ಬಜೆಟ್ ಬೆಲೆಯಲ್ಲಿ ಇನ್ಫಿನಿಕ್ಸ್‌ನ ಮತ್ತೊಂದು ಮೊಬೈಲ್ ಬಿಡುಗಡೆ, ಇಲ್ಲಿದೆ ಮಾಹಿತಿ

Infinix smart 8plus phone

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ.ನೀವು ಸಹ ಒಂದು ಉತ್ತಮ ಹಾಗೂ ಬಜೆಟ್ – ಫ್ರೆಂಡ್ಲಿ ಸ್ಮಾರ್ಟ್ ಫೋನ್ ಗಾಗಿ ನೋಡುತ್ತಿದ್ದರೆ, ಹಾಗಾದ್ರೆ ಇದೀಗ ನಮಗೆಲ್ಲಾ ಇನ್ಫಿನಿಕ್ಸ್‌ ಸ್ಮಾರ್ಟ್‌ 8 ಸರಣಿ(Infinix smart 8 series) ಸ್ಮಾರ್ಟ್‌ಫೋನ್‌ಗಳು(Smartphones) ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಈ ಸರಣಿಗೆ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಸೇರ್ಪಡೆ ಆಗಿದೆ. ಹೌದು ಇದನ್ನು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ (Infinix smart 8plus)ಎಂದು ಗುರುತಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ (Infinix smart 8plus)

Infinix smart 8plus

ಹೌದು, ಇದೀಗ ಇನ್ಫಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ (Infinix Smart 8 Plus) ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂದು ತಿಳಿಯೋಣ ಬನ್ನಿ.

ಡಿಸ್‌ಪ್ಲೇ (Display) ಮತ್ತು ಪ್ರೊಸೆಸರ್‌(Processer):

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌(Infinix Smart 8 Plus smartphone) 6.6 ಇಂಚಿನ ಐಪಿಎಸ್ ಎಲ್ಸಿಡಿ ಪ್ಯಾನಲ್(IPS LCD pannel) ಅನ್ನು ಹೊಂದಿದೆ. ಈ ಡಿಸ್‌ಪ್ಲೇ(display) 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌(Screen resolution) ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌(refresh rate) ಮತ್ತು 500 ನಿಟ್ಸ್‌ ಬ್ರೈಟ್‌ನೆಸ್‌ ಲೆವೆಲ್‌(Brightness level) ಅನ್ನು ನೀಡಲಿದೆ.
ಈ ಸ್ಮಾರ್ಟ್ ಫೋನ್ ಮೀಡಿಯಾಟೆಕ್‌ ಹಿಲಿಯೋ(mediateck helio) G36 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು XOS 13 ಆಧಾರಿತ ಆಂಡ್ರಾಯ್ಡ್ 13 (Android 13) GO ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಹಾಗೂ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ (Internal storage)ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರ ಕಾರ್ಡ್‌(memory card) ಮೂಲಕ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

whatss

ಕ್ಯಾಮೆರಾ (Camera)

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ (dual rear camera setup)ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ(Main camera) 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎಐ ಲೆನ್ಸ್(Ai lens) ಮತ್ತು ಕ್ವಾಡ್ ನೇತೃತ್ವದ ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ(Front) 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು (selfie camera)ಸಹ ಹೊಂದಿದೆ.

ಬ್ಯಾಟರಿ (Battery) ಮತ್ತು ಇತರೆ ಫೀಚರ್ಸ್‌:

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು(Battery) ಹೊಂದಿದ್ದು, 18W ವೇಗದ ಚಾರ್ಜಿಂಗ್‌(fast charging) ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ವೈ-ಫೈ 802.11 ಎಸಿ, ಬ್ಲೂಟೂತ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್‌ ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಪೋನ್‌ ಸೈಡ್‌ ಫೇಸಿಂಗ್‌ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ (side facing fingure print)ಸಹ ಬೆಂಬಲಿಸಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 8 ಬೆಲೆ ಮತ್ತು ಲಭ್ಯತೆ:

ಇನ್ಪಿನಿಕ್ಸ್‌ ಸ್ಮಾರ್ಟ್ 8 ಪ್ಲಸ್‌ ಸ್ಮಾರ್ಟ್‌ಫೋನ್‌ನ ಬೆಲೆ ಮತ್ತು ಲಭ್ಯತೆಯನ್ನು ಇನ್ಫಿನಿಕ್ಸ್ ಕಂಪೆನಿ (Infinix company)ಇನ್ನೂ ಕೂಡ ದೃಡೀಕರಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಟಿಂಬರ್ ಬ್ಲ್ಯಾಕ್(Tembor black), ಗ್ಯಾಲಕ್ಸಿ ವೈಟ್ (Galaxy white)ಮತ್ತು ಹೊಳೆಯುವ ಚಿನ್ನದಂತಹ ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ. ಇದು ಭಾರತದಲ್ಲಿಯೂ ಕೂಡ ಲಭ್ಯವಿದೆಯಾ, ಇಲ್ಲ ಕೆಲವು ಆಯ್ದ ಮಾರುಕಟ್ಟೆಗಳಲ್ಲಿ ಮಾತ್ರ ಬರಲಿದೆಯಾ ಎಂಬುದರ ಬಗ್ಗೆ ಯಾವುದೆ ಖಚಿತ ಮಾಹಿತಿ ಬಹಿರಂಗವಾಗಿಲ್ಲ ಎಂದು ತಿಳಿದು ಬಂದಿದೆ. ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

tel share transformed

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಸ್ಮಾರ್ಟ್‌ಫೋನ್‌ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!