ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ 

Picsart 25 07 24 23 34 41 044

WhatsApp Group Telegram Group

ಕರ್ನಾಟಕ ರಾಜ್ಯದ (Karnataka state) ಹಲವೆಡೆ ಇತ್ತೀಚೆಗೆ ಮಳೆಯ ವಾತಾವರಣ ಮನೆ ಮಾಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿ ಇನ್ನೂ ವ್ಯಾಪಕ ಮಳೆಯಾಗಲಿದೆಯೆಂದು ಮುನ್ಸೂಚನೆ ನೀಡಿದೆ. ಆದ್ದರಿಂದ ರಾಜ್ಯದ ಹಲವಾರು ಜಿಲ್ಲೆಗಳ (Some districts in Karnataka) ನಾಗರಿಕರು ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ (Holidays for school and colleges) ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ (Udupi and Mangalore district) ಪ್ರಾಥಮಿಕ ಮತ್ತು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.
ಉಡುಪಿ ಜಿಲ್ಲೆಯ ಡಿಸಿ ಸ್ವರೂಪ್ ಟಿ.ಕೆ. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಜಾರಿಯಾಗಲಿದೆ. ಆದರೆ ಪದವಿ (ಡಿಗ್ರಿ) ಕಾಲೇಜುಗಳ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದರು.
ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ)ಯಲ್ಲಿಯೂ ತಹಶೀಲ್ದಾರ್ ಆದೇಶದ ಮೂಲಕ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು (Leave is granted) ಮಳೆ ಜೋರಾಗಿ ಬರುತ್ತಿರುವ ಹಿನ್ನಲೆ ಜಿಲ್ಲಾಡಳಿತ ಈ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಹವಮಾನ ಇಲಾಖೆ ಕೊಡುವ ಮುನ್ಸೂಚನೆಯ ಪ್ರಕಾರ ಇದೇ ರೀತಿಯ ಆದೇಶಗಳನ್ನು ಮುಂದಿನ ದಿನಗಳಲ್ಲಿ ಕೂಡ ಜಿಲ್ಲಾಡಳಿತ ಹೊರಡಿಸುವ ಸಾಧ್ಯತೆಗಳಿವೆ.

ಇದೀಗ ಬೆಂಗಳೂರು ನಗರ (Bangalore town) ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೂಡ ಮಳೆ ವ್ಯಾಪಕವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಈ ಮಳೆಯ ಪರಿಣಾಮವಾಗಿ ಸಂಚಾರದ ಮೇಲೆ ಪರಿಣಾಮ ಬೀರುತ್ತಿರುವುದು ಗಮನಾರ್ಹ.

ಹವಾಮಾನ ಇಲಾಖೆ (Weather department) ಮಾಹಿತಿ ಪ್ರಕಾರ, ಮುಂದಿನ ಕೆಲ ಗಂಟೆಗಳೊಳಗೆ ಗಾಳಿ 30 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಇದರಿಂದಾಗಿ ಮರಗಳು, ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆಗಳು ಇರುವುದರಿಂದ ಜನರು ಅಗತ್ಯವಿಲ್ಲದ ಓಡಾಟವನ್ನು ತಪ್ಪಿಸಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

ಹವಾಮಾನ ಇಲಾಖೆ  ನೀಡಿದ ಎಚ್ಚರಿಕೆಯಂತೆ ಈ ಜಿಲ್ಲೆಗಳಲ್ಲಿ ಮಳೆ ಭಾರೀ ಪ್ರಮಾಣದಲ್ಲಿ ಆಗುವ ಸಾಧ್ಯತೆ ಇದೆ:
ಕರಾವಳಿ ಜಿಲ್ಲೆಗಳು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ.
ಮಲೆನಾಡು ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು.
ದಕ್ಷಿಣ ಒಳನಾಡು ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ.
ಮಳೆ ಹಾಗೂ ಭಾರಿ ಗಾಳಿ (Rain and strong wind) ಕಾರಣದಿಂದಾಗಿ ನದಿಗಳು, ಘಟ್ಟಪ್ರದೇಶಗಳು ಹಾಗೂ ಜಲಾವೃತ ಪ್ರದೇಶಗಳಲ್ಲಿ ಪ್ರವಾಹದ ಸಾಧ್ಯತೆ ಇದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!