WhatsApp Image 2025 10 14 at 12.43.08 PM

ರಾಜ್ಯದಲ್ಲಿ ಅ.18ರವರೆಗೆ ಭರ್ಜರಿ ವರುಣನ ಆರ್ಭಟ| ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

Categories:
WhatsApp Group Telegram Group

ಮುಂಗಾರು ಮಳೆಯು ಕೊನೆಯ ಹಂತದಲ್ಲಿದ್ದು, ಚಳಿಗಾಲದ ಆಗಮನಕ್ಕೆ ಸಮಯ ಸನ್ನಿಹಿತವಾಗುತ್ತಿದೆ. ಆದರೂ, ಕರ್ನಾಟಕದ ಅನೇಕ ಭಾಗಗಳಲ್ಲಿ ಆಗಾಗ ಮಳೆ ಸುರಿಯುತ್ತಿದೆ. ನೆರೆಯ ತೆಲಂಗಾಣದಲ್ಲಿ (Telangana) ಕೂಡ ಮುಂದಿನ ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿತ್ತು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದೀಗ ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೋಮವಾರ ನೀಡಿದ್ದ ಎಚ್ಚರಿಕೆಯನ್ನು ವಿಸ್ತರಿಸಲಾಗಿದೆ. ನೈಋತ್ಯ ಮಾನ್ಸೂನ್ ಹಿಂತೆಗೆತ ಪ್ರಕ್ರಿಯೆ ನಡೆಯುತ್ತಿರುವುದರಿಂದ ಈ ಮಳೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಈಶಾನ್ಯ ಮಾನ್ಸೂನ್ ಆರಂಭವಾಗುವ ಮುನ್ನವೇ ಮಳೆ ಚುರುಕುಗೊಂಡಿದೆ.

ಅಕ್ಟೋಬರ್ 13ರ ಸಂಜೆಯ ವೇಳೆಗೆ ನೈಋತ್ಯ ಮಾನ್ಸೂನ್ ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಿಂದ ಹಿಂತೆಗೆದುಕೊಂಡಿದ್ದು, ಮುಂದಿನ ವಾರದೊಳಗೆ ಇಡೀ ರಾಜ್ಯದಿಂದ ಮಾನ್ಸೂನ್ ಹಿಂದೆ ಸರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿ ಜಾಗರೂಕರಾಗಿರುವಂತೆ ಸೂಚಿಸಿದೆ.

2025ರ ಮಳೆ ಪ್ರಮಾಣದ ವಿವರ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು (KSNDMC) ಈ ವರ್ಷದ ಮಳೆ ವಿವರಗಳನ್ನು ಹಂಚಿಕೊಂಡಿದೆ. ಪ್ರಸಕ್ತ ಮಾನ್ಸೂನ್ ಋತುವಿನಲ್ಲಿ ಮಳೆ ಬಂದಿದ್ದರೂ, ಅಕ್ಟೋಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕುಸಿದಿದ್ದು, ಅಲ್ಲಿ ಕ್ರಮವಾಗಿ ಶೇ. 69, ಶೇ. 21 ಮತ್ತು ಶೇ. 49 ರಷ್ಟು ಮಳೆ ಕೊರತೆ ದಾಖಲಾಗಿದೆ. ಆದರೆ, ಬೆಂಗಳೂರು ನಗರವನ್ನು ಒಳಗೊಂಡಿರುವ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ.

ಇಂದು ಮತ್ತು ನಾಳೆ ಮಳೆ ಅಲರ್ಟ್!

ಹವಾಮಾನ ಇಲಾಖೆಯು ಇಂದು ಮತ್ತು ನಾಳೆ (ಅಕ್ಟೋಬರ್ 14, 15) ಒಟ್ಟು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಈ ಎಚ್ಚರಿಕೆಯು ದಕ್ಷಿಣ ಕನ್ನಡ, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories