ಸರ್ಕಾರಿ ಹುದ್ದೆಗಳ ನೇಮಕಾತಿ, ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

KPSC KAS Recruitment 2024

ಇವತ್ತಿನ ವರದಿಯಲ್ಲಿ ಕೆಪಿಎಸ್‌ಸಿ ಕೆಎಸ್‌ಎಸ್ ನೇಮಕಾತಿಯ ಕುರಿತು ತಿಳಿಸಲಾಗಿದೆ. ಈ ನೇಮಕಾತಿಯಲ್ಲಿ 384 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕೆಪಿಎಸ್‌ಸಿ ಕೆಎಸ್‌ಎಸ್ ನೇಮಕಾತಿ 2024 (KPSC KAS Recruitment 2024):

ಕರ್ನಾಟಕ ಲೋಕಾಯುಕ್ತ ಆಯೋಗವು(Karnataka Lokayukta Commission) ಗೆಜೆಟೆಡ್ ಪ್ರೊಬೇಷನರ್(Gazetted Probationer) ಹುದ್ದೆಯ ನೇಮಕಾತಿಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ 384 ಗ್ರೂಪ್ ಎ ಮತ್ತು ಬಿ (Group A & B positions) ಹುದ್ದೆಗಳಿಗೆ ಖಾಲಿ ಇವೆ. ಅರ್ಜಿದಾರರು ತಮ್ಮ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಮತ್ತು ಸಲ್ಲಿಕೆಗೆ ಗಡುವು ಏಪ್ರಿಲ್ 3, 2024 ಆಗಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು. ಆಸಕ್ತರು ತಕ್ಷಣ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒದಗಿಸಿದ ಸೂಚನೆಗಳನ್ನು ನಿಖರವಾಗಿ ಅನುಸರಿಸಲು ಖಚಿತಪಡಿಸಿಕೊಳ್ಳಿ. ಈ ಸಂಸ್ಥೆಯ ಭಾಗವಾಗಲು ಮತ್ತು ಈ ಸಂಸ್ಥೆಯ ಉದ್ಯೋಗಗಳಲ್ಲಿ ಯಶಸ್ವಿ ವೃತ್ತಿಜೀವನವನ್ನು ರೂಪಿಸಲು ಬಯಸುತ್ತಿದ್ದರೆ ಇಲ್ಲಿದೆ ಉತ್ತಮ ಅವಕಾಶ.

whatss

ನೇಮಕಾತಿ ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ

ಹುದ್ದೆ ಹೆಸರು : ಗೆಜೆಟೆಡ್ ಪ್ರೊಬೇಷನರ್ (ಕೆಎಎಸ್‌ ಹುದ್ದೆಗಳು)

ಹುದ್ದೆಗಳ ಸಂಖ್ಯೆ: 384

ಒಟ್ಟು ಗ್ರೂಪ್‌ ಎ ಹುದ್ದೆಗಳು : 159

ಒಟ್ಟು ಗ್ರೂಪ್‌ ಬಿ ಹುದ್ದೆಗಳು : 225

ವಿದ್ಯಾರ್ಹತೆ:

ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಮತ್ತು 38 ವರ್ಷವನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೇರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಸಂಬಳ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ, DA ಹಾಗೂ ಎಚ್.ಆರ್.ಎ ಹೊರಗಿನ ಸೌಲಭ್ಯಗಳನ್ನು ಸೇರಿಸಿ ಮೂಲವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳ ಆಯ್ಕೆಯು ಈ ಕೆಳಗಿನ ಹಂತಗಳ ಮೂಲಕ ನಡೆಯುತ್ತದೆ

ಹಂತ 1: ಸ್ಪರ್ಧಾತ್ಮಕ ಪರೀಕ್ಷೆ(Competative Exam)

ಹಂತ 2: ಮುಖ್ಯ ಪರೀಕ್ಷೆ(Main Exam)

ಹಂತ 3: ಸಂದರ್ಶನ(Interview)

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-

ಪ.ಜಾ/ ಪಾಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:

ಆನ್‌ಲೈನ್ ಮೂಲಕ:

ಹಂತ 1: ದಿನಾಂಕ 04.03.2024 ರಿಂದ 03.04.2024 ರವರೆಗೆ www.kpsc.kar.nic.in ವೆಬ್‌ಸೈಟ್ ಗೆ ಭೇಟಿ ನೀಡಿ.

ಹಂತ 2: ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.

ಹಂತ 3: ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.

ಹಂತ 4: ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.

ಹಂತ 5: ನಂತರ ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024

ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 05-05-2024

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

One thought on “ಸರ್ಕಾರಿ ಹುದ್ದೆಗಳ ನೇಮಕಾತಿ, ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಚಡ್ಯ ಜಿಲ್ಲೆ says:

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
    [email protected]

Leave a Reply

Your email address will not be published. Required fields are marked *

error: Content is protected !!