂದಣಿ ಬಗ್ಗೆ ಮಾಹಿತಿ ಅಥವಾ ಒಟಿಪಿ ಬರುವುದಿಲ್ಲ. ಹೀಗಾಗಿ ಮೆಸೇಜ್ ಬಾಕ್ಸ್ ಫುಲ್ ಆಗಿದ್ದರೆ ಹಳೆಯ ಮೆಸೇಜ್‌ಗಳನ್ನು ಡಿಲೀಟ್ ಮಾಡಿ. ನಿಮ್ಮ ಮೊಬೈಲ್‌ನಲ್ಲಿ ಇಂಟರ್‌ನೆಟ್ ಪ್ಯಾಕ್ ಇದೆಯೇ ಎಂಬುದನ್ನು ಮೊದಲ ಖಚಿತಪಡಿಸಿಕೊಳ್ಳಿ. ಒಂದು ವೇಳೆ ನೆಟ್ ಇಲ್ಲದಿದ್ದರೆ ರಿಚಾರ್ಜ್ ಮಾಡಿಸಿಕೊಳ್ಳಿ.
ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ನಿಮ್ಮ ಹೆಸರು ಬೇರೆ ಬೇರೆ ಇದ್ದರೆ ಹಣ ಬರುತ್ತದೆಯೇ?
ಇಲ್ಲ, ಒಂದು ವೇಳೆ ಹೆಸರುಗಳು ಬೇರೆ ಬೇರೆ ಇದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂಪಾಯಿ ಬರುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯ ನಂದಣಿಗೆ ಮೆಸೇಜ್ ಕಳುಹಿಸದಿದ್ದರೂ ಕೂಡ ನೊಂದಣಿಯನ್ನು ಮಾಡಿಕೊಳ್ಳಬಹುದೇ?
ಹೌದು, ನಿಮಗೆ ಒಂದು ವೇಳೆ ಮೆಸೇಜ್ ಕಳುಹಿಸಲು ಸಾಧ್ಯವಾಗದಿದ್ದರೆ ನೀವು ಗ್ರಾಮವನ್, ಬೆಂಗಳೂರು ಒನ್, ಬಾಪೂಜಿ ಸೇವಾ, ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳಲು ಮೆಸೇಜ್ ಕಳುಹಿಸಿದ ನಂತರ ನಿಮಗೆ ಸರ್ಕಾರದಿಂದ ಸ್ವೀಕೃತ ಮೆಸೇಜ್ ಬರೆದಿದ್ದರೆ ಏನು ಮಾಡಬೇಕು?
ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ ಸೇವಾ ಸಿಂಧುವಿನ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. ನಂತರ ನಿಮ್ಮ ರೇಷನ್ ಕಾರ್ಡ ನಂಬರನ್ನು ಕೇಳಲಾಗುತ್ತದೆ ಅದನ್ನು ಹಾಕಿದರೆ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳಲು ನಿಗದಿಪಡಿಸಿದ ಸ್ಥಳ, ದಿನಾಂಕ ಹಾಗೂ ಸಮಯವನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆ ನೊಂದಣಿ ವೇಳಾಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ ಸೇವಾ ಸಿಂಧುವಿನ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
https://sevasindhugs1.karnataka.gov.in/gl-stat-sns/

ಹಂತ 2: ನಂತರ ನಿಮ್ಮ ಪಡಿತರ ಚೀಟಿ(Ration card)ಯ 12 ಸಂಖ್ಯೆಗಳನ್ನು ನಮೂದಿಸಬೇಕು. ಕ್ಲಿಯರ್ ಮಾಡಲು ಹಳದಿ ಕಲರ್ ಲೈನ್ ಅನ್ನು ಹಸಿರು ಲೈನಿನ್ ಮದ್ಯ ಭಾಗಕ್ಕೆ ತಂದು ನಿಲ್ಲಿಸಬೇಕು ನಂತರ Captcha ಕ್ಲಿಯರ್ ಆಗುತ್ತೆ. ನಂತರ fetch RC details ಮೇಲೆ ಕ್ಲಿಕ್ ಮಾಡಿ

ಹಂತ 4: ನಂತರ ಪುಟದಲ್ಲಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳಲು ಸ್ಥಳ, ದಿನಾಂಕ ಹಾಗೂ ಸಮಯವನ್ನು ನೀಡಲಾಗಿರುತ್ತದೆ.

ಈ ಸ್ಥಳ, ದಿನಾಂಕ ಹಾಗೂ ಸಮಯವನ್ನು ನೋಡಿಕೊಂಡು, ನೀವು ಬೇಕಾದ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ತಿಳಿಸಲಾದ ಸರ್ಕಾರಿ ಕೇಂದ್ರಕ್ಕೆ ತೆರಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ಗೆ ಕೂಡ ಹಣವು ಜಮಾ ಆಗಲಿದೆ. ಹೀಗೆ ನೀವು ಮೇಲಿನ ಹಂತಗಳನ್ನು ಪರಿಶೀಲಿಸಿಕೊಂಡು ಗೃಹಲಕ್ಷ್ಮಿ ಯೋಜನೆ ನೋಂದಣಿಯ ವೇಳಾಪಟ್ಟಿಯ ವಿವರವನ್ನು ತಿಳಿದುಕೊಳ್ಳಬಹುದಾಗಿದೆ.
ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಲು ಮಹಿಳೆಯರಿಗೆ ಯಾವುದೇ ಸಮಸ್ಯೆಗಳು ಆಗದಂತೆ ಇವಿಷ್ಟು ಪ್ರಶ್ನೆ ಉತ್ತರಗಳನ್ನು ಸರ್ಕಾರದಿಂದ ಒದಗಿಸಿದ್ದಾರೆ. ನಿಮಗೇನಾದರೂ ಇನ್ನೂ ಗೊಂದಲವಿದ್ದಲ್ಲಿ ಈ ಕೆಳಗಿನ ಸಂಖ್ಯೆಗೆ ಕಾಲ್ ಮಾಡುವ ಮೂಲಕ ಬಗೆಹರಿಸಿಕೊಳ್ಳಿ : 1902. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group








