WhatsApp Image 2025 06 26 at 20.51.37 ea47b789

ಸಿಇಟಿ ಕೌನ್ಸೆಲಿಂಗ್ ಯಾವಾಗ ಎಂದು ಕಾಯ್ತಿದ್ದೀರಾ, ಇಲ್ಲಿದೆ ಗುಡ್ ನ್ಯೂಸ್ ಈ ದಿನಾಂಕದಿಂದ ಪ್ರಾರಂಭ.!

Categories:
WhatsApp Group Telegram Group


ಬೆಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾದ ನಂತರ ಕೌನ್ಸೆಲಿಂಗ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಬಂತು. ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆ ಈ ಬಾರಿ ವಿಳಂಬವಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಒತ್ತಡಕ್ಕೊಳಗಾಗಿದ್ದಾರೆ. ಯಾವ ಕಾಲೇಜು ಸಿಗುತ್ತದೆ ಎಂಬ ಅನಿಶ್ಚಿತತೆ ಅವರನ್ನು ಬಾಧಿಸುತ್ತಿದೆ. ಎಲ್ಲವೂ ಸರಿಯಾಗಿದ್ದರೆ ಈ ವಾರವೇ ಸಿಇಟಿ ಕೌನ್ಸೆಲಿಂಗ್ ನಡೆಯಬೇಕಿತ್ತು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಇತರ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ಇನ್ನೂ ಅಂತಿಮಗೊಳ್ಳದ ಕಾರಣ ಈ ವಿಳಂಬ ಉಂಟಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಜುಲೈ ಮೊದಲ ವಾರದಲ್ಲಿ ಸಿಇಟಿ ಕೌನ್ಸೆಲಿಂಗ್ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಪ್ರಸ್ತುತ, ಇಂಜಿನಿಯರಿಂಗ್ ಕೋರ್ಸ್‌ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೈಸೇರಿದೆ. ಆದರೆ, ಅಂತಿಮ ಸೀಟ್ ಮ್ಯಾಟ್ರಿಕ್ಸ್ ಸಿದ್ಧವಾಗದಿರುವುದರಿಂದ ಆಯ್ಕೆ ನಮೂದಿಸಲು (ಆಪ್ಷನ್ ಎಂಟ್ರಿ) ಅವಕಾಶ ನೀಡಲು ಸಾಧ್ಯವಾಗಿಲ್ಲ. ಇದೇ ಕಾರಣದಿಂದಾಗಿ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗಿದೆ. ವಿದ್ಯಾರ್ಥಿಗಳು ಸ್ವಲ್ಪ ಸಮಯದವರೆಗೆ ಇನ್ನೂ ಕಾಯಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories