SSLC ಫಲಿತಾಂಶ ನಾಳೆ ಪ್ರಕಟ. ಮೊಬೈಲ್ ನಲ್ಲಿ ರಿಸಲ್ಟ್ ನೋಡಿ! ಇಲ್ಲಿದೆ ಲಿಂಕ್

WhatsApp Image 2025 05 01 at 4.33.19 PM

WhatsApp Group Telegram Group

ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿದ್ದ ಕರ್ನಾಟಕ ಎಸ್.ಎಸ್.ಎಲ್.ಸಿ ಪರೀಕ್ಷೆಯ (SSLC Exam) ಫಲಿತಾಂಶದ ಅಧಿಕೃತ ಮಾಹಿತಿ ಬಿಡುಗಡೆಯಾಗಿದೆ. ನಾಳೆ (may 2) 12:30 ಗಂಟೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಘೋಷಿಸಲಾಗುವುದು. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB)ದ ಅಧ್ಯಕ್ಷ ಶ್ರೀ ಎಚ್. ಬಸವರಾಜೇಂದ್ರ ಅವರು ಪತ್ರಿಕಾ ಹೇಳಿಕೆ ನೀಡಿ ಮಾಹಿತಿ ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka SSLC Result 2025

ಫಲಿತಾಂಶ ನೋಡುವ ಡೈರೆಕ್ಟ ಲಿಂಕ್ ಮತ್ತು ಫೇಲ್ ಆದರೆ ಮುಂದೆ ಏನು ಮಾಡಬೇಕು ಎನ್ನುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 12:30 ಗಂಟೆ ನಂತರ ಲಭ್ಯವಾಗಲಿದೆ.

ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್‌ ಅನ್ನು ಭೇಟಿ ನೀಡಬಹುದಾಗಿದೆ
​https://kseab.karnataka.gov.in​
https://karresults.nic.in​
https://sslc.karnataka.gov.in

Picsart 25 05 01 15 49 27 346
ಫಲಿತಾಂಶನೋಡುವುದು ಹೇಗೆ?

ಅಧಿಕೃತ ಸೂಚನೆಯಂತೆ, ಫಲಿತಾಂಶವನ್ನು ಮೇ 02 ರಂದು ಬೆಳಗ್ಗೆ 12:30 ಕ್ಕೆ ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಿಸಲಾಗುವುದು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEAB ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು 2025 ಅನ್ನು ಅಧಿಕೃತ ವೆಬ್‌ಸೈಟ್‌ https://karresults.nic.in/ ಮತ್ತು https://kseab.karnataka.gov.in/ ನಲ್ಲಿ ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಕರ್ನಾಟಕ SSLC ಫಲಿತಾಂಶ 2025 ಡೌನ್‌ಲೋಡ್ ಮಾಡುವುದು ಹೇಗೆ ಎಂಬುದನ್ನು ಪರಿಶೀಲಿಸಿ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಈಗಲೇ ನೀಡ್ಸ್ ಆಫ್ ಪಬ್ಲಿಕ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ

app download

ಹಂತ 1: kseab.karnataka.gov.in ಮತ್ತು karresults.nic.in ಅಧಿಕೃತ ವೆಬ್‌ಸೈಟ್‌ಗಳಿಗೆ ಹೋಗಿ

ಹಂತ 2: ಹೋಂ ಪೇಜ್ ನಲ್ಲಿ ಕರ್ನಾಟಕ SSLC ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಲು ಲಿಂಕ್ ಕ್ಲಿಕ್ ಮಾಡಿ.

ಹಂತ 3: ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಬಳಸಿಕೊಂಡು ಲಾಗ್ ಇನ್ ಮಾಡಿ.

ಹಂತ 4: “Submit” ಬಟನ್ ಕ್ಲಿಕ್ ಮಾಡಿ.

ಹಂತ 5: ಕರ್ನಾಟಕ SSLC ಫಲಿತಾಂಶ 2025 ಅನ್ನು ಸ್ಕ್ರೀನ್ ಮೇಲೆ ಪ್ರದರ್ಶಿಸಲಾಗುತ್ತದೆ

ಹಂತ 6: ಹೆಚ್ಚಿನ ರೆಫೆರೆನ್ಸ್ ಗಾಗಿ ಫಲಿತಾಂಶ ಡೌನ್‌ಲೋಡ್ ಮಾಡಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ

ಅನುತ್ತೀರ್ಣರಾದರೆ ಮುಂದೇನು?

ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!