ರೈತರಿಗೆ ಗುಡ್ ನ್ಯೂಸ್, ಹೊಸ ಕಿಸಾನ್ ಕಾರ್ಡ್ (Kisan Card) ಘೋಷಣೆ, 80 ಕೋಟಿ ಜನರಿಗೆ ಲಾಭ!
ಇಂದು ಕೃಷಿ ಕ್ಷೇತ್ರವು ಬಹಳ ಬದಲಾವಣೆ ಆಗಬೇಕಿದೆ. ಯಾಕೆಂದರೆ, ಇಂದು ಹಲವಾರು ಜನರು ಅದರಲ್ಲೂ ಯುವಕರು ಕೃಷಿ ಕ್ಷೇತ್ರದತ್ತ (agriculture field) ಗಮನ ಹರಿಸುತ್ತಿಲ್ಲ. ಮೊದಲಿನಿಂದಲೂ ಕೃಷಿ ಮಾಡಿಕೊಂಡು ಬಂದ ರೈತರಷ್ಟೇ ಕೃಷಿಯನ್ನು ಮಾಡುತ್ತಿದ್ದಾರೆ. ಮಳೆ ಬೆಳೆ ಇಲ್ಲದೆ ರೈತರು ಕಂಗಾಲಾಗಿದ್ದರು. ಇದೀಗ ವಿಪರೀತ ಮಳೆಯಿಂದ ಕೃಷಿಕರಿಗೆ ಬಹಳಷ್ಟು ಹಾನಿಯಾಗಿದೆ. ರೈತರು ಬಹಳಷ್ಟು ಚಿಂತಾಜನಕರಾಗಿದ್ದಾರೆ. ಹಾಗೆಯೇ ರೈತರಿಗೆ (farmers) ಸರ್ಕಾರದಿಂದ ಹಲವು ಯೋಜನೆಗಳನ್ನು ನೀಡಲಿದ್ದು, ಇದರಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ಇದೀಗ ಸರ್ಕಾರದ ಬಜೆಟ್ ನಲ್ಲಿ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರದ ಬಜೆಟ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ :
ಸರ್ಕಾರವು ಬಜೆಟ್‌ನಲ್ಲಿ ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿದ್ದು, ಇದರಲ್ಲಿ ಜನ್ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ (Jan samarth Kisan credit Card announcement) ಕೂಡ ಒಂದಾಗಿದೆ. ಈ ಯೋಜನೆ ಮೂಲಕ 80 ಕೋಟಿ ಜನರಿಗೆ ಲಾಭ ದೊರಕಲಿದೆ. ರೈತರಿಗೆ ಇದೊಂದು ಪರಿಹಾರ ಧನವಾಗಿದೆ.
ಜನ್ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆಯ ಉದ್ದೇಶ :
ಕೃಷಿ ಕ್ಷೇತ್ರದಲ್ಲಿ ರೈತರಿಗೆ ಉಪಯೋಗವಾಗುವಂತೆ ಅವರಿಗೆ ಸಹಾಯಕ್ಕಾಗಿ ಮತ್ತು ಉತ್ತೇಜನ ನೀಡುವ ಸಲುವಾಗಿ ಈ ಬಾರಿಯ ಬಜೆಟ್ ನಲ್ಲಿ ಸರ್ಕಾರ ಕೆಲವು ಘೋಷಣೆಗಳನ್ನು ಮಾಡಿದೆ. ಇದರ ಅಡಿಯಲ್ಲಿ, ಹೊಸ ರೀತಿಯ ಜನ್ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ವಿತರಿಸುವ ಬಗ್ಗೆ ಸರ್ಕಾರ ಘೋಷಿಸಿದೆ.ಈ ಯೋಜನೆಯು ಐದು ರಾಜ್ಯಗಳಲ್ಲಿ ಮೊದಲು ಬಿಡುಗಡೆಯಾಗಲಿದೆ. ಹಾಗೆಯೇ ಇದರ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Gareeb Kalyan Anna Yojana) 5 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎನ್ನುವುದನ್ನು ಕೂಡಾ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಯೋಜನೆಯ ವಿಸ್ತರಣೆಯಿಂದಾಗಿ 80 ಕೋಟಿ ಜನರಿಗೆ ಅನುಕೂಲವಾಗಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ :
ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ (Agricultural Budget) ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯು 5 ವರ್ಷಗಳವರೆಗೆ ಕನಿಷ್ಠ 50% ಮಾರ್ಜಿನ್ ವೆಚ್ಚದಲ್ಲಿ 80 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ.
ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಮತ್ತು ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ. ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




