₹20,000/- ನೇರವಾಗಿ ಖಾತೆಗೆ ಬರುವ, ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

WhatsApp Image 2025 08 02 at 07.14.23 da0e4aff

WhatsApp Group Telegram Group

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು ಶಿಕ್ಷಣಕ್ಕೆ ಆರ್ಥಿಕ ಸಹಾಯ ಪಡೆಯಲು ಅರ್ಹರಾಗಿರುತ್ತಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾರಿಗೆ ಅರ್ಜಿ ಸಲ್ಲಿಸುವ ಅರ್ಹತೆ ಇದೆ?

  • 2024 ಮೇ 25ರ ಮೊದಲು ಕಾರ್ಮಿಕ ಕಾರ್ಡ್ ನೋಂದಣಿ ಮಾಡಿಸಿಕೊಂಡವರು
  • ಕರ್ನಾಟಕ ರಾಜ್ಯದ ಶಾಲೆಗಳು/ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು
  • ಸರ್ಕಾರದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ನೋಂದಾಯಿತರಾದವರು

ಅರ್ಜಿ ಸಲ್ಲಿಸುವ ವಿಧಾನ

  1. ಆನ್ಲೈನ್ ಅರ್ಜಿ: ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ssp.postmatric.karnataka.gov.in)ಗೆ ಭೇಟಿ ನೀಡಿ
  2. ಲಾಗಿನ್: ಪೋರ್ಟಲ್ನಲ್ಲಿ ನೋಂದಣಿ ಮಾಡಿ ಅಥವಾ ಅಸ್ತಿತ್ವದಲ್ಲಿರುವ ಖಾತೆಯನ್ನು ಬಳಸಿ
  3. ದಾಖಲೆಗಳು: ಕಾರ್ಮಿಕ ಕಾರ್ಡ್ ವಿವರ, ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆಗಳು, ಬ್ಯಾಂಕ್ ಖಾತೆ ವಿವರ ಮತ್ತು ಆಧಾರ್ ಕಾರ್ಡ್ ಅಪ್ಲೋಡ್ ಮಾಡಿ
  4. ಸಲ್ಲಿಕೆ: ಅರ್ಜಿಯನ್ನು ಪರಿಶೀಲಿಸಿ 31 ಅಕ್ಟೋಬರ್ 2024ರೊಳಗೆ ಸಲ್ಲಿಸಿ

ಮುಖ್ಯ ನಿರ್ದೇಶನಗಳು

  • ಕಾರ್ಮಿಕ ಕಾರ್ಡ್ ನೋಂದಣಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಲಿಂಕ್ ಮಾಡಬೇಕು
  • ಬ್ಯಾಂಕ್ ಖಾತೆ NPCI ಮ್ಯಾಪಿಂಗ್ (ಆಧಾರ್ ಲಿಂಕ್) ಮಾಡಿರಬೇಕು
  • ಸಹಾಯಧನದ ಹಣ ನೋಂದಾಯಿತ ಕಾರ್ಮಿಕರ (ತಂದೆ/ತಾಯಿ) ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ

ಹೆಚ್ಚಿನ ಮಾಹಿತಿಗಾಗಿ

  • ಅಧಿಕೃತ ವೆಬ್ಸೈಟ್: kbocwwb.karnataka.gov.in
  • ಸಹಾಯಕ್ಕಾಗಿ: ಜಿಲ್ಲಾ ಕಾರ್ಮಿಕ ಕಲ್ಯಾಣ ಕಚೇರಿಗಳನ್ನು ಸಂಪರ್ಕಿಸಿ

ಗಮನಿಸಿ: 2025-26ನೇ ಸಾಲಿಗೆ ಈಗಾಗಲೇ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!