bikara male

ವಾಯುಭಾರ ಕುಸಿತದ, ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಿಗೆ 10 ದಿನ ಭಾರಿ ಮಳೆ ಮುನ್ಸೂಚನೆ.!

Categories:
WhatsApp Group Telegram Group

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಅಕ್ಟೋಬರ್ 23 ರಿಂದ ಮುಂದಿನ 10 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಕ್ಟೋಬರ್ 23 ರಂದು ಬೆಂಗಳೂರಿನಲ್ಲಿ ಹೆಚ್ಚು ಮಳೆಯ ನಿರೀಕ್ಷೆಯಿದೆ. ಇದರ ಜೊತೆಗೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ.

ರಾಜ್ಯದ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ವಾಯುಭಾರ ಕುಸಿತದಿಂದ ಭಾರೀ ಮಳೆ ಸಾಧ್ಯತೆ

ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿರುವುದರಿಂದ, ಅಕ್ಟೋಬರ್ 23 ಅಥವಾ 24 ರಂದು ವಾಯುಭಾರ ಕುಸಿತವಾಗುವ ಸಂಭವವಿದೆ. ಇದರಿಂದಾಗಿ ಮುಖ್ಯವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮುಂದುವರೆಯಲಿದೆ ಮಳೆ ಆರ್ಭಟ

ಈ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರಿನಲ್ಲಿಯೂ ಅಕ್ಟೋಬರ್ 23 ಮತ್ತು 24 ರಂದು ಭಾರಿ ಮಳೆಯಾಗುವ ಸಂಭವವಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಮಳೆ ಮುಂದುವರೆಯಲಿದ್ದು, ಕನಿಷ್ಠ ಮುಂದಿನ 10 ದಿನಗಳವರೆಗೆ ಇದೇ ರೀತಿಯ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಒಂದೆರಡು ದಿನಗಳಲ್ಲಿ ಭಾರೀ ಮಳೆಯಾಗಬಹುದು ಎಂದು IMD ವರದಿ ಮಾಡಿದೆ. ಅಲ್ಲದೆ, AccuWeather ವರದಿಯ ಪ್ರಕಾರ, ಅಕ್ಟೋಬರ್ 23 ರಂದು ಶೇಕಡಾ 58ರಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಬೆಳಗ್ಗಿನ ಜಾವವೇ ಶೇಕಡಾ 55ರಷ್ಟು ಮಳೆ ಬೀಳುವ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಮಳೆಯ ನಿರೀಕ್ಷೆ?

ಅಕ್ಟೋಬರ್ 23 ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಶೇ. 30ರಷ್ಟು ಹೆಚ್ಚು ಮಳೆಯ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ನಿರೀಕ್ಷಿತ ಭಾರೀ ಮಳೆಯು ಈ ಕೊರತೆಯನ್ನು ತುಂಬುವ ಸಾಧ್ಯತೆ ಇದೆ ಎಂದು KSNDMC ಹವಾಮಾನಶಾಸ್ತ್ರಜ್ಞರು ತಿಳಿಸಿದ್ದಾರೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories