ಬೆಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ, ಸೆಪ್ಟೆಂಬರ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ ಜಿಲ್ಲೆಯ ದೇವಣಗಾಂವದಲ್ಲಿ ಭೀಮಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದ್ದು, ನದಿಪಾತ್ರದ ಮತ್ತು ತಗ್ಗು ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಹವಾಮಾನ
ಮುಂದಿನ 48 ಗಂಟೆಗಳವರೆಗೆ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಈ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಬಹುದು.
ರಾಜ್ಯದಲ್ಲಿ ಮಳೆಯ ಮುನ್ಸೂಚನೆ
ಸೆಪ್ಟೆಂಬರ್ 24:
ಕರಾವಳಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಬಿರುಗಾಳಿ ಮತ್ತು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 25:
ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಸೆಪ್ಟೆಂಬರ್ 26:
ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ಸೆಪ್ಟೆಂಬರ್ 27:
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 28 ಮತ್ತು 29:
ಕರಾವಳಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




