WhatsApp Image 2025 10 11 at 9.43.59 AM

Rain Alert: ಈ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳ ಕಾಲ ಭಾರೀ ಮಳೆಯ ಮುನ್ಸೂಚನೆ.!

Categories:
WhatsApp Group Telegram Group

ರಾಜ್ಯದಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಎಲ್ಲಿ ನೋಡಿದರೂ ವರುಣನ ಅಬ್ಬರವೇ ಪ್ರಧಾನವಾಗಿದೆ. ಯರ್ರಾಬಿರ್ರಿ ಸುರಿಯಲು ಶುರು ಮಾಡಿರುವ ಮಳೆರಾಯ ತನ್ನ ಪ್ರತಾಪವನ್ನು ಜೋರಾಗಿ ತೋರಿಸುತ್ತಿದ್ದಾನೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೇವಲ 12 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆ ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ. ಇಷ್ಟಾದರೂ, ಮುಂದಿನ 72 ಗಂಟೆಗಳ ಅವಧಿಗೆ ಮತ್ತೆ ಭಾರೀ ಮಳೆ ಸುರಿಯುವ ಮುನ್ಸೂಚನೆ ಹವಾಮಾನ ಇಲಾಖೆಯಿಂದ ದೊರೆತಿದೆ.

‘ಮಳೆರಾಯ ಸಾಕು ನಿಲ್ಲಿಸು ನಿನ್ನ ರಗಳೆ’ ಎಂದು ಜನರು ಬೇಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವಾಗಲೂ ಉತ್ತಮ ಮಳೆಗಾಗಿ ಬೇಡುತ್ತಿದ್ದ ಜನರೇ ಈಗ, ಮಳೆಯ ಅತಿಯಾದ ಆರ್ಭಟದಿಂದ ಶಾಪ ಹಾಕುವಂತಾಗಿದೆ. 2025ರ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಆರಂಭವಾಗಿದ್ದ ಈ ಮಳೆ ಅಕ್ಟೋಬರ್ ತಿಂಗಳವರೆಗೂ ನಿರಂತರವಾಗಿ ಸುರಿದು ಜನರಿಗೆ ಸಾಕು ಎನಿಸಿದೆ. ಇಷ್ಟಾದರೂ ಮತ್ತೆ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಅದರಲ್ಲೂ ಕರ್ನಾಟಕದ ಕೆಲವು ನಿರ್ದಿಷ್ಟ ಜಿಲ್ಲೆಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲು ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಗಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories