Karnataka Rains : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

WhatsApp Image 2025 06 22 at 08.56.10 9a1c7c75

WhatsApp Group Telegram Group

ಬೆಂಗಳೂರು, ಜೂನ್ 22: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿಯಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಕಳೆದ ವರ್ಷಕ್ಕಿಂತ ಮುಂಚೆಯೇ ಮಾನ್ಸೂನ್ ಸಕ್ರಿಯವಾಗಿ, ಮೇ ತಿಂಗಳಿನಲ್ಲೇ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ಪ್ರಾರಂಭವಾಗಿದೆ. ಜೂನ್, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ಮತ್ತು ನೀರಾವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಜೂನ್ 26ರ ವರೆಗೆ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯ ವಾಯುಮಾನ ಬದಲಾವಣೆಯಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ ಇದೆ.

ಮೈಸೂರು, ಕೊಡಗು, ಶಿವಮೊಗ್ಗ, ಬೀದರ್, ಬಾಗಲಕೋಟೆ, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಅಧಿಕಾರಿಗಳು ಎಚ್ಚರಿಕೆ ಘೋಷಿಸಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!