ಚಿಕ್ಕಮಗಳೂರು: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರಲ್ಲಿರುವ ಚಾರ್ಮಡಿ ಘಾಟ್ಟಿನಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿದಂತೆ ಭದ್ರತೆಯ ದೃಷ್ಟಿಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ. ಈ ನಿರ್ಧಾರವನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ತೆಗೆದುಕೊಂಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕೊಟ್ಟಿಗೆಹಾರದಲ್ಲಿನ ಪೊಲೀಸ್ ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರೂ ಸಹ, ಅಕ್ರಮ ಮರಳು ಸಾಗಾಟ, ಗೋ ಸಾಗಾಟ, ವಾಹನಗಳನ್ನು ಅಡ್ಡಗಟ್ಟಿ ನಡೆಸುವ ದರೋಡೆ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದವು. ಈ ಅಪರಾಧ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಈ ಹೊಸ ಮಾರ್ಗಸೂಚಿ ನಿರ್ಧಾರವನ್ನು ಅಮಲಿಗೆ ತರಲಾಗುತ್ತಿದೆ.
ಹೊಸ ನಿಯಮದ ಪ್ರಕಾರ, ಚಾರ್ಮಡಿ ಘಾಟ್ಟಿನಲ್ಲಿ ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಂಚರಿಸುವ ವಾಹನಗಳು ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ನಿಲ್ಲಿಸಲ್ಪಡುತ್ತವೆ. ಅಲ್ಲಿ ಅವುಗಳನ್ನು ಸಂಗ್ರಹಿಸಿ ಐದು ವಾಹನಗಳನ್ನು ಒಂದು ಗುಂಪಾಗಿ ರಚಿಸಿ, ಒಟ್ಟಿಗೆ ಮುಂದೆ ಕಳುಹಿಸಲಾಗುತ್ತದೆ. ಈ ಮೂಲಕ, ಚಿಕ್ಕಮಗಳೂರು ಜಿಲ್ಲಾ ಆಡಳಿತವು ಚಾರ್ಮಡಿ ಘಾಟ್ಟಿನಲ್ಲಿ ರಾತ್ರಿ ವೇಳೆಯಲ್ಲಿ ಒಂಟಿ ವಾಹನದ ಸಂಚಾರ ಅಥವಾ ಒಂದೊಂದೇ ವಾಹನಗಳು ಪ್ರಯಾಣಿಸುವುದನ್ನು ಪೂರ್ಣವಾಗಿ ನಿಷೇಧಿಸಿದೆ.
ಈ ಏರ್ಪಾಡುಗಳನ್ನು ನಿರ್ವಹಿಸಲು ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಒಬ್ಬ ಸಬ್-ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ, ಚಾರ್ಮಡಿ ಘಾಟ್ಟಿನಲ್ಲಿ ರಾತ್ರಿ ಪೂರ್ತಿ 24 ಗಂಟೆಗಳೂ ಪೊಲೀಸ್ ವಾಹನಗಳ ಗಸ್ತು ಸುತ್ತುವಂತೆಯೂ ಏರ್ಪಾಟು ಮಾಡಲಾಗಿದೆ. ಈ ಕ್ರಮವು ಪ್ರಯಾಣಿಕರು ಮತ್ತು ಸ್ಥಳೀಯರ ಭದ್ರತೆಗೆ ಹೆಚ್ಚಿನ ರಕ್ಷಣೆಯ ನೀಡುವುದೆಂದು ಪೊಲೀಸ್ ಅಧಿಕಾರಿಗಳು ನಿರೀಕ್ಷಿಸಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.