ಕರ್ನಾಟಕದಲ್ಲಿ ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದ್ದರೆ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆಯಿದೆ.
ಕದ್ರಾ, ಸಿದ್ದಾಪುರ, ಗೇರುಸೊಪ್ಪ, ಕಾರ್ಕಳ, ಶಿರಾಲಿ, ಭಾಲ್ಕಿ, ಬಂಟವಾಳ, ಉಪ್ಪಿನಂಗಡಿ, ಮಂಗಳೂರು, ಕಾರವಾರ, ಜೋಯ್ಡಾ, ಬೀದರ್, ಅಂಕೋಲಾ, ಮೂಡುಬಿದಿರೆ, ಮಾಣಿ, ಗೋಕರ್ಣ, ಶಕ್ತಿನಗರ, ಕೋಟಾ, ಹುಮ್ನಾಬಾದ್, ಧರ್ಮಸ್ಥಳ, ಯಲ್ಲಾಪುರ, ಉಡುಪಿ, ಸುಳ್ಯ, ಸೈದಾಪುರ, ಪುತ್ತೂರು, ಮಂಠಾಳ, ಮಂಕಿ, ಕುಮಟಾ, ಕಮ್ಮರಡಿ, ಔರಾದ್, ಶೃಂಗೇರಿ, ತ್ಯಾಗರ್ತಿ, ಸೋಮವಾರಪೇಟೆ, ಸೇಡಂ, ಲೋಂಡಾ, ಕೊಪ್ಪ, ಖಾನಾಪುರ, ಕಮಲಾಪುರ, ಕಳಸ, ಕಲಬುರಗಿ, ಹುಂಚದಕಟ್ಟೆ, ಹಿರೆಕೆರೂರು, ಚಿತ್ತಾಪುರ, ನಾಪೋಕ್ಲು, ಎನ್‌ಆರ್ ಪುರ, ಮುಲ್ಕಿ, ಮಸ್ಕಿ, ಲಕ್ಷ್ಮೇಶ್ವರ, ಕುಶಾಲನಗರ, ಜಯಪುರ, ಜೇವರ್ಗಿ, ಹಾವೇರಿ, ಗಂಗಾವತಿ, ಗಂಗಾಪುರ, ದಾವಣಗೆರೆ ಮತ್ತು ಬಾಳೆಹೊನ್ನೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 28.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 28.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.3 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 28.9 ಡಿಗ್ರಿ ಸೆಲ್ಸಿಯಸ್, ಜಿಕೆವಿಕೆಯಲ್ಲಿ ಗರಿಷ್ಠ ಉಷ್ಣಾಂಶ 28.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 28.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.5 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.4 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 27.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.7 ಡಿಗ್ರಿ ಸೆಲ್ಸಿಯಸ್, ಶಕ್ತಿನಗರದಲ್ಲಿ ಗರಿಷ್ಠ ಉಷ್ಣಾಂಶ 28.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 26.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19.8 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 28.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.0 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 29.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.5 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 25.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಗದಗದಲ್ಲಿ ಗರಿಷ್ಠ ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 30.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಸಿಯಸ್, ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 23.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.6 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 29.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.5 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 30.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.