33

ಕರ್ನಾಟಕದ 3 ಜಿಲ್ಲೆಗಳಲ್ಲಿ ಮಳೆ, ಉಳಿದ ಕಡೆ ಚಳಿ: ಭಾರತೀಯ ಹವಾಮಾನ ಇಲಾಖೆ ವರದಿ

Categories:
WhatsApp Group Telegram Group

ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಹಲವು ಪ್ರದೇಶಗಳಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಮುಂದಿನ ಐದು ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೆ, ಹವಾಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಗಳಿಲ್ಲ ಎಂದು ತಿಳಿಸಿದೆ. ನವೆಂಬರ್ 13ರ (ಗುರುವಾರ) ಹವಾಮಾನ ವರದಿಯ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ ಮಾನ್ಸೂನ್ ಮಳೆ ದುರ್ಬಲಗೊಂಡಿದೆ. ಅದೇ ರೀತಿ, ರಾಜ್ಯದಾದ್ಯಂತ ಈಶಾನ್ಯ ಮಾನ್ಸೂನ್ ಸಹ ದುರ್ಬಲವಾಗಿತ್ತು. ರಾಜ್ಯದ ಬಹುತೇಕ ಕಡೆ ಒಣಹವೆ ಇದ್ದು, ಕೆಲವೆಡೆ ಸಾಧಾರಣ ಮಳೆ ಸುರಿಯುತ್ತಿದೆ. ಕನಿಷ್ಠ ತಾಪಮಾನದಲ್ಲಿ ರಾಜ್ಯದಾದ್ಯಂತ ದೊಡ್ಡ ಬದಲಾವಣೆ ಇಲ್ಲ. ಆದರೆ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಐಎಂಡಿ ವರದಿ ಮಾಡಿದೆ.

ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ:

ರಾಜ್ಯದಲ್ಲಿ ಈಶಾನ್ಯ ಮಾನ್ಸೂನ್ ದುರ್ಬಲವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ನವೆಂಬರ್ 13ರ ಗುರುವಾರದಂದು ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಇನ್ನು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ನವೆಂಬರ್ 18ರ ವರೆಗೆ ಮಳೆ:

ನವೆಂಬರ್ 18ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಹವಾಮಾನ ಹೀಗಿದೆ:

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಆವರಿಸುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್ ಇರಬಹುದು. ಮುಂದಿನ 48 ಗಂಟೆಗಳ ಅವಧಿಯಲ್ಲೂ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.

ಈ ಭಾಗಗಳಲ್ಲಿ ಒಣಹವೆ ಮುಂದುವರಿಕೆ:

ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಅತಿ ಕಡಿಮೆ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories