ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಮೇ 20ರ ವರೆಗೆ ಮತ್ತು ಕರಾವಳಿ ಪ್ರದೇಶಗಳಲ್ಲಿ ಮೇ 21ರ ವರೆಗೆ ಹವಾಮಾನ ಎಚ್ಚರಿಕೆ ಜಾರಿಯಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮೇ 18ರಂದು: ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಬರಲಿದೆ.
ಮುಂದಿನ 5 ದಿನಗಳಲ್ಲಿ ರಾಜ್ಯದ ಗರಿಷ್ಠ ತಾಪಮಾನ 2-3°C ಕಡಿಮೆಯಾಗಬಹುದು. ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಗುಡುಗು-ಮಿಂಚಿನೊಂದಿಗೆ ಭಾರೀ ಮಳೆ ಸಾಧ್ಯ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ 21°C ರಷ್ಟಿರಬಹುದು.
ಮೇ 19ರಂದು: ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆ ಸಾಧ್ಯ.
ಮೇ 20ರಂದು: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಹಾವೇರಿ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ಮೇ 21ರಂದು: ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಗುಡುಗು-ಮಿಂಚಿನೊಂದಿಗೆ ಮಳೆ ಸಾಧ್ಯ.
ಮೇ 22 ಮತ್ತು 23ರಂದು: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದ ನಿವಾಸಿಗಳು ಮಳೆಗೆ ತಯಾರಾಗಿ, ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.