rain may 19th

Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ಯೆಲ್ಲೋ ಅಲರ್ಟ್..!

WhatsApp Group Telegram Group

ಕಳೆದ 24 ಗಂಟೆಗಳಲ್ಲಿ, ಕರ್ನಾಟಕ, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ, ಸಿಕ್ಕಿಂ ಮತ್ತು ಕೇರಳ ಲಕ್ಷದ್ವೀಪದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ.

ಒಂದು ವಾರದಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿರುವುದು ಎಲ್ಲರಿಗೂ ಖುಷಿಯ ವಿಷಯವಾಗಿದೆ. ಇಂದು ಕೂಡ (may 19) ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಈ ಮಳೆಯು 26ನೇ ತಾರೀಖಿನವರೆಗೂ ಹೀಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಹಲವೆಡೆಯೂ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವಡೆ ಬೆಳಗ್ಗೆಯಿಂದ ಮೋಡಕವಿದ ವಾತಾವರಣವಿದ್ದು ಸಂಜೆಯ ವೇಳೆಯಲ್ಲಿ ಮಳೆ ಬರುತ್ತಿದೆ.

ಯಾವ ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ :

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಗುಲ್ಬರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಮಳೆಯೂ 26ನೇ ತಾರೀಕಿನವರೆಗೂ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಗಾಳಿಯೊಂದಿಗೆ (40-50 ಕಿ.ಮೀ ವೇಗ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರಿನಲ್ಲಿ  ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಮೇ 20 ನಾಳೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಇನ್ನು ಮೂರು ಗಂಟೆಗಳಲ್ಲಿ ಖಂಡಿಯವಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories