JOB NEWS : ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ – ಈಗಲೇ ಅರ್ಜಿ ಸಲ್ಲಿಸಿ

Picsart 23 07 14 11 28 10 211

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ, ಶಿಕ್ಷಕರ ಅರ್ಹತಾ ಪರೀಕ್ಷೆಗೆ(Karnataka TET Exam) ಅರ್ಜಿ ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿಯನ್ನು ಕರೆಯಲಾಗಿದೆ. ಈ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಯಾವ ಅರ್ಹತೆಗಳು ಇರಬೇಕು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET Exam)ಗೆ ಅರ್ಜಿ ಆಹ್ವಾನ :

2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈಗಾಗಲೇ ಇದರ ಕುರಿತಾದ ಅಧಿಸೂಚನೆಯನ್ನು ಕೂಡ ಕರ್ನಾಟಕ ಶಿಕ್ಷಣ ಇಲಾಖೆಯು ಹೊರತಂದಿದೆ. ಅರ್ಹ ಅಭ್ಯರ್ಥಿಗಳು ಟಿಇಟಿ-2022ರ ಪರೀಕ್ಷೆಗೆ ( KARTET-2022 Exam) (Online) ಮೂಲಕ ಅರ್ಜಿಯನ್ನು ದಿನಾಂಕ 14-07-2023 ರಿಂದ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಎಷ್ಟು?, ಅಭ್ಯರ್ಥಿಗಳಿಗೆ ಬೇಕಾಗಿರುವ ಅರ್ಹತೆಗಳು ಹಾಗೂ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಕುರಿತು ಸಂಪೂರ್ಣ ಮಾಹಿತಿಯು ಕೆಳಗಿನಂತಿದೆ.

whatss

ಅಭ್ಯರ್ಥಿಗಳಿಗೆ ಸೂಚನೆಗಳು :

ಕರ್ನಾಟಕ ಶಿಕ್ಷಕರ ಅರ್ಹ ಪರೀಕ್ಷೆ-2023 ಕ್ಕೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ:14/07/2023 ರಿಂದ 05/08/2023ರ ಒಳಗಾಗಿ ಇಲಾಖಾ ವೆಬ್‌ಸೈಟ್ www.schooleducation.kar.nic.in ಮೂಲಕ ಸಲ್ಲಿಸುವದು.

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ಸ್ಕ್ಯಾನ್ ಮಾಡಲಾದ ತಮ್ಮ ಭಾವಚಿತ್ರ (5k to Okh) ಹಾಗೂ ಸಹಿಯನ್ನು (Skh 11 40kb) ಜೆ.ಪಿ.ಇ.ಜಿ. (J.P.E., Format) ನಮೂನೆಯಲ್ಲಿ ಅಪ್‌ಲೋಡ್ ಮಾಡುವುದು,

ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ Print out ನ್ನು ಪಡೆದುಕೊಳ್ಳುವುದು.

ಆನ್‌ಲೈನ್ ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮ:

ಹಂತ 1: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌
www.schooleducation.kar.nic.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಓದಿ, ಅರ್ಥೈಸಿಕೊಳ್ಳುವುದು.

ಹಂತ 2: “Registration’ ಮತ್ತು ‘Login’
ವಿವರಗಳೊಂದಿಗೆ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡುವುದು.

ಹಂತ 3:  ಸ್ಕಾನ್ ಮಾಡಿದ ಅಭ್ಯರ್ಥಿಯ ಭಾವಚಿತ್ರ (50KB ಕ್ಕಿಂತಲೂ ಕಡಿಮೆ) ಹಾಗೂ ಸಹಿಯನ್ನು (40KB ಕ್ಕಿಂತಲೂ ಕಡಿಮೆ) ಅಪ್‌ಲೋಡ್ ಮಾಡುವುದು.

ಹಂತ 4: Internet Banking/Debit Card/ Credit Card/ UPI 230,05€ ಚಲನ್ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕಿನಲ್ಲಿ ಮಾತ್ರ ಚಲನ್ ಮೂಲಕ ಶುಲ್ಕ ಪಾವತಿಸುವುದು) ಮೂಲಕವೇ ಪಾವತಿಸತಕ್ಕದ್ದು.

ಹಂತ 5: ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು www.schooleducation.kar.nic.in ವೆಬ್‌ಸೈಟ್‌ ಮೂಲಕ ಶುಲ್ಕ ಪಾವತಿಸಿದ ನಂತರ, ಅಭ್ಯರ್ಥಿಗಳ User name and Password ಬಳಸಿ ಡೌನ್‌ಲೋಡ್ ಮಾಡಿಕೊಳ್ಳುವುದು ಅರ್ಜಿ ಶುಲ್ಕ ಪಾವತಿಯಾದ ಎರಡು ದಿನಗಳ ನ೦ತರದಲ್ಲೂ ಪೇಮೆಂಟ್ ಸೈಟಿಸ್‌ (uyment Status) ಪೆಂಡಿಂಗ್ ಎಂದು ಕಂಡುಬಂದಲ್ಲಿ ಕೇಂದ್ರೀಕೃತ ದಾಖಲಾತಿ ಘಟಕವನ್ನು ಸಂಪರ್ಕಿಸುವುದು.

n5182898421689313855106fcec0503c5d5a8b02d1232c1d529d05986984af3c49940ef90ccd325380c58d6

ಹಂತ 6: ಅಭ್ಯರ್ಥಿಗಳು ಡೌನ್‌ಲೋಡ್ ಮಾಡಲಾದ ತಮ್ಮ ಆನ್‌ಲೈನ್ ಅರ್ಜಿಯನ್ನು ಮುಂದಿನ ದಿನಗಳಲ್ಲಿ ಯಾವುದೇ ಕಛೇರಿ ಸಂಬಂಧಿತ ಆಡಳಿತ ಸಂಪರ್ಕಕ್ಕಾಗಿ ತಮ್ಮ ಬಳಿ ಕಡ್ಡಾಯವಾಗಿ ಇರಿಸಿಕೊಳ್ಳುವುದು.

ಹಂತ 7:   KARTET 2023 ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಪಯೋಗದಲ್ಲಿರುವಂತಹ ತಮ್ಮ ಸ್ವಂತ ಮೊಬೈಲ್‌ನ ಸಂಪರ್ಕ ಸಂಖ್ಯೆಯನ್ನು ಹಾಗೂ ಇ-ಮೇಲ್ ಐಡಿಯನ್ನು ಆನ್‌ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸುವುದು.

ಹಂತ 8: ವೆಬ್‌ಸೈಟ್‌ನಲ್ಲಿ ನೀಡುವ ಹೆಚ್ಚುವರಿ ಮಾಹಿತಿಗಳನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು ಆಗಿಂದಾಗ್ಗೆ ಇಲಾಖಾ ವೆಬ್‌ಸೈಟ್ www.schooleducation.kar.nic.in ವೀಕ್ಷಿಸುವುದು.

KAR-TET 2023 ಪರೀಕ್ಷಾ ಶುಲ್ಕ :

ಸಾಮಾನ್ಯವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ :  ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- ರೂ. 700. ಪತ್ರಿಕೆ-1 ಹಾಗೂ ಪತ್ರಿಕೆ-2 ರೂ. 1000/-.

ಪ.ಜಾ/ಪ.ಪಂ/ ಪ್ರವರ್ಗ-1 ಅಭ್ಯರ್ಥಿಗಳಿಗೆ : ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- ರೂ. 350. ಪತ್ರಿಕೆ-1 ಹಾಗೂ ಪತ್ರಿಕೆ-2 ರೂ. 500/-.

ವಿಶೇಷ ಅಗತ್ಯಯುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ದಿಂದ ವಿನಾಯಿತಿ ಇರುತ್ತದೆ.

ಶಿಕ್ಷಕರ ಅರ್ಹತಾ ಪರೀಕ್ಷೆ ವೇಳಾಪಟ್ಟಿ:

ದಿನಾಂಕ 03-09-2023ರಂದು ಟಿಇಟಿ ಪರೀಕ್ಷೆ ( TET Exam-2023 ) ನಡೆಯಲಿದೆ. ಪತ್ರಿಕೆ-1ರ ಪರೀಕ್ಷೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಗೆ ನಡೆಯುತ್ತದೆ ಹಾಗೂ ಪತ್ರಿಕೆ-2 ರ ಪರೀಕ್ಷೆಯು ಮಧ್ಯಾಹ್ನ 2 ರಿಂದ ಸಂಜೆ 4.30ರವರೆಗೆ ನಡೆಯಲಿದೆ.

tel share transformed

ಪ್ರಮುಖ ದಿನಾಂಕಗಳು :

ಆನ್ಲೈನ್ ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 14/07/2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 5/08/2023
ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 5/08/2023
TET ಪರೀಕ್ಷೆಯ ದಿನಾಂಕ: 3/09/2023

ಪರೀಕ್ಷೆಯ ವೇಳಾಪಟ್ಟಿಯನ್ನು ಕೆಳಗೆ ನೀಡಲಾದ ಅಧಿಸೂಚನೆಯಲ್ಲಿ ನೋಡಿ ತಿಳಿದುಕೊಳ್ಳಬಹುದು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
TET ಪತ್ರಿಕಾ ಪ್ರಕಟಣೆ
ಇಲ್ಲಿ ಕ್ಲಿಕ್ ಮಾಡಿ 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!