ಗುಡ್ ನ್ಯೂಸ್! ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಯೋಜನೆಗಳು!
ಕಾರ್ಮಿಕ ಇಲಾಖೆಯಿಂದ ನಿಮ್ಮ ಉನ್ನತೀಕರಣಕ್ಕಾಗಿ ಅನೇಕ ಯೋಜನೆಗಳು ಜಾರಿಗೆ ಬರಲಿವೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಕಾರ್ಮಿಕ ಕಾರ್ಡ್ (Labour Card Karnataka) ನೋಂದಣಿ ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (Karnataka Building and Other Construction Workers’ Welfare Board) ಮೂಲಕ ಕರ್ನಾಟಕ ಸರ್ಕಾರವು ಈ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.
ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು :
ಕಾರ್ಮಿಕ ಕಾರ್ಡ್ ಕೇವಲ ಗುರುತಿನ ಚೀಟಿಯಲ್ಲ, ಅದು ದುಡಿಯುವ ವರ್ಗದ ಭದ್ರಕೋಟೆ. ಈ ಕಾರ್ಡ್ ಧಾರಕರಿಗೆ ಲಭ್ಯವಿರುವ ಸೌಲಭ್ಯಗಳ ಪಟ್ಟಿ :
ಅಪಘಾತ ಪರಿಹಾರ: ದುರದೃಷ್ಟಕರ ಘಟನೆಗಳಲ್ಲಿ ಭದ್ರತೆ.
ವೈದ್ಯಕೀಯ ಸಹಾಯಧನ: ಚಿಕಿತ್ಸೆಗೆ ಚಿಂತೆಯಿಲ್ಲ.
ತಾಯಿ ಮಗು ಸಹಾಯ ಹಸ್ತ: ಜನನದ ಸಮಯದಲ್ಲಿ ಆರ್ಥಿಕ ನೆರವು.
ಮದುವೆ ಸಹಾಯಧನ: ಹೊಸ ಜೀವನಕ್ಕೆ ಒಂದು ಕೈತುಂಬ ಭರವಸೆ.
ದುರ್ಬಲತೆ ಪಿಂಚಣಿ: ವೃದ್ಧಾಪ್ಯದಲ್ಲಿ ಜೀವನ ನಡೆಸಲು ಒಂದು ಆಸರೆ.
ಪಿಂಚಣಿ ಮುಂದುವರಿಕೆ: ಭವಿಷ್ಯದ ಭದ್ರತೆಗೆ ಖಾತರಿ.
ಶೈಕ್ಷಣಿಕ ಸಹಾಯಧನ: ಮಕ್ಕಳ ಶಿಕ್ಷಣಕ್ಕೆ ಉತ್ತೇಜನ.
ಹೆರಿಗೆ ಸೌಲಭ್ಯ: ಗರ್ಭಿಣಿ ಮಹಿಳೆಯರಿಗೆ ಆರೈಕೆ.
ಅಂತ್ಯಕ್ರಿಯೆ ವೆಚ್ಚ: ದುಃಖದ ಸಮಯದಲ್ಲಿ ಒಂದು ನೆರವು.
ಉಚಿತ ಸಾರಿಗೆ ಬಸ್ ಪಾಸ್: ಓಡಾಟಕ್ಕೆ ಯಾವುದೇ ಖರ್ಚಿಲ್ಲ.
ಶ್ರಮಸಮರ್ಥ್ಯ ಟೂಲ್ ಕಿಟ್: ಕೆಲಸಕ್ಕೆ ಉಪಯುಕ್ತ ಸಾಧನಗಳ ಉಡುಗೊರೆ
Labour Card Karnataka ಅರ್ಹತೆ :
ನೋಂದಣಿ ಮಾಡುವ ಪೂರ್ವದಲ್ಲಿ 1 ವರ್ಷ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳು ಕೆಲಸ ನಿರ್ವಹಿಸಿರಬೇಕು.
Labour Card Karnataka Application ಗಾಗಿ ಬೇಕಾಗಿರುವ ದಾಖಲೆಗಳು :
90 ದಿನಗಳ ಉದ್ಯೋಗ ದೃಡೀಕರಣ ಪತ್ರ
ಅರ್ಜಿದಾರ ಮತ್ತು ಅವಲಂಬಿತರ ಆಧಾರ ಕಾರ್ಡ್ (Aadhar card)
ಅರ್ಜಿದಾರರ ಬ್ಯಾಂಕ್ ಪಾಸುಬೂಕ್(Bank passbook )
ಅರ್ಜಿದಾರರ ಆಧಾರ ಲಿಂಕ್ ಆಗಿರುವ ಮೊಬೈಲ್ ನಂಬರ್(Aadhar linked Mobile number)
ವಯೋಮಿತಿ :
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಲು ವಯೋಮಿತಿ 18 ರಿಂದ 60 ಮೀರಿರಬಾರದು.
ನೋಂದಣಿ ಮಾಡುವ ಕಚೇರಿಗಳು :
ಹಿರಿಯ ಕಾರ್ಮಿಕ ನಿರೀಕ್ಷಿಕರು(Senior Labor Inspector) / ಕಾರ್ಮಿಕ ನಿರೀಕ್ಷಿಕರ ಕಚೇರಿ (Labor Inspector)
ನೋಂದಣಿ ಅಭಿಯಾನ :
ಬೆಂಗಳೂರು ನಗರದಲ್ಲಿ 30 ನೇ ಡಿಸೆಂಬರ್ 2023 ರಿಂದ 31 ನೇ ಮಾರ್ಚ್ 2024 ರವರೆಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಅಭಿಯಾನ ನಡೆಯಲಿದೆ.
ಇನ್ನುಳಿದ ಭಾಗದ ಜನರು ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಮತ್ತು ಹಿರಿಯ ಕಾರ್ಮಿಕ ನಿರೀಕ್ಷಿಕರನ್ನು ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 155214 ಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿಯಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಈ ದಿನ ಜಮಾ! ಈ ಮಹಿಳೆಯರಿಗೆ ಮಾತ್ರ
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






