police recruitment

Police Recruitment: ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ; ಸಚಿವರ ಮಹತ್ವದ ಘೋಷಣೆ!

Categories:
WhatsApp Group Telegram Group

ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್ ಇಲಾಖೆಯ ನೇಮಕಾತಿಗಳಿಗೆ ಸಂಬಂಧಿಸಿದಂತೆ ವಯೋಮಿತಿ ಸಡಿಲಿಕೆ ನೀಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ, ಸರ್ಕಾರವು ಈಗ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಈ ಕುರಿತು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಮಾಹಿತಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶೀಘ್ರದಲ್ಲೇ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ. “ಇನ್ನೂ ಮೂರು ದಿನಗಳಲ್ಲಿ ಒಟ್ಟು 4,600 ಪೊಲೀಸ್ ಪೇದೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಿದ್ದೇವೆ” ಎಂದು ಅವರು ಘೋಷಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಎಂದ ಸಚಿವರು, ಶೀಘ್ರದಲ್ಲೇ ನೇಮಕಾತಿ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದರು. ಈ ಮೂಲಕ ಪೊಲೀಸ್ ಹುದ್ದೆಗಳಿಗಾಗಿ ಕಾಯುತ್ತಿದ್ದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಡಾ. ಪರಮೇಶ್ವರ್ ಅವರು ದೊಡ್ಡ ಸುದ್ದಿಯನ್ನೇ ನೀಡಿದ್ದಾರೆ.

ಎಲ್ಲಾ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ

ಕಳೆದ ಕೆಲವು ದಿನಗಳ ಹಿಂದಷ್ಟೇ, ಸರ್ಕಾರಿ ಕೆಲಸಗಳಿಗೆ ವಯೋಮಿತಿ ಸಡಿಲಿಕೆ ಮಾಡಬೇಕು ಎಂಬ ಅಭ್ಯರ್ಥಿಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು ಸಂತಸದ ಸುದ್ದಿ ನೀಡಿತ್ತು.

ಸರ್ಕಾರವು ಎಲ್ಲಾ ನೇಮಕಾತಿಗಳಲ್ಲೂ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ, ಎಲ್ಲ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೂ ಮೂರು ವರ್ಷಗಳ ವಯೋಮಿತಿಯನ್ನು ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶವು ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಿಗೂ ಅನ್ವಯವಾಗಲಿದೆ.

ಈ ವಯೋಮಿತಿ ಸಡಿಲಿಕೆಯ ನಿರ್ಧಾರವು ಉದ್ಯೋಗಾಕಾಂಕ್ಷಿಗಳ ಹೋರಾಟದ ಫಲವಾಗಿದ್ದು, ಇದರಿಂದ ಹೆಚ್ಚಿನ ಯುವಕರಿಗೆ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ದೊರೆತಿದೆ. ಈ ಹಿಂದೆ, ಖಾಲಿ ಇರುವ ಪೊಲೀಸ್ ಪೇದೆ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನೇಮಕಾತಿ ವಿಳಂಬದಿಂದ ಹಲವು ಅಭ್ಯರ್ಥಿಗಳ ವಯೋಮಿತಿ ಮೀರುತ್ತಿದೆ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories