ಕರ್ನಾಟಕದ ಉತ್ತರ ಒಳನಾಡು ಪ್ರದೇಶದಲ್ಲಿ ಮಳೆ ಚಟುವಟಿಕೆ ಹೆಚ್ಚಾಗಿದೆ. ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಈ ಪ್ರದೇಶದ ಎಂಟು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ (Yellow Alert) ಘೋಷಿಸಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಕೆಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರೀ ಮಳೆ ಎಚ್ಚರಿಕೆ ಇರುವ ಜಿಲ್ಲೆಗಳು:
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ.
ಸಾಧಾರಣ ಮಳೆ ಆಗಬಹುದಾದ ಜಿಲ್ಲೆಗಳು:
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ.
ಬೆಂಗಳೂರು ನಗರದ ಹವಾಮಾನ:
ಸೆಪ್ಟೆಂಬರ್ 14 ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವನ್ನು ಈ ಕೆಳಗಿನಂತೆ ದಾಖಲಿಸಲಾಗಿದೆ:
- HAL ವಿಮಾನ ನಿಲ್ದಾಣ: ಗರಿಷ್ಠ 28.5°C, ಕನಿಷ್ಠ 21.2°C
- ನಗರ ಪ್ರದೇಶ: ಗರಿಷ್ಠ 28.0°C, ಕನಿಷ್ಠ 21.5°C
- KIAL ವಿಮಾನ ನಿಲ್ದಾಣ: ಗರಿಷ್ಠ 28.3°C
- GKVK ಪ್ರದೇಶ: ಗರಿಷ್ಠ 28.0°C, ಕನಿಷ್ಠ 18.0°C

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.