ಕರ್ನಾಟಕದಾದ್ಯಂತ ಮುಂಗಾರು ಮಳೆ ಪುನಃ ಸಕ್ರಿಯವಾಗಿದೆ. ಇಂದು ಸಂಜೆಯಿಂದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲು ಪ್ರಾರಂಭಿಸಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಜೆ 7 ಗಂಟೆಯ ನಂತರ ಸತತವಾಗಿ ಮಳೆ ಬೀಳುತ್ತಿದೆ. ರಾಜ್ಯದ ಇತರ ಭಾಗಗಳಲ್ಲಿ ಮಳೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಈಗ ಪುನಃ ತನ್ನ ಶಕ್ತಿಯನ್ನು ತೋರಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಿಗ್ಗೆ ಬಿಸಿಲು ಕಾಣಿಸಿಕೊಂಡರೂ, ಸಂಜೆಯ ನಂತರ ಧಾರಾಕಾರ ಮಳೆ ಪ್ರಾರಂಭವಾಗಿದೆ. ಕೆಲವು ಪ್ರದೇಶಗಳಲ್ಲಿ ಮಳೆ ರಾತ್ರಿ ವರೆಗೂ ಮುಂದುವರೆಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ನಿನ್ನೆ ಹುಬ್ಬಳ್ಳಿ, ಶಿಗ್ಗಾವಿ, ಹಾವೇರಿ ಮತ್ತು ಧಾರವಾಡದಲ್ಲಿ ಸೌಮ್ಯ ಮಳೆ ಆಗಿದೆ.
ಮುಂದಿನ ಮೂರು ದಿನಗಳ ಕಾಲ (ಆಗಸ್ಟ್ 11ರ ವರೆಗೆ) ರಾಜ್ಯದ ಮಲೆನಾಡು, ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಆಗಾಗ್ಗೆ ಬಿಸಿಲು ಕಾಣಿಸಿಕೊಂಡರೂ, ಜೋರಾದ ಗಾಳಿ ಮತ್ತು ಧಾರಾಕಾರ ಮಳೆಯ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಹಲವಾರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ?
ಹವಾಮಾನ ಇಲಾಖೆಯು ಹಾವೇರಿ, ಬೆಳಗಾವಿ, ಧಾರವಾಡ, ಗದಗ, ಬೀದರ್, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಮಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಏಕಾಏಕಿ ಭಾರೀ ಮಳೆಗೆ ಕಾರಣ ಏನು?
ಮಾನ್ಸೂನ್ ಸ್ಟ್ರಫ್ (Monsoon Trough) ಅಮೃತಸರ, ಪಟಿಯಾಲ, ಮುಜಫರ್ನಗರ, ಖೇರಿ ಮತ್ತು ವಾಲ್ಮೀಕಿ ನಗರದ ಮೂಲಕ ಹಾದುಹೋಗಿದೆ. ಇದು ಸಮುದ್ರ ಮಟ್ಟದಿಂದ ಪೂರ್ವ-ಈಶಾನ್ಯದ ಕಡೆಗೆ ಅರುಣಾಚಲ ಪ್ರದೇಶದತ್ತ ಸಾಗುತ್ತಿದೆ. ಅದೇ ಸಮಯದಲ್ಲಿ, ತಮಿಳುನಾಡಿನ ಕರಾವಳಿಯ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಚಂಡಮಾರುತದ ಪರಿಚಲನೆ ಸಕ್ರಿಯವಾಗಿದೆ. ಈ ವಾಯುಮಂಡಲದ ಹರಿವು ಸಮುದ್ರ ಮಟ್ಟದಿಂದ 1.5 ರಿಂದ 7.6 ಕಿಲೋಮೀಟರ್ ಎತ್ತರದವರೆಗೆ ವ್ಯಾಪಿಸಿದೆ.
ಕರ್ನಾಟಕದ ಒಳನಾಡು ಪ್ರದೇಶಗಳಿಗೆ ಸಂಬಂಧಿಸಿದಂತೆ, ಪೂರ್ವ-ಮಧ್ಯ ಅರಬ್ಬೀ ಸಮುದ್ರದ ದಕ್ಷಿಣ ಭಾಗದಿಂದ ಬಂಗಾಳ ಕೊಲ್ಲಿಯ ದಕ್ಷಿಣ ಭಾಗದವರೆಗೆ (10°N ರೇಖಾಂಶದಲ್ಲಿ) ಮತ್ತು ತಮಿಳುನಾಡಿನ ಕರಾವಳಿಯ ನೈಋತ್ಯ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ರಿಂದ 7.6 ಕಿಲೋಮೀಟರ್ ಎತ್ತರದಲ್ಲಿ ಚಂಡಮಾರುತದ ಸಂಚಾರ ಕಂಡುಬಂದಿದೆ.
ಈ ಹವಾಮಾನ ಬದಲಾವಣೆಗಳ ಕಾರಣದಿಂದಾಗಿ ರಾಜ್ಯದಲ್ಲಿ ಅತ್ಯಧಿಕ ಮಳೆ ಸುರಿಯುತ್ತಿದೆ. ಮಲೆನಾಡು ಪ್ರದೇಶದ ಜೊತೆಗೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆ ನಿರೀಕ್ಷಿಸಲಾಗಿದೆ. ಆಗಸ್ಟ್ 11ರ ವರೆಗೆ ಈ ಮಳೆಯು ಮುಂದುವರೆಯುವ ಸಾಧ್ಯತೆ ಇದೆ.