ಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ | SSLC Result 2024 @karresults.nic.in

WhatsApp Image 2024 04 25 at 6.48.24 AM

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಲಿಯು ಏಪ್ರಿಲ್ 15 ರಿಂದ SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯವನ್ನು ಆರಂಭಿಸಿದ್ದು, ಈ ಪರೀಕ್ಷೆಯ ಫಲಿತಾಂಶ ವನ್ನು ಮೇ 08, 2024 ರಂದು ಪ್ರಕಟಿಸಲಾಗುವುದು ಎಂದು ಅಧಿಕೃತ ಮೂಲಗಳ ಪ್ರಕಾರ ಮಾಹಿತಿ ತಿಳಿದು ಬಂದಿದೆ, ಒಂದು ವೇಳೆ ಫಲಿತಾಂಶ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡುವ ಕಾರ್ಯದಲ್ಲಿ ವಿಳಂಬವಾದಲ್ಲಿ ಒಂದೆರಡು ದಿನಗಳು ವ್ಯತ್ಯಾಸವಾಗಬಹುದು. ಒಂದು ವೇಳೆ ಅದಕ್ಕೂ ಮೊದಲು ಸಾಧ್ಯವಾದಲ್ಲಿ ಫಲಿತಾಂಶ ಬಿಡುಗಡೆ ಆಗಲಿದೆ ಎಂದಿವೆ ಮೂಲಗಳು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಎಸ್ ಎಸ್ ಎಲ್ ಸಿ ಪರೀಕ್ಷಾ  ಫಲಿತಾಂಶ 2024

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ  (KSEAB) ಎಸ್ ಎಸ್ ಎಲ್ ಸಿ ಪರೀಕ್ಷಾ  ಫಲಿತಾಂಶಗಳನ್ನು ಇದೇ ತಿಂಗಳ ಕೊನೆಯ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದ್ದು, ಮಂಡಳಿ ಅಧಿಕೃತ ವೆಬ್ ಸೈಟ್ ಗಳಲ್ಲಿ  ಪ್ರಕಟಿಸಲಾಗುತ್ತದೆ. ಆದರೆ ಮಂಡಳಿಯು ಈ ಬಗೆ ಯಾವುದೇ ಅಧಿಕೃತ ಘೋಷಣೆ ಇದುವರೆಗೂ ಮಾಡಿಲ್ಲ.

SSLC Result Date :

ಈಗಾಗಲೇ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು. ಮುಂದಿನ 20 ದಿನಗಳಲ್ಲಿ  ಮಾಪನ ಕಾರ್ಯ ಮುಗಿಯುವ ಸಾಧ್ಯತೆಯಿದ್ದು. ಏಪ್ರಿಲ್ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಗಳಲ್ಲಿ ಮಾತ್ರ ವೀಕ್ಷಿಸಬಹುದು. ಫಲಿತಾಂಶ ಪ್ರಕಟಿಸಲು ಸರ್ಕಾರ ಯಾವುದೇ  ಅಧಿಕೃತ ಆಪ್ ಬಿಡುಗಡೆ ಮಾಡಿಲ್ಲ. ಆದ್ದರಿಂದ ಖಾಸಗಿ ಆಪ್ ಗಳ ಹಾವಳಿಯಿಂದ ಎಚ್ಚರ!

SSLC ಫಲಿತಾಂಶ ಗ್ರೇಡ ಸಿಸ್ಟಮ್

563-625 ಅಂಕಗಳು ಎ+ ಗ್ರೇಡ್

500-562 ಅಂಕಗಳು ಎ ಗ್ರೇಡ್

438-499 ಅಂಕಗಳು B+ ಗ್ರೇಡ್

375-437 ಅಂಕಗಳು ಬಿ ಗ್ರೇಡ್

313-374 ಅಂಕಗಳು  C+ ಗ್ರೇಡ್

219-312 ಅಂಕಗಳು C ಗ್ರೇಡ್

ಫಲಿತಾಂಶ ನೋಡುವುದು ಹೇಗೆ?

ಈ ಕೆಳಗಿನ ಅಧಿಕೃತ ವೆಬ್ಸೈಟ್ ಗಳಲ್ಲಿ  ಫಲಿತಾಂಶ ಪ್ರಕಟವಾಗಲಿದೆ :

karresults.nic.in

kseeb.kar.nic.in

ಈ ಮೇಲಿನ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ  ನಿಮ್ಮ ರಿಜಿಸ್ಟರ್ ನಂಬರ್ ಮತ್ತು ಡೇಟ್ ಆಫ್ ಬರ್ತ್  ಎಂಟರ್ ಮಾಡಿ Sumbit ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಫಲಿತಾಂಶ ಕಾಣುತ್ತದೆ. ಫಲಿತಾಂಶ ವನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರಿಂಟ್ ತೆಗೆದುಕೊಳ್ಳಬಹುದು.

ಅನುತ್ತೀರ್ಣರಾದರೆ ಮುಂದೇನು?

ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.

ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಕರವಾದ ಮತ್ತು ಸ್ಪಷ್ಟ ಮಾಹಿತಿ ತಕ್ಷಣ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!