WhatsApp Image 2025 10 11 at 9.43.59 AM 1

ಅನ್ನಭಾಗ್ಯ ಯೋಜನೆ: ಇನ್ನು ಮುಂದೆ ಅಕ್ಕಿ ಬದಲಿಗೆ ‘ಇಂದಿರಾ ಕಿಟ್’ ವಿತರಣೆ, ಏನೇನಿರುತ್ತೆ ಈ ಕಿಟ್‌ನಲ್ಲಿ?

WhatsApp Group Telegram Group

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಒಂದು ಸಿಹಿ ಮತ್ತು ಒಂದು ಆಘಾತಕಾರಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಹೆಚ್ಚುವರಿ ಅಕ್ಕಿ ಬದಲಿಗೆ ಇನ್ನು ಮುಂದೆ ‘ಇಂದಿರಾ ಆಹಾರ ಕಿಟ್’ ವಿತರಿಸಲು ಸರ್ಕಾರ ನಿರ್ಧರಿಸಿದೆ. ಪಡಿತರ ಚೀಟಿ ಹೊಂದಿರುವ ರಾಜ್ಯದ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಹೆಚ್ಚುವರಿ ಅಕ್ಕಿಯ ಬದಲಾಗಿ ಈ ಹೊಸ ಕಿಟ್ ಸಿಗಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಈ ನಿರ್ಧಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ಅನ್ನಭಾಗ್ಯದ ಹೆಚ್ಚುವರಿ ಅಕ್ಕಿಯ ಅಕ್ರಮ ಸಾಗಾಟ ಮತ್ತು ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ಇನ್ನು ಮುಂದೆ ಕುಟುಂಬ ಸದಸ್ಯರಿಗೆ ಸಿಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವುದಿಲ್ಲ, ಬದಲಿಗೆ ಇಂದಿರಾ ಫುಡ್ ಕಿಟ್ ದೊರೆಯಲಿದೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಒಟ್ಟು 10 ಕೆಜಿ ಅಕ್ಕಿ ವಿತರಿಸುತ್ತಿತ್ತು. ಇದರಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯ ಬದಲಿಗೆ ಇಂದಿರಾ ಆಹಾರ ಕಿಟ್ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯದ ಅಂತ್ಯೋದಯ (AAY) ಮತ್ತು ಬಿಪಿಎಲ್ (PHH) ಕಾರ್ಡುದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ, 61.19 ಕೋಟಿ ರೂಪಾಯಿ ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದರು.

ಅನ್ನಭಾಗ್ಯದ ಹೆಚ್ಚುವರಿ 5 ಕೆಜಿ ಅಕ್ಕಿಗೆ ಮೀಸಲಿಟ್ಟಿದ್ದ 6,426 ಕೋಟಿ ರೂ. ಅನುದಾನದಲ್ಲಿ, 6,119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಒದಗಿಸಲು ಬಜೆಟ್ ಮರುಹಂಚಿಕೆಗೆ ಅನುಮೋದನೆ ನೀಡಲಾಗಿದೆ. ಈ ಇಂದಿರಾ ಕಿಟ್ನಲ್ಲಿ ಏನೇನಿರುತ್ತೆ ಎಂಬುದರ ವಿವರವನ್ನು ಸಹ ಕಾನೂನು ಸಚಿವರು ನೀಡಿದ್ದಾರೆ:

1 ಕೆ.ಜಿ ತೊಗರಿ ಬೇಳೆ

1 ಲೀಟರ್ ಅಡುಗೆ ಎಣ್ಣೆ

1 ಕೆ.ಜಿ ಸಕ್ಕರೆ

1 ಕೆ.ಜಿ ಉಪ್ಪು

ಅಂತ್ಯೋದಯ ಮತ್ತು ಪಿಎಚ್‌ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಅನ್ನು ವಿತರಿಸಲು ಸಚಿವ ಸಂಪುಟವು ನಿರ್ಣಯಿಸಿದೆ. ಈ ಕಿಟ್‌ನಲ್ಲಿ 2 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆ, 1 ಕೆಜಿ ಸಕ್ಕರೆ, ಮತ್ತು 1 ಕೆಜಿ ಉಪ್ಪು ಸೇರಿರುತ್ತದೆ ಎಂದು ಸಂಪುಟದ ನಿರ್ಣಯದಲ್ಲಿ ತಿಳಿಸಲಾಗಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories