RECRUITMENT

ರಾಜ್ಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಗ್ರೀನ್ ಸಿಗ್ನಲ್, ಇಲ್ಲಿದೆ ಅಧಿಕೃತ ಆದೇಶ.!

WhatsApp Group Telegram Group

ಬೆಂಗಳೂರು: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಒಂದು ಶುಭ ಸುದ್ದಿಯನ್ನು ನೀಡಿದೆ. 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಅವರ ಕಾರ್ಯಭಾರಕ್ಕೆ (Workload) ಅನುಗುಣವಾಗಿ ಮುಂದುವರಿಸಲು ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ, ಯುಜಿಸಿ (UGC) ವಿದ್ಯಾರ್ಹತೆ ಹೊಂದಿರುವ ಹೊಸ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರಾಗಿ ಆಯ್ಕೆ ಮಾಡಿಕೊಳ್ಳಲು ಸಹ ಅನುಮತಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಆದೇಶದ ವಿವರಗಳು ಮತ್ತು ಷರತ್ತುಗಳು:

ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ, ಮಾನ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀಡಿರುವ ಕಾನೂನು ಅಭಿಪ್ರಾಯದಂತೆ ಹಾಗೂ ನ್ಯಾಯಾಲಯದ ಆದೇಶಗಳಿಗೆ ಒಳಪಟ್ಟು ಈ ಕ್ರಮ ಕೈಗೊಳ್ಳಲಾಗಿದೆ.

  1. ಹಾಲಿ ಉಪನ್ಯಾಸಕರ ಮುಂದುವರಿಕೆ: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ, ರಿಟ್ ಅಪೀಲು ಸಂಖ್ಯೆ: 1578/2024 ರಲ್ಲಿ ಮಾನ್ಯ ನ್ಯಾಯಾಲಯವು ದಿನಾಂಕ: 09-09-2025 ರಂದು ನೀಡಿದ ಮಧ್ಯಂತರ ಆದೇಶದ ಅವಲೋಕನಗಳಿಗೆ ಒಳಪಟ್ಟು, 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಅವರ ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಲು ಆದೇಶಿಸಲಾಗಿದೆ.
  2. ಹೊಸ ಉಪನ್ಯಾಸಕರ ನೇಮಕಾತಿ: ಹಾಲಿ ಉಪನ್ಯಾಸಕರನ್ನು ಮುಂದುವರಿಸಿದ ನಂತರವೂ ಹೆಚ್ಚುವರಿ ಕಾರ್ಯಭಾರ ಉಳಿದಿದ್ದಲ್ಲಿ, ಅಂತಹ ಕಾರ್ಯಭಾರಕ್ಕೆ ಎದುರಾಗಿ ಹೊಸ ನೇಮಕಾತಿ ಮಾಡಿಕೊಳ್ಳಬಹುದು.
  3. ಅರ್ಹತೆ: ನ್ಯಾಯಾಲಯದ ಮಧ್ಯಂತರ ಆದೇಶದ ಅನುಸಾರ, ಪ್ರಸ್ತುತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಯು.ಜಿ.ಸಿ. (UGC) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
TEACHERS RECRUITMENT

ಈ ಮೂಲಕ ರಾಜ್ಯ ಸರ್ಕಾರವು ಹಾಲಿ ಉಪನ್ಯಾಸಕರಿಗೆ ಸಮಾಧಾನ ನೀಡಿದ್ದು, ಜೊತೆಗೆ ಶೈಕ್ಷಣಿಕ ಕಾರ್ಯಭಾರಕ್ಕೆ ಅನುಗುಣವಾಗಿ ಹೊಸ ಯುಜಿಸಿ ಅರ್ಹತಾ ಅಭ್ಯರ್ಥಿಗಳ ನೇಮಕಕ್ಕೂ ಹಸಿರು ನಿಶಾನೆ ತೋರಿಸಿದೆ.

WhatsApp Image 2025 09 05 at 11.51.16 AM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories