ಆರ್.ಎಲ್. ಜಾಲಪ್ಪ ಅಕಾಡೆಮಿ(RL Jalappa Academy): ಹಿಂದುಳಿದ ವರ್ಗಗಳ ಯುವಕರಿಗೆ ಉಚಿತ ತರಬೇತಿ
ಬೆಂಗಳೂರು: ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿ ಇರುವ ಆರ್.ಎಲ್. ಜಾಲಪ್ಪ ಅಕಾಡೆಮಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಕೆಎಎಸ್(KAS), ಎಫ್‌ಡಿಎ(FDA) ಮತ್ತು ಎಸ್‌ಡಿಎ(SDA) ಪರೀಕ್ಷೆಗಳ ಜೊತೆಗೆ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್(Sub inspector) ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಮೀಣ ಭಾಗದ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಈ ತರಬೇತಿ ನೀಡಲಾಗುತ್ತಿದ್ದು, ನಾಲ್ಕು ತಿಂಗಳ ಕಾಲ ಸುದೀರ್ಘ ಮಾರ್ಗದರ್ಶನವನ್ನು ಉಚಿತವಾಗಿ ಒದಗಿಸಲಾಗುತ್ತದೆ. ಈ ತರಬೇತಿಗಳು ಹಿಂದುಳಿದ ವರ್ಗಗಳ ಯುವಕ-ಯುವತಿಯರ ವೃತ್ತಿ ನೈಪುಣ್ಯವನ್ನು ಹೆಚ್ಚಿಸಲು ಸಹಾಯಕವಾಗುವವು. ಐಎಎಸ್, ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತರಬೇತಿ ನೀಡುವ ಈ ಅಕಾಡೆಮಿಯಲ್ಲಿ ಯಾವುದೇ ಪದವಿ(degree) ಪಡೆದವರು ಭಾಗವಹಿಸಬಹುದು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳು ಆಯ್ಕೆಯಲ್ಲಿ ನಿರ್ಣಾಯಕವಾಗಿರುವುದರಿಂದ, ಅರ್ಹತಾ ಪದವಿಯಲ್ಲಿ ಕಡಿಮೆ ಅಂಕಗಳನ್ನು ಪಡೆದವರೂ ಯಶಸ್ಸು ಕಾಣಬಹುದಾಗಿದೆ. ಹಿಂದುಳಿದ ವರ್ಗಗಳ ಯುವಕರಿಗೆ ಆಡಳಿತ ಹುದ್ದೆಗಳಲ್ಲಿ ಅವಕಾಶ ನೀಡುವುದೇ ಅಕಾಡೆಮಿಯ ಉದ್ದೇಶವಾಗಿದೆ.
ಸೋಲೂರಿನಲ್ಲಿರುವ ತರಬೇತಿ ಕೇಂದ್ರವು ನೆಲಮಂಗಲದಿಂದ 15 ಕಿ.ಮೀ ದೂರದಲ್ಲಿದೆ. ಆಸಕ್ತ ಅಭ್ಯರ್ಥಿಗಳು http://www.rljacademy.in/about.html ವೆಬ್‌ಸೈಟ್ ಮೂಲಕ ಆನ್‌ಲೈನ್(Online)ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9731480759, 7337705513 ಸಂಖ್ಯೆಗಳ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 31, 2024. ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕೂಡ ಇದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




