ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಮಳೆ ತನ್ನ ಪೂರ್ಣ ಶಕ್ತಿಯೊಂದಿಗೆ ಸಕ್ರಿಯವಾಗಿದೆ. ಕೇರಳದ ಮೂಲಕ ಪ್ರವೇಶಿಸಿದ ಈ ಮುಂಗಾರು ಒಂದು ವಾರದಿಂದಲೂ ರಾಜ್ಯದ ವಿವಿಧ ಭಾಗಗಳಲ್ಲಿ ಸತತವಾಗಿ ಮಳೆ ಸುರಿಸುತ್ತಿದೆ. ಮಂಗಳೂರು ಸೇರಿದಂತೆ ಕರಾವಳಿಯ ಹಲವೆಡೆ ಧಾರಾಕಾರ ಮಳೆ ಬೀಳುತ್ತಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಗೆ ಸಿದ್ಧರಾಗುವಂತೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಮುಂಗಾರು ಮಳೆ ಮುಂಚಿತವಾಗಿ ಪ್ರಾರಂಭವಾಗಿದೆ. ಮುಂದಿನ ಮೂರು ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆಯಿಂದ ಅನೇಕ ಅಡಚಣೆಗಳು ಉಂಟಾಗಿವೆ. ಮರಗಳು ಉರುಳಿ ರಸ್ತೆಗಳನ್ನು ಅಡ್ಡಗಟ್ಟಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ಕಟ್ಟೆತ್ತಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗಿದೆ. ಮರಗಳು ಕುಸಿದು ವಾಹನಗಳಿಗೆ ಹಾನಿಯಾಗುತ್ತಿದ್ದು, ನೀರಿನಲ್ಲಿ ಸಿಲುಕಿದ ವಾಹನಗಳ ಸವಾರರು ತೊಂದರೆಗೊಳಗಾಗಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು ಮತ್ತು ಮೂಡಬಿದ್ರೆ ಪ್ರದೇಶಗಳಲ್ಲಿ ಭಾರೀ ಮಳೆ ನಡೆಯುತ್ತಿದೆ. ಅರಬ್ಬಿ ಸಮುದ್ರದಲ್ಲಿ ಪ್ರಬಲ ಅಲೆಗಳ ಕಾರಣದಿಂದಾಗಿ ಕಡಲ್ಗಾಳಿ ಮತ್ತು ಕೋರೆತ ಉಂಟಾಗಿದ್ದು, ಮೀನುಗಾರರನ್ನು ಸಮುದ್ರಕ್ಕೆ ಹೋಗದಂತೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತವು ಎಚ್ಚರಿಕೆ ವಿಧಿಸಿದೆ.
ಮೇ 31ರ ವರೆಗೆ ಮಳೆ ನಿಲ್ಲುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ನಿರೀಕ್ಷಿಸಿದೆ. ಮೇ 26ರಿಂದ ಮೇ 31ರವರೆಗೆ ಗಂಟೆಗೆ 40-50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಭಾರೀ ಮಳೆ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸ್ಥಳೀಯ ಮಳೆ ಆಗಬಹುದು. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ನಿರಂತರ ಮಳೆ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಈ ಮಳೆ ಜೂನ್ 2ರ ವರೆಗೂ ಮುಂದುವರೆಯಲಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.