rain alert sept 27

Heavy Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ವ್ಯಾಪಕ ಮಳೆ: ಯೆಲ್ಲೊ ಅಲರ್ಟ್

Categories:
WhatsApp Group Telegram Group

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೆಪ್ಟೆಂಬರ್ 27 ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

ಯಾವ ದಿನ, ಯಾವ ಜಿಲ್ಲೆಗೆ ಎಚ್ಚರಿಕೆ?

ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ವಿವರ ಇಲ್ಲಿದೆ:

ಸೆಪ್ಟೆಂಬರ್ 27 (ಶುಕ್ರವಾರ): ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 28 (ಶನಿವಾರ): ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿದರೆ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 29 (ಭಾನುವಾರ): ಬಾಗಲಕೋಟೆ, ಬೆಳಗಾವಿ, ಬೀದರ್, ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆ

ಉತ್ತರ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.

ಈ ನಡುವೆ, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ 6 ಸೆಂ.ಮೀ., ಯಾದಗಿರಿ ಜಿಲ್ಲೆಯ ಹುಣಸಗಿ, ಕಕ್ಕೇರಿ, ಕೆಂಬಾವಿ ಹಾಗೂ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ತಲಾ 5 ಸೆಂ.ಮೀ., ಮತ್ತು ಬೀದರ್‌ನ ಔರಾದ್‌ನಲ್ಲಿ 4 ಸೆಂ.ಮೀ. ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ದಿಢೀರ್ ಮಳೆ: ಶುಕ್ರವಾರ ದಕ್ಷಿಣ ಕನ್ನಡದ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಬೆಳಗ್ಗೆ ಮಾತ್ರ ಮಳೆ ಬಂದು ಕಣ್ಮರೆಯಾಗುತ್ತಿತ್ತು. ಆದರೆ ಶುಕ್ರವಾರದ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರ ಪ್ರದೇಶಗಳಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳ ಮೇಲೆ ನೀರು ನಿಂತ ದೃಶ್ಯಗಳು ಕಂಡುಬಂದವು. ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೂ ದಿಢೀರ್ ಮಳೆ ತೊಂದರೆ ಉಂಟುಮಾಡಿದೆ.

ಅಕ್ಟೋಬರ್ 4ರವರೆಗೆ ಮಳೆಯ ಸಾಧ್ಯತೆ

ಬಂಗಾಳಕೊಲ್ಲಿಯ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆಯ ಪ್ರಮಾಣ ಕೊಂಚ ಹೆಚ್ಚಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಅಕ್ಟೋಬರ್ 4ರ ವರೆಗೆ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ವ್ಯವಸ್ಥೆಯು ಸೆಪ್ಟೆಂಬರ್ 28 ರಂದು ಮಹಾರಾಷ್ಟ್ರ ಪ್ರವೇಶಿಸಿ ಮುಂಬೈ ಕರಾವಳಿಯ ಕಡೆಗೆ ಸಾಗುವ ಸಾಧ್ಯತೆಯಿದ್ದು, ಮುಂಬೈನಿಂದ ಕೇರಳದ ಕರಾವಳಿ ತೀರದ ವರೆಗೆ ಮಳೆಯಾಗುವ ಸಂಭವವಿದೆ. ಮುಂಗಾರು ಮಳೆ ದುರ್ಬಲಗೊಂಡ ನಂತರ ಹಿಂಗಾರು ಮಳೆಯ ಆರಂಭದ ಸಾಧ್ಯತೆಯೂ ಇದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories