WhatsApp Image 2025 09 21 at 5.16.33 PM

ಸೆಪ್ಟೆಂಬರ್ 22ರಿಂದ ರಾಜ್ಯಾದ್ಯಂತ ಜಾತಿಗಣತಿ ಸಮೀಕ್ಷೆ ನಡೆಸಲು ಸರ್ಕಾರದ ಅಧಿಕೃತ ಆದೇಶ

Categories:
WhatsApp Group Telegram Group

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ (ಜಾತಿಗಣತಿ) ನಿಗದಿಯಂತೆ ನಡೆಯುವುದು ಈಗ ಖಚಿತವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೇಳಿಕೆಯಂತೆ ಸಮೀಕ್ಷೆಯನ್ನು ಮುಂದೂಡಿಕೆ ಮಾಡದೇ, ದಿನಾಂಕ: 22-09-2025 ರಿಂದ 07-10-2025 ರವರೆಗೆ ರಾಜ್ಯದಾದ್ಯಂತ ಕೈಗೊಳ್ಳಲು ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಅನುಮೋದನೆ ಮತ್ತು ನಿರ್ಧಾರ

ರಾಜ್ಯ ಸರ್ಕಾರವು ಈ ಕುರಿತು ನಡವಳಿಯನ್ನು (ಆದೇಶ ಪತ್ರ) ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಲು ಅನುಮೋದನೆ ನೀಡಿದೆ.

ಆಯೋಗದ ಅಧ್ಯಕ್ಷರು, ಈ ಸಮೀಕ್ಷಾ ಕಾರ್ಯವನ್ನು ನಿರ್ದಿಷ್ಟ ದಿನಾಂಕಗಳಂದು ಕೈಗೊಳ್ಳಲು ಉದ್ದೇಶಿಸಿದ್ದು, ಈ ಬಗ್ಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು:

  1. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರ್ದೇಶನ ನೀಡಲಾಗಿದೆ.
  2. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ.
  3. ಸಮೀಕ್ಷಾ ಕಾರ್ಯದಲ್ಲಿ ಸಾರ್ವಜನಿಕರು ಸಂಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿದೆ.
jaati ganati

ಆಯೋಗದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಸರ್ಕಾರವು ದಿನಾಂಕ: 22-09-2025 ರಿಂದ 07-10-2025 ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ಅನುಮೋದಿಸಿ, ಈ ಆದೇಶವನ್ನು ಹೊರಡಿಸಿದೆ. ಈ ಮೂಲಕ ಈ ಪ್ರಮುಖ ಸಮೀಕ್ಷೆಯ ಬಗ್ಗೆ ಇದ್ದ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories