ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ರೈತರ ಶೂನ್ಯ ಬಡ್ಡಿಯ ದರವನ್ನು ಮೂರು ಲಕ್ಷದಿಂದ ಐದು ಲಕ್ಷದ ವರೆಗೆ ಏರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ನಲ್ಲಿ (Karnataka Budget 2023) ರೈತರಿಗೆ ಖುಷಿಯ ವಿಚಾರವನ್ನು ನೀಡಿದ್ದಾರೆ ಎಂದು ಹೇಳಬಹುದು. ರೈತರಿಗೆ ಶೂನ್ಯ ಬಡ್ಡಿದರದಲ್ಲಿ (Interest Free Loans) ನೀಡಲಾಗುವ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರುಪಾಯಿಗೆ ಏರಿಸಿದ್ದಾರೆ. ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 15 ಲಕ್ಷ ರುಪಾಯಿಗೆ ಏರಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ತಿಯಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರೈತರಿಗೆ ಯಾವುದೇ ಬಡ್ಡಿ ಇಲ್ಲದೆ ಐದು ಲಕ್ಷದವರೆಗೆ ಸಾಲ :
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿ ಈ ಘೋಷಣೆ ಮಾಡಿದ್ದಾರೆ. ದಾಖಲೆಯ 14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯನವರು, ರೈತರು ಮತ್ತು ಕೃಷಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಅದರಂತೆ ರೈತರ ಸಾಲದ ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷದಿಂದ 15 ಲಕ್ಷ ರೂ.ಗೆ ಏರಿಸಿದ್ದಾರೆ. ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಅಂತಾ ತಿಳಿಸಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕಪ್ ವ್ಯಾನ್ ಖರೀದಿಸಲು 7 ಲಕ್ಷ ರೂ ವರೆಗಿನ ವಾಹನ ಖರೀದಿಸಲು ಶೇಕಡಾ ನಾಲ್ಕರ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುವುದು. ರಾಜ್ಯದ 50 ತರಕಾರಿ ಮಾರುಕಟ್ಟೆಗಳಲ್ಲಿ ಕೆಪೆಕ್ ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.
75 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಎತ್ತಿನ ಹೊಳೆ ಯೋಜನೆಗೆ 22,252 ಕೋಟಿ ರೂ. ಮೀಸಲು ಇಡುವುದಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ.
ಹೀಗೆ ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಗಳಿಗೆ ಮಹತ್ವ ನೀಡುವುದರ ಜೊತೆಗೆ ಸಿದ್ದರಾಮಯ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೂ ಉತ್ತಮ ಕೊಡುಗೆ ನೀಡಿದೆ. ಕೃಷಿಗೆ ಸಂಬಂಧಿಸಿದಂತೆ ಸರ್ವಜ್ಞನ ವಚನವನ್ನು ಮುಖ್ಯಮಂತ್ರಿ ಉಲ್ಲೇಖಿಸಿ, ಕೃಷಿ ಕ್ಷೇತ್ರಕ್ಕೆ ಹಲವಾರು ಕೊಡುಗೆಗಳನ್ನು ನೀಡುವುದಾಗಿ ಹೇಳಿದರು. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ, ಮುಖ್ಯವಾಗಿ ರೈತರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ