ಕರ್ನಾಟಕದಲ್ಲಿ ಮುಂಗಾರು ಮಳೆಯ (Monsoon rains in Karnataka) ರಭಸ ಮತ್ತೆ ಚುರುಕುಗೊಳ್ಳುತ್ತಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ತೀವ್ರತೆ ಹಾಗೂ ಸಮುದ್ರ ಮಟ್ಟದ ವಾತಾವರಣದಲ್ಲಿ ಸಂಭವಿಸಿದ ಬದಲಾವಣೆಗಳಿಂದಾಗಿ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಈ ವಾತಾವರಣೀಯ ಬದಲಾವಣೆಗಳು (Weather changes) ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಮಳೆ ತೀವ್ರಗೊಳ್ಳಲು ಕಾರಣವಾಗಿದೆ.
ಮುಂಗಾರು ಋತು (Monsoon season) ಪ್ರಾರಂಭವಾದ ದಿನದಿಂದಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದರೂ, ಇತ್ತೀಚೆಗೆ ಅದು ಇನ್ನಷ್ಟು ವೇಗ ಪಡೆದುಕೊಂಡಿದೆ. ಹವಾಮಾನ ಇಲಾಖೆ ಇತ್ತೀಚಿನ ಮುನ್ಸೂಚನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ (Orrange and yellow alert) ಘೋಷಣೆ ಮಾಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಗಾಳಿಯ ವೇಗವೂ ಸಮುದ್ರ ತೀರ ಪ್ರದೇಶಗಳಲ್ಲಿ ಹೆಚ್ಚಾಗಲಿದೆ ಎಂದು ಎಚ್ಚರಿಸಲಾಗಿದೆ.
ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಯಾವ ಯಾವ ಜಿಲ್ಲೆಗಳಿಗೆ ಘೋಷಣೆ:
ಆಗಸ್ಟ್ 15: ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಅತೀ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್.
ಆಗಸ್ಟ್ 18 & 19: ಇದೇ ಜಿಲ್ಲೆಗಳಲ್ಲಿ ಮತ್ತೆ ಆರೆಂಜ್ ಅಲರ್ಟ್.
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ: ಸಾಧಾರಣದಿಂದ ಭಾರೀ ಮಳೆಯ ಮುನ್ಸೂಚನೆ. ಕನಿಷ್ಠ 70 ಮಿ.ಮೀ. ಮಳೆಯ ನಿರೀಕ್ಷೆ.
ಈ ಅವಧಿಯಲ್ಲಿ ಬೇರೆ ಬೇರೆ ದಿನಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಒಳನಾಡಿನ ಮಳೆಯ ಸ್ಥಿತಿ(Inland rainfall conditions) :
ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಮಳೆ ನಿರಂತರವಾಗಿ ಅಬ್ಬರಿಸದೇ, ದಿನ ಬಿಟ್ಟು ದಿನ ಚುರುಕು ಮಳೆ ಬೀಳುವ ಸಾಧ್ಯತೆ ಇದೆ. ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯ ಮುನ್ಸೂಚನೆ ಇದೆ. ಹವಾಮಾನ ತಜ್ಞರ ಪ್ರಕಾರ, ಈ ಪ್ರದೇಶಗಳಲ್ಲಿ ಗಂಭೀರ ಸ್ವರೂಪದ ಮಳೆಯ ಲಕ್ಷಣ ಪ್ರಸ್ತುತ ಕಾಣಿಸಿಲ್ಲ.
ರಾಜ್ಯಾದ್ಯಂತ ಮೋಡ ಕವಿದ ಚಳಿ ವಾತಾವರಣ :
ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಅನೇಕ ಭಾಗಗಳಲ್ಲಿ ಭಾರೀ ಮಳೆ ದಾಖಲಾಗಿದೆ. ವಂಡಿಗೆ ಪ್ರದೇಶದಲ್ಲಿ ಗರಿಷ್ಠ 161 ಮಿಲಿ ಮೀಟರ್ ಮಳೆ ಸುರಿದಿದೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೆಂಗಳೂರು ನಗರ ಹಾಗೂ ಶಿವಮೊಗ್ಗ ಭಾಗಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಜನರು ದಿನವಿಡೀ ಮಳೆಗೆ ಹೈರಾಣಾಗಿದ್ದು, ಮೋಡ ಕವಿದ ತಂಪಾದ ವಾತಾವರಣ ರಾಜ್ಯದಾದ್ಯಂತ ಆವರಿಸಿದೆ. ಇನ್ನು, ನಿರಂತರ ಮೋಡ ಕವಿದ ವಾತಾವರಣದಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯನ ದರ್ಶನ ಅಪರೂಪವಾಗಿದೆ.
ಈಗಿನಿಂದ ಆಗಸ್ಟ್ 21ರವರೆಗೆ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ, ಹವಾಮಾನ ಇಲಾಖೆ (Meteorological Department) ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಮನವಿ ಮಾಡಿದೆ. ಕರಾವಳಿ ಪ್ರದೇಶಗಳ ಜನರು ಸಮುದ್ರದ ಅಲೆಗಳು ಹಾಗೂ ಗಾಳಿಯ ತೀವ್ರತೆಗೆ ಜಾಗ್ರತೆಯಿಂದ ಇರಬೇಕು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.