Home » ಸರ್ಕಾರಿ ಯೋಜನೆಗಳು » ತುಂಬಾ ಜನರಿಗೆ ಈ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಗೊತ್ತಿಲ್ಲ : Labour Card Scheme 2022

ತುಂಬಾ ಜನರಿಗೆ ಈ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಗೊತ್ತಿಲ್ಲ : Labour Card Scheme 2022

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಕಾರ್ಮಿಕ ಕಾರ್ಡ್ ಬಗ್ಗೆ ತಿಳಿದುಕೊಳ್ಳೋಣ. ಕರ್ನಾಟಕ ಸರ್ಕಾರ ಕರ್ನಾಟಕ ಕಾರ್ಮಿಕ ಕಾರ್ಡ್ ಗಳ ನೋಂದಾವಣೆಗಾಗಿ ಆನ್ಲೈನ್ ಇ ಪೋರ್ಟಲ್  ಅನ್ನು   ಬಿಡುಗಡೆ ಮಾಡಲಾಗಿದೆ. ಕಾರ್ಮಿಕ ಕಾರ್ಡ್ ಗೆ ನೀವು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಯಾವುದೇ ರೀತಿಯ ಸರ್ಕಾರದ ಶುಲ್ಕ ಇರುವುದಿಲ್ಲ, ಈ ಲೇಬರ್ ಕಾರ್ಡಿಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು, ಏನೆಲ್ಲಾ ದಾಖಲಾತಿಗಳು ಬೇಕು ಮತ್ತು ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ

Advertisement

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಕಾರ್ಮಿಕ ಕಾರ್ಡ್ ಉಪಯೋಗಗಳು

  1. ಕಾರ್ಮಿಕ ಕಾರ್ಡ್ ಪಡೆದುಕೊಂಡಂತಹ ಫಲಾನುಭವಿಗಳಿಗೆ ಪ್ರತೀ ತಿಂಗಳೂ ಪಿಂಚಣಿ ರೂಪದಲ್ಲಿ 3 ಸಾವಿರ ರೂಪಾಯಿ ಧನ ಸಹಾಯ ಸಿಗುತ್ತದೆ.
  2. ಕಾರ್ಮಿಕ ಗೃಹ ಯೋಜನೆಯ ಅಡಿಯಲ್ಲಿ ಕಾರ್ಮಿಕರು ಮನೆಯನ್ನು ನಿರ್ಮಿಸಿಕೊಳ್ಳಲು ಎರಡು ಲಕ್ಷದವರೆಗೆ ಮುಂಗಡ ಸಾಲವನ್ನು ಪಡೆಯಬಹುದು.
  3. ಹೆರಿಗೆ ಸಮಯದಲ್ಲಿ ಹೆಣ್ಣು ಮಗು ಜನಿಸಿದರೆ ಅಥವಾ ಗಂಡು ಮಗು ಜನಿಸಿದರೆ, ಐವತ್ತು ಸಾವಿರ ರೂಗಳವರೆಗೆ ಧನ ಸಹಾಯ ಸಿಗುತ್ತದೆ.
  4. ಕಾರ್ಮಿಕರು ಕಾರ್ಯ ನಿರ್ವಹಿಸುತ್ತಾ ಇರುವಾಗ ಮರಣ ಹೊಂದಿದರೇ, 5 ಲಕ್ಷ ರೂಪಾಯಿಗಳ ವರೆಗೆ ಉಚಿತವಾಗಿ ನೀಡಲಾಗುವುದು. ಮತ್ತು ಕೆಲಸ ನಿರ್ವಹಿಸುವ ವೇಳೆ ಶಾಶ್ವತವಾಗಿ ಅಂಗವಿಕಲರು ಆದಲ್ಲಿ ಎರಡು ಲಕ್ಷದವರೆಗೆ ಸಹಾಯ ಧನವನ್ನು ನೀಡಲಾಗುತ್ತದೆ. ಅಥವಾ ಭಾಗಶಃ ಶಾಶ್ವತ ದುರ್ಬಲತೆಗೆ ಒಂದು ಲಕ್ಷ ಧನ ಸಹಾಯವನ್ನೂ ನೀಡಲಾಗುವುದು.
  5. ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ 70 ಸಾವಿರ ರೂಪಾಯಿ ನಗದನ್ನು ನೀಡಲಾಗುವುದು.
  6. ಕಾರ್ಮಿಕ ಕಾರ್ಡ್ ಹೊಂದಿದ್ದರೆ KSRTC ಮತ್ತು BMTC ಬಸ್ಸು ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಇರತ್ತೆ.
  7. ಕಲಿಕೆ ಭಾಗ್ಯ ಸ್ಕೀಮ್ ವತಿಯಿಂದ ಕಲಿಕೆ ಕಿಟ್ ಎಂಬ ಸೌಲಭ್ಯವನ್ನು ಕಾರ್ಮಿಕರ ಓದುತ್ತಿರುವ ಮಕ್ಕಳಿಗಾಗಿ ನೀಡಲಾಗುತ್ತಿದೆ. ಅಂದರೆ ಕಂಪ್ಯೂಟರ್ ಆಗಿರಬಹುದು ಲ್ಯಾಪ್ಟಾಪ್ ಅಥವಾ ಟ್ಯಾಬ್ ಗಳನ್ನು ಮಕ್ಕಳಿಗೆ ಕೊಟ್ಟು ಅವರಿಗೆ ಓದಲು ಉತ್ತೇಜನವನ್ನು ನೀಡಲಾಗುತ್ತಿದೆ.
  8. ಆರೋಗ್ಯ ಸರಿಯಿಲ್ಲದೆ ಹಾಸ್ಪಿಟಲ್ ನಲ್ಲಿ ದಾಖಲಾದಂತ ಕಾರ್ಮಿಕರಿಗೆ ವೈದ್ಯಕೀಯ ಸಲಹೆ ಮತ್ತು ಧನಸಹಾಯಎಂದು ತಲಾ 20 ಸಾವಿರ ರೂಗಳನ್ನು ನೀಡಲಾಗುತ್ತದೆ.
  9. ಪ್ರತಿಭಾವಂತ ಮಕ್ಕಳಿಗಾಗಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 75 ಅಂಕ ಪಡೆದವರಿಗೆ 5 ಸಾವಿರ ರೂಪಾಯಿ ಅಷ್ಟು ಧನ ಸಹಾಯ ನೀಡಲಾಗುತ್ತದೆ. ಇನ್ನೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡಾ 75 ರಷ್ಟು ಅಂಕ ಪಡೆದವರಿಗೆ 7 ಸಾವಿರ ರೂಪಾಯಿಗಳ ವರೆಗೆ ಸಹಾಯ ಧನವನ್ನು ನೀಡಲಾಗುತ್ತದೆ. ಪದವಿ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಶೇಕಡಾ 75 ರಷ್ಟು ಅಂಕ ಪಡೆದರೆ ಅವರಿಗೆ 10 ಸಾವಿರ ರೂಪಾಯಿಗಳ ವರೆಗೂ ಧನ ಸಹಾಯ ಮಾಡಲಾಗುತ್ತದೆ. ಸ್ನಾತಕೋತ್ತರ ಪದವಿ ಮಾಡುವ ವಿದ್ಯಾರ್ಥಿಗಳಿಗೆ ಶೇಕಡಾ 75 ರಷ್ಟು ಅಂಕ ಪಡೆದವರಿಗೆ ರೂಪಾಯಿ 15 ಸಾವಿರದ ವರೆಗೂ ಸಹಾಯ ದನ ಸಿಗುತ್ತದೆ .

ಹೀಗೆ ಈ ಎಲ್ಲಾ ಸೌಲಭ್ಯಗಳು ಸಹ ಕಾರ್ಮಿಕರ ಕಾರ್ಡ್ ಹೊಂದಿದವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ದೊರೆಯುತ್ತದೆ.

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

ಲೇಬರ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು :

  1. 18 ವರ್ಷದಿಂದ 60 ವರ್ಷ ವಯಸ್ಸಿನವರಾಗಿರಬೇಕು
  2. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
  3. ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ನೀವು ಕಾರ್ಮಿಕರಾಗಿ ನೋಂದಾಯಿಸಿಕೊಳ್ಳಬೇಕು.
  4. ಉದ್ಯೋಗ ದೃಢೀಕರಣ ಪತ್ರ (ಕೆಲಸ ಮಾಡುವ ಕುರಿತು ಸರ್ಟಿಫಿಕೇಟ್ ಪಡೆದುಕೊಳ್ಳಬೇಕು.)
  5. ವರ್ಷಕ್ಕೆ ಕನಿಷ್ಠ 100-150 ದಿನ ಕಾರ್ಮಿಕ ಕೆಲಸದಲ್ಲಿ ತೊಡಗಿರಬೇಕು.
  6. ಆಧಾರ್ ಕಾರ್ಡ್
  7. ಬ್ಯಾಂಕ್ ಖಾತೆ ಸಂಖ್ಯೆ
  8. ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  9. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  10. ಪಡಿತರ ಚೀಟಿ

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಲೇಬರ್ ಕಾರ್ಡ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಕಾರ್ಮಿಕ ಕಾರ್ಡ್ ಗೆ ನೀವು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಯಾವುದೇ ರೀತಿಯ ಸರ್ಕಾರದ ಶುಲ್ಕ ಇರುವುದಿಲ್ಲ

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Step 1: ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – ಇಲ್ಲಿ ಕ್ಲಿಕ್ ಮಾಡಿ

Step 2: ಪೋರ್ಟಲ್‌ನಲ್ಲಿ ನಿಮ್ಮನ್ನು ನೋಂದಾಯಿಸಲು ‘ಹೊಸ ನೋಂದಣಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಿ

Step 3: ಅಗತ್ಯವಿರುವ ವಿವರಗಳನ್ನು ಒದಗಿಸುವ ಮೂಲಕ ನಿಮಗಾಗಿ ‘ಬಳಕೆದಾರ ಐಡಿ’ ಮತ್ತು ‘ಪಾಸ್‌ವರ್ಡ್’ ಅನ್ನು ರಚಿಸಿ

Step 4: ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಪೋರ್ಟಲ್‌ಗೆ ಲಾಗಿನ್ ಮಾಡಿ ನಂತರ ಎಡಭಾಗದಲ್ಲಿ Apply for services ಮೇಲೆ ಕ್ಲಿಕ್ ಮಾಡಿ ನಂತರ ಕೆಳಗೆ View all available services ಮೇಲೆ ಕ್ಲಿಕ್ ಮಾಡಿ

Step 5:  ನಂತರ ಬಲಭಾಗದಲ್ಲಿರುವ search box ನಲ್ಲಿ labour ಎಂದು ಟೈಪ್ ಮಾಡಿ. “Application for registration with Karnataka building and other construction workers welfare board” ಎಂಬ ಆಪ್ಷನ್ ಅನ್ನು ಸೆಲೆಕ್ಟ್ ಮಾಡಿ.

Step 5: ಅಗತ್ಯವಿರುವ ಎಲ್ಲಾ ವಿವರಗಳನ್ನು ಪೂರ್ಣಗೊಳಿಸಿ ಮತ್ತು ಅಗತ್ಯವಿರುವ ಎಲ್ಲಾ ಮಾನ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ

Step 6: ಅರ್ಜಿಯನ್ನು ಪೂರ್ಣಗೊಳಿಸಿದ ನಂತರ, ಅದನ್ನು ಸಲ್ಲಿಸಿ.

ಈ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ಈ ಕೊಡಲೇ ಶೇರ್ ಮಾಡಿ

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!