ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 19, 2025 ರಂದು ಶಾಲೆಗಳು, ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ನಿರಂತರವಾದ ಧಾರಾಕಾರ ಮಳೆಯಿಂದ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕೊಡಗು ಜಿಲ್ಲೆ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟರಾಜ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ, ಇದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸಲಾಗುವುದು.
ಬೆಳಗಾವಿ ಜಿಲ್ಲೆ
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿರುವ ಕಾರಣ, ಜಿಲ್ಲೆಯ ಎಂಟು ತಾಲೂಕುಗಳಾದ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ಸವದತ್ತಿ, ರಾಮದುರ್ಗ, ಚಿಕ್ಕೋಡಿ ಮತ್ತು ಹುಕ್ಕೇರಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದರ ಜೊತೆಗೆ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿಯ ಪದವಿ ಪೂರ್ವ ಕಾಲೇಜುಗಳಿಗೂ ರಜೆ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆ
ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯಿಂದ ಉಂಟಾಗುವ ತೊಂದರೆಯನ್ನು ಹೊಂದಾಣಿಕೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲೂಕುಗಳ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಪ್ರಕಾರ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್ 19, 2025 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.