ದೇಶದ ರೈತರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರೈತರಿಗೆ ಅಲ್ಪಾವಧಿಯ ಕೃಷಿ ಸಾಲಗಳಿಗೆ ರೂ 3 ಲಕ್ಷ ಸಾಲ ನೀಡಲು ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಅಲ್ಪಾವಧಿಯ ಕೃಷಿ ಸಾಲದ ಮೇಲೆ ಶೇಕಡಾ 1.5 ರ ಬಡ್ಡಿ ರಿಯಾಯಿತಿಯನ್ನು ಅನುಮೋದನೆ ನೀಡಿದೆ.
ಶೇ.1.5 ಸಬ್ಸಿಡಿ ಯೋಜನೆ 2025ರವರೆಗೆ ಅನ್ವಯ:
2022-23 ರಿಂದ 2024-25 ರ ಹಣಕಾಸು ವರ್ಷಕ್ಕೆ ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಗಣಕೀಕೃತ PACS ಸೇರಿದಂತೆ ಸಾಲ ನೀಡುವ ಸಂಸ್ಥೆಗಳಿಗೆ ಶೇಕಡಾ 1.5 ರ ಬಡ್ಡಿ ರಿಯಾಯಿತಿಯನ್ನು ಒದಗಿಸಲಾಗುತ್ತದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ರೈತರು ಯಾವುದಕ್ಕೆ ಕೃಷಿ ಸಾಲ ಪಡೆಯಬಹುದು?
ಈ ಯೋಜನೆಯಡಿಯಲ್ಲಿ ಅಲ್ಪಾವಧಿ ಕೃಷಿ ಸಾಲ ರೂ. 3.00 ಲಕ್ಷ ಕೃಷಿ ಮತ್ತು ಪಶುಸಂಗೋಪನೆ, ಹೈನುಗಾರಿಕೆ, ಕೋಳಿ, ಮೀನುಗಾರಿಕೆ ಇತ್ಯಾದಿ ಸೇರಿದಂತೆ ಇತರ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ರೈತರಿಗೆ ಶೇ. 7% ದರದಲ್ಲಿ ಲಭ್ಯವಿದೆ.
ಸಾಲವನ್ನು ತ್ವರಿತವಾಗಿ ಮತ್ತು ಸಕಾಲಿಕವಾಗಿ ಮರುಪಾವತಿಸಲು ರೈತರಿಗೆ ಹೆಚ್ಚುವರಿ ಶೇ. 3ರಷ್ಟು ಹಣ ಸಹಾಯರೂಪದಲ್ಲಿ ಸಿಗುತ್ತದೆ (ಪ್ರಾಂಪ್ಟ್ ಮರುಪಾವತಿ ಪ್ರೋತ್ಸಾಹ – PRI) ಸಹ ನೀಡಲಾಗುತ್ತದೆ. ಆದ್ದರಿಂದ, ಒಬ್ಬ ರೈತ ತನ್ನ ಸಾಲವನ್ನು ಸಮಯಕ್ಕೆ ಮರುಪಾವತಿಸಿದರೆ, ಅವನು ಶೇ. 4% ದರದಲ್ಲಿ ಸಾಲವನ್ನು ಪಡೆಯುತ್ತಾನೆ.
ರೈತರಿಗೆ ಈ ಸೌಲಭ್ಯವನ್ನು ಸಕ್ರಿಯಗೊಳಿಸಲು, ಭಾರತ ಸರ್ಕಾರವು ಈ ಯೋಜನೆಯನ್ನು ನೀಡುವ ಹಣಕಾಸು ಸಂಸ್ಥೆಗಳಿಗೆ ಬಡ್ಡಿ ಸಬ್ವೆನ್ಷನ್ (IS) ಅನ್ನು ಒದಗಿಸುತ್ತದೆ. ಈ ಬೆಂಬಲವು ಕೇಂದ್ರದಿಂದ 100% ಧನಸಹಾಯವನ್ನು ಹೊಂದಿದೆ, ಇದು ಬಜೆಟ್ ವೆಚ್ಚ ಮತ್ತು ಫಲಾನುಭವಿಗಳ ವ್ಯಾಪ್ತಿಯ ಪ್ರಕಾರ DA&FW ನ ಎರಡನೇ ದೊಡ್ಡ ಯೋಜನೆಯಾಗಿದೆ.
ಇದನ್ನೂ ಓದಿ: PM Kisan: ಪಿಎಂ ಕಿಸಾನ್ 13 ನೇ ಕಂತಿಗೆ ಈ ರೈತರು ಅರ್ಹರು ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೇಯಾ ಈಗಲೇ ಪರೀಕ್ಷಿಸಿ.
ರೈತರು ಸಾಲ ಪಡೆಯಲು ಬೇಕಾಗುವ ದಾಖಲೆಗಳು:
ರೈತರು ಯಾವುದೇ ಬ್ಯಾಂಕಿನಿಂದ ಸಾಲ ಪಡೆಯಬೇಕಾದರೆ ಆಧಾರ್ ಕಾರ್ಡ್ ಇರಬೇಕು. ಇದರೊಂದಿಗೆ ಜಮೀನಿನ ಪಹಣಿ (RTC) ಇರಬೇಕು. ಇನ್ನೂ ಬ್ಯಾಂಕಿನಲ್ಲಿ ಕೇಳಲಾದ ಅಗತ್ಯ ದಾಖಲೆಗಳನ್ನು ರೈತರು ನೀಡಬೇಕಾಗುತ್ತದೆ.
ತುರ್ತು ಸಾಲದ ಮೊತ್ತ ಹೆಚ್ಚಳ:
ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ತುರ್ತು ಸಾಲ ಖಾತ್ರಿ ಯೋಜನೆಗೆ ನೀಡಲಾಗಿದ್ದ ಅನುದಾನ ಪ್ರಮಾಣವನ್ನು ಹೆಚ್ಚಿಸಿದೆ. ಹಾಲಿ ಅನುದಾನದ ಮೊತ್ತ 4.50 ಲಕ್ಷ ರೂ.ಅನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲು ಕೇಂದ್ರ ಸಂಪುಟ ನಿರ್ಧರಿಸಿದೆ. ಕೋವಿಡ್ ಕಾಲದಲ್ಲಿ ಆತಿಥ್ಯ ವಲಯವು ಅನುಭವಿಸಿರುವ ಸಮಸ್ಯೆ, ಸಂಕಷ್ಟಗಳ ನಿವಾರಣೆಯ ಪರಿಹಾರಗಳಿಗೆ ಪೂರಕವಾಗಿ ಹೆಚ್ಚಿನ ನೆರವು ಲಭ್ಯವಾಗಲೆಂದು ಅನುದಾನ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ರೈತರ ಸಾಲ ಮನ್ನಾ : ಮತ್ತೇ ಅಧಿಕಾರಕ್ಕೆ ಬಂದರೆ 3 ಲಕ್ಷದವರೆಗೆ ಸಾಲ ಮನ್ನಾ : ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ
ಬಡ್ಡಿ ರಿಯಾಯಿತಿಯ ಲಾಭವೇನು?
ಕೃಷಿ ಮೇಲಿನ ಈ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ಮನ್ನಾದಿಂದ ಕೃಷಿ ಕ್ಷೇತ್ರಕ್ಕೆ ಸಾಲದ ಹರಿವು ಹೆಚ್ಚಾಗುವ ಜತೆಗೆ ಸುಸ್ಥಿರತೆ ಸಾಧ್ಯವಾಗುತ್ತದೆ. ಕೃಷಿ ಸಾಲ ನೀಡುವ ಹಣಕಾಸು ಸಂಸ್ಥೆಗಳ ಅದರಲ್ಲೂ ವಿಶೇಷವಾಗಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳ ಆರ್ಥಿಕ ಆರೋಗ್ಯ ಹಾಗೂ ಕಾರ್ಯಸಾಧನೆ ಖಚಿತತೆ ಪಡಿಸಿಕೊಂಡಂತಾಗುತ್ತದೆ. ಹೆಚ್ಚುವರಿ ಸಾಲ ನೀಡಲು ಅನುಕೂಲವಾಗಲಿದೆ. ಕೃಷಿಯ ಅಗತ್ಯತೆಗಳಿಗೆ ಅವಶ್ಯವಿರುವ ರೈತರಿಗೆ ಅಲ್ಪಾವಧಿ ಕೃಷಿ ಸಾಲ ಸಾಲವನ್ನು ನೀಡಲು ಕೇಂದ್ರದ ನಿರ್ಧಾರ ಪ್ರೋತ್ಸಾಹಿಸುತ್ತದೆ. ಇದರಿಂದ ಹೆಚ್ಚೆಚ್ಚು ರೈತರು ಕೃಷಿ ಸಾಲ ಪಡೆಯಲು ಮುಂದಾಗುತ್ತಾರೆ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

WhatsApp Group






