ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಜರುಗಲಿದೆ ಬೃಹತ್ ಉದ್ಯೋಗ ಮೇಳ !100ಕ್ಕೂ ಹೆಚ್ಚು ಪ್ರತಿಷ್ಟಿತ ಸಂಸ್ಥೆಗಳು ಭಾಗವಹಿಸಲಿವೆ.
ನಮ್ಮ ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆಯು ಹೆಚ್ಚಾಗಿ ಕಾಡುತ್ತಿದೆ. ಹಲವಾರು ಯುವಕ ಯುವತಿಯರಿಗೆ ವಿದ್ಯೆ ಇದ್ದರೂ ಕೂಡ ಕೆಲಸ ಸಿಗದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಾರಣ ಅವರ ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಸಿಗದೇ ಇರುವುದು ಹಾಗೂ ಯಾವ ಸಂಸ್ಥೆಯಾದರೂ ಕೂಡ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಅವರ ಕೆಲಸದ ಅನುಭವವನ್ನು ಕೇಳುತ್ತವೆ. ಇದರಿಂದಾಗಿ ಹೆಚ್ಚಿನ ನಿರುದ್ಯೋಗ ಸಮಸ್ಯೆಯು ಕಾಡುತ್ತಿದೆ ಎಂದರೆ ತಪ್ಪಾಗಲಾರದು. ಇನ್ನೂ ಈ ರೀತಿಯ ನಿರುದ್ಯೋಗ ಸಮಸ್ಯೆಗಳನ್ನು ಎದುರಿಸುತ್ತಿರುವವರು ಉದ್ಯೋಗ ಮೇಳಾದ್ಯತ (Job fair) ಮುಖ ಮಾಡಿರುತ್ತಾರೆ. ಅಂತವರಿಗೆ ಇದೀಗ ಒಂದು ಶುಭ ಸುದ್ದಿ ಸಿಕ್ಕಿದೆ. ನಮ್ಮ ದೇಶದಲ್ಲಿ ನಿರುದ್ಯೋಗದಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ಸ್ವಲ್ಪಮಟ್ಟಿಗಾದರೂ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಬೃಹತ್ ಉದ್ಯೋಗ ಮೇಳವನ್ನು (job fair) ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಈ ಉದ್ಯೋಗ ಮೇಳ ಯಾವ ಸ್ಥಳದಲ್ಲಿ ನಡೆಯುತ್ತದೆ? ಯಾರೆಲ್ಲ ಭಾಗವಹಿಸಬಹುದು? ಎಂದು ನಡೆಯುತ್ತದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷರೂ ಆದಂತಹ ಎನ್.ಆರ್.ರಮೇಶ್ (N.R Ramesh) ಮಾತನಾಡಿ ನಮ್ಮ ದೇಶದ ಯುವಕರಲ್ಲಿ ಕಾಡುತ್ತಿರುವ ಬಹುದೊಡ್ಡದಾದ ನಿರುದ್ಯೋಗ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಿ ಅವರಿಗೆ ದುಡಿಯಲು ಒಂದು ವೇದಿಕೆಯನ್ನು ಮಾಡಿಕೊಡಬೇಕು ಎಂಬ ಉದ್ದೇಶದಿಂದ ಎಲ್ಲರಿಗೂ ಉದ್ಯೋಗ ಸಿಗಬೇಕೆಂದು ರಾಜಕೀಯ ಕ್ಷೇತ್ರ ಹೊರತುಪಡಿಸಿ ಎಂ.ಎಲ್.ಆರ್. ಫ್ಯಾಮಿಲಿ (M.L.R Family) ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಎಂದು ಮತ್ತು ಎಲ್ಲಿ ನಡೆಯುತ್ತದೆ ಉದ್ಯೋಗ ಮೇಳ?
ರಾಜಧಾನಿ ಬೆಂಗಳೂರಿನಲ್ಲಿ (Bangalore) ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವ ಎಲ್ಲರೂ ಕೂಡ ಇದರಿಂದ ವಿಮುಕ್ತರಾಗಬೇಕೆಂಬ ಉದ್ದೇಶದಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಬೃಹತ್ ಉದ್ಯೋಗ ಮೇಳವನ್ನು ಎಂ.ಎಲ್.ಆರ್ ಫ್ಯಾಮಿಲಿ ಸಹಯೋಗದಲ್ಲಿ, ಆಗಸ್ಟ್ 17ರಂದು (August 17th) ಬೆಂಗಳೂರಿನಲ್ಲಿ, ನಗರದ ಪದ್ಮನಾಭನಗರ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ, ಕಾರ್ಮಲ್ ಶಾಲೆಯ ಪಕ್ಕದ ಪುಟ್ಟಲಿಂಗಯ್ಯ ಆಟದ ಮೈದಾನದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.
ಎಷ್ಟು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ?
ಮೇಳದಲ್ಲಿ 150ಕ್ಕೂ ಹೆಚ್ಚು ಕಾರ್ಪೊರೇಟ್ (Corporate) ಹಾಗೂ ಬಹುರಾಷ್ಟ್ರೀಯ ಕಂಪನಿಗಳು (Multinational Companies) ಭಾಗವಹಿಸಲಿದ್ದು, 3000ಕ್ಕೂ ಹೆಚ್ಚು ನಿರುದ್ಯೋಗಿ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶವನ್ನು ನೀಡಲಾಗುವುದು. ವಿಕಲಚೇತರಿಗೆ ಹಾಗೂ ಅಂಧರೂ ಕೂಡ ಮುಕ್ತವಾಗಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ವಿಶೇಷವಾಗಿ ಈ ಉದ್ಯೋಗ ಮೇಳದಲ್ಲಿ ನೋಂದಾಣಿಗಾಗಿ ಪ್ರವೇಶ ಶುಲ್ಕ ಇರುವುದಿಲ್ಲ (free entry).
ಯಾರೆಲ್ಲ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು?
ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಪದವಿ ಪಡೆದ ಅಥವಾ ಅನುತ್ತೀರ್ಣರಾದವರು ಈ ಮೇಳದಲ್ಲಿ ಭಾಗವಹಿಸಬಹುದು. ಆದರೆ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಆಗಸ್ಟ್ 10ರೊಳಗಾಗಿ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಆಗಸ್ಟ್ 17ನೇ ತಾರೀಕು ಜರುಗಲಿರುವ ಉದ್ಯೋಗ ಮೇಳವನ್ನು, ಬೆಳಗ್ಗೆ 10 ಗಂಟೆಗೆ ಈ ಉದ್ಯೋಗ ಮೇಳವನ್ನು ಇನ್ ಪೋಸಿಸ್ (Infosys) ಸಂಸ್ಥಾಪಕಿ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ (Sudhamurthi), ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Raj Kumar) ಉದ್ಘಾಟಿಸಲಿದ್ದಾರೆ.
ಗಮನಿಸಿ (Notice) :
ಹೆಚ್ಚಿನ ಮಾಹಿತಿಗಾಗಿ 9844159891/9108636275/990227401ಗೆ ಸಂಪರ್ಕಿಸಬಹುದು. ಆಗಸ್ಟ್ 10ನೇ ತಾರೀಕೂ ನೋಂದಾವಣೆಗೆ ಕೊನೆಯ ದಿನವಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




