WhatsApp Image 2025 05 07 at 1.33.56 PM

Karnataka Rains : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಾರಿ ಮುನ್ಸೂಚನೆ.! ಯಾವ ಜಿಲ್ಲೆಗಳಿಗೆ ಎಚ್ಚರಿಕೆ?

WhatsApp Group Telegram Group

ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ (May 12ರ ವರೆಗೆ) ಗುಡುಗು, ಮಿಂಚು ಮತ್ತು ಗಾಳಿ ಸಹಿತ ಜೋರಾದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸ್ಥಳೀಯವಾಗಿ ಸಾಧಾರಣದಿಂದ ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 KMPH ವೇಗದ ಗಾಳಿ ಸಹಿತ ಮಳೆ ಬರಲಿದೆ.

ಮುಖ್ಯ ಹವಾಮಾನ ಪರಿಸ್ಥಿತಿ:

ದಕ್ಷಿಣ ತೆಲಂಗಾಣ, ತಮಿಳುನಾಡು ಮತ್ತು ರಾಯಲಸೀಮಾ ಪ್ರದೇಶದಲ್ಲಿ ಸಮುದ್ರ ಮಟ್ಟದಿಂದ 0.9 KM ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಕಂಡುಬಂದಿದೆ. ದಕ್ಷಿಣ ತಮಿಳುನಾಡಿನ ಕೆಲವು ಭಾಗಗಳಲ್ಲಿ ಈ ಪರಿಚಲನೆ ಕಡಿಮೆಯಾಗಿದೆ.

ಜಿಲ್ಲಾವಾರು ಮಳೆ ಅಂದಾಜು:

ಬುಧವಾರ (May 8): ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಗಾಳಿ-ಗುಡುಗು ಸಹಿತ ಮಳೆ.

ಬೆಂಗಳೂರು ಸುತ್ತಮುತ್ತ: ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮಳೆ.

ಒಣ ಹವಾಮಾನ: ಬಳ್ಳಾರಿ, ದಾವಣಗೆರೆ, ವಿಜಯನಗರ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ.

ಕರಾವಳಿ ಪ್ರದೇಶ: ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮಧ್ಯಮ ಮಳೆ, ಉತ್ತರ ಕನ್ನಡದಲ್ಲಿ ಹಗುರ ಮಳೆ. ಉಡುಪಿಯಲ್ಲಿ ಒಣ ಹವೆ.

ಬೆಂಗಳೂರು ಹವಾಮಾನ:

ಭಾಗಶಃ ಮೋಡಕವಿದ ಆಕಾಶ, ಗಂಟೆಗೆ 30-40 KMPH ವೇಗದ ಗಾಳಿ-ಗುಡುಗು ಸಹಿತ ಮಳೆ ಸಾಧ್ಯತೆ.

ಗರಿಷ್ಠ ತಾಪಮಾನ: 34°C, ಕನಿಷ್ಠ: 21°C.

ಬಿಸಿಲಿನ ತಾಪಮಾನ ಹೆಚ್ಚಾಗಿರಬಹುದು.

ಮುಂದಿನ 5 ದಿನಗಳಲ್ಲಿ ರಾಜ್ಯದ ತಾಪಮಾನದಲ್ಲಿ ಗಮನಾರ್ಹ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories