WhatsApp Image 2025 09 05 at 00.31.23 cd42e2ff

Heavy Rain: ಇಂದಿನಿಂದ ಮತ್ತೇ ಮಳೆ ಆರ್ಭಟ ಶುರು, ಸೆ. 9 ರವರೆಗೆ ಈ ಪ್ರದೇಶಗಳಲ್ಲಿ ಭಾರಿ ಮಳೆ ಮುನ್ಸೂಚನೆ.!

Categories:
WhatsApp Group Telegram Group

IMD ಹವಾಮಾನ ಮುನ್ಸೂಚನೆ: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ತನ್ನ ಸಾಮರ್ಥ್ಯವನ್ನು ತೋರಿಸುತ್ತಿದೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳಲ್ಲಿ ಗಂಡಾಂತರಕಾರಿ ಪರಿಸ್ಥಿತಿ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 9 ರವರೆಗೆ, ಅಂದರೆ ಮುಂದಿನ 5 ದಿನಗಳ ಕಾಲ, ಗುಡುಗು-ಮಿಂಚಿನೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಯಾವ ಭಾಗಗಳಿಗೆ ಈ ಎಚ್ಚರಿಕೆ ಇದೆ ಎಂಬ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ಅನೇಕ ಪ್ರದೇಶಗಳಲ್ಲಿ ಮಧ್ಯಮ ಮಟ್ಟದ ಮಳೆ ಆಗಬಹುದು, ಆದರೆ ಕೆಲವೆಡೆಗಳಲ್ಲಿ ಬಿರುಗಾಳಿ ಮತ್ತು ಚಂಡಮಾರುತದೊಂದಿಗೆ ಮಳೆ ಸುರಿಯುವ ಸಂಭವವೂ ಇದೆ. ಈಗಾಗಲೇ ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿ ಜೀವಹಾನಿ ಸಂಭವಿಸಿದೆ. ಜನರು ತಮ್ಮ ನಿವಾಸ ಮತ್ತು ಕೃಷಿ ಭೂಮಿಯನ್ನು ಕಳೆದುಕೊಂಡು ಬಡ್ತಿಗೆ ಬಂದಿದ್ದಾರೆ.

ರೆಡ್ ಅಲರ್ಟ್ ಘೋಷಣೆ:

ಮುಂಜಾಗ್ರತಾ ಕ್ರಮವಾಗಿ, ಇಂದು (ಸೆಪ್ಟೆಂಬರ್ 5) ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ ಮತ್ತು ಪಂಜಾಬ್‌ನ ಕೆಲವು ಭಾಗಗಳಿಗೆ IMD ರೆಡ್ ಅಲರ್ಟ್ ಘೋಷಿಸಿದೆ.

ಮಳೆಯಿಂದ ಉಂಟಾದ ಪರಿಸ್ಥಿತಿ: ಭಾರೀ ಮಳೆಯಿಂದಾಗಿ ನಿನ್ನೆ (ಸೆಪ್ಟೆಂಬರ್ 4) ಛತ್ತೀಸ್‌ಗಢದ ಬಲರಾಂಪುರದಲ್ಲಿ ಒಂದು ಸಣ್ಣ ಅಣೆಕಟ್ಟಿನ ಭಾಗ ಕುಸಿದು ಪ್ರವಾಹ ಉಂಟಾಗಿದೆ. ಹರಿಯಾಣದ ಅನೇಕೆಡೆ ಮನೆಗಳ ಮೇಲ್ಛಾವಣಿ ಕುಸಿದು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಇಂದು (ಸೆಪ್ಟೆಂಬರ್ 5) ಕೂಡ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

September ಪೂರ್ತಿ ಮಳೆ:

ಇಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಭೂಕುಸಿತ ಮತ್ತು ಪ್ರವಾಹದ ಅಪಾಯವಿದೆ ಎಂದು IMD ಎಚ್ಚರಿಕೆ ನೀಡಿದೆ. ಇಡೀ ಸೆಪ್ಟೆಂಬರ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಬಹುದು ಎಂದು ಇಲಾಖೆ ಸೂಚಿಸಿದೆ.

ದೆಹಲಿ ಹವಾಮಾನ:

ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಿಂದ ದೊಡ್ಡ ಅಡಚಣೆಗಳು ಉಂಟಾಗಿವೆ. ಇಂದೂ ಕೂಡ ಮಳೆ ಮುಂದುವರೆದಿದ್ದು, ಯಮುನಾ ನದಿ ಬಳಿಯ ನಿವಾಸಿಗಳ ಪರಿಸ್ಥಿತಿ ಗಂಭೀರವಾಗಿದೆ. ದೆಹಲಿಯಲ್ಲಿ ಈ ಋತುವಿನ ಒಟ್ಟು ಮಳೆಯ ಪ್ರಮಾಣ 1,000 mm ಅನ್ನು ದಾಟಿದೆ. ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಂ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶ (NCR) ಜೂಡಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ನೀರಿನಲ್ಲಿ ಮುಳುಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಿನ್ನೆ, ಬುಧವಾರ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.

ಭಾರೀ ಮಳೆಯಿಂದ ಶಾಲೆಗಳಿಗೆ ರಜೆ:

ಭಾರೀ ಮಳೆಯ ನಿಮಿತ್ತ ಪಂಜಾಬ್ ಸರ್ಕಾರವು ಸೆಪ್ಟೆಂಬರ್ 7ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ-ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಿದೆ. ಅಧಿಕಾರಿಗಳ ಪ್ರಕಾರ, ಪಂಜಾಬ್‌ನಲ್ಲಿ August ತಿಂಗಳಲ್ಲಿ 25 ವರ್ಷಗಳಲ್ಲಿ ದಾಖಲಾಗಿದ್ದ ಅತ್ಯಧಿಕ ಮಳೆಗಿಂತ 74% ಹೆಚ್ಚು ಮಳೆ ಸುರಿದಿದೆ. ಅದೇ ರೀತಿ, September 4 ರಿಂದ ಸೆಪ್ಟೆಂಬರ್ 6ರ ವರೆಗೆ ಚಂಡೀಗಢ, ಪಟಿಯಾಲಾ ಮತ್ತು ರೂಪನಗರದಲ್ಲಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಜಸ್ಥಾನದಲ್ಲೂ ಭಾರೀ ಮಳೆ ಮುಂದುವರೆದಿದೆ. ಇದರ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ, ಬುಧವಾರದ ವೇಳೆಗೆ ಮೃತರ ಸಂಖ್ಯೆ 7ಕ್ಕೇರಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೆಲವೆಡೆ ಸೆಪ್ಟೆಂಬರ್ 7ರ ವರೆಗೆ ಎಲ್ಲಾ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಈ ಭಾಗಗಳಲ್ಲಿ ಪ್ರವಾಹದಲ್ಲಿ ಜೀವಹಾನಿ ಸಂಭವಿಸಿದೆ. ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಕೂಡ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಎರಡನೇ ದಿನವೂ ಮುಚ್ಚಲ್ಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನದಿಗಳು ಉಕ್ಕೇರಿ ಹರಿಯುತ್ತಿದ್ದು, ಅನೇಕ ಪಟ್ಟಣಗಳು ಮತ್ತು ಹಳ್ಳಿಗಳು ಜಲಾವೃತವಾಗಿವೆ.

ವಾಯುವ್ಯ ಭಾರತದ ಹವಾಮಾನ:

ಸೆಪ್ಟೆಂಬರ್ 9 ರವರೆಗೆ ಉತ್ತರಾಖಂಡದಲ್ಲಿ ಸ್ಥಳೀಯವಾಗಿ ಭಾರೀ ಮಳೆಯ ಸಾಧ್ಯತೆಯಿದೆ. ಸೆಪ್ಟೆಂಬರ್ 5 ರಿಂದ 7ರ ವರೆಗೆ ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲೂ ಭಾರೀ ಮಳೆ ಸುರಿಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಪಶ್ಚಿಮ ಭಾರತದ ಹವಾಮಾನ:

ಸೆಪ್ಟೆಂಬರ್ 4 ಮತ್ತು 6ರ ವರೆಗೆ ಗುಜರಾತ್ ಮತ್ತು ಕರಾವಳಿ ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಸಾಧ್ಯತೆ ಹೆಚ್ಚಿದೆ. ಅಲ್ಲದೆ, ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲೂ ಭಾರೀ ಮಳೆ ಆಗಬಹುದು ಎಂದು IMD ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 5 ರಂದು ಮಧ್ಯಪ್ರದೇಶ ಮತ್ತು ಒಡಿಶಾ, ಸೆಪ್ಟೆಂಬರ್ 6 ರಿಂದ ಸಿಕ್ಕಿಂ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಈಶಾನ್ಯ ಭಾರತದ ಹವಾಮಾನ:

ಸೆಪ್ಟೆಂಬರ್ 7 ಮತ್ತು 9ರ ವರೆಗೆ ಅರುಣಾಚಲ ಪ್ರದೇಶ, September 4 ರಿಂದ 8ರ ವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಭಾರತದ ಹವಾಮಾನ:

ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸ್ಥಳೀಯವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 5ರ ವರೆಗೆ ತೆಲಂಗಾಣ, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶ, ಮತ್ತು ಕರಾವಳಿ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ಒಟ್ಟಾರೆಯಾಗಿ, ಈ ಬಾರಿ ಉತ್ತರ ಭಾರತದ ರಾಜ್ಯಗಳಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories