1ಲಕ್ಷ ರೂ.ವರೆಗೆ ಸಹಾಯಧನ : ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನ

loan scheme

ಸ್ವಂತ ಉದ್ಯಮ(Self- Employment) ಸ್ಥಾಪಿಸಲು ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ, ಸಾಲ ಪಡೆಯಲು ಅವಕಾಶ ನೀಡಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಅರ್ಜಿ ಹೇಗೆ ಸಲ್ಲಿಸಬಹುದು? ಕೊನೆಯ ದಿನಾಂಕ ಏನಾಗಿರುತ್ತದೆ?, ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸ್ವಂತ ಉದ್ಯೋಗಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ :

ರಾಜ್ಯದ ಅಲ್ಪಸಂಖ್ಯಾತ ಸಮುದಾಯಗ(Minority Communities of state) ಳಿಗೆ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ(State Government)ವು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ(Loan facility) ಒದಗಿಸುವ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ, ಅಲ್ಪಸಂಖ್ಯಾತರಿಗೆ ವಿವಿಧ ಉದ್ಯಮಗಳನ್ನು ಪ್ರಾರಂಭಿಸಲು ಅಗತ್ಯವಿರುವ ಹಣಕಾಸಿನ ನೆರವು ಲಭ್ಯವಾಗಲಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ-ಇಂಡಿಯನ್ ಜನಾಂಗದ ಏಳಿಗೆಯ ಉದ್ದೇಶದಿಂದ ಸ್ವಯಂ ಉದ್ಯೋಗ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ಈ ಸಮುದಾಯಗಳಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ(Small Scale cottage industry), ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಪಡಿಸಿಕೊಳ್ಳಲು 33% ಘಟಕ ವೆಚ್ಚ ಅಥವಾ ಗರಿಷ್ಠ ₹1 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ

ಈ ಯೋಜನೆಯು ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ನಿರೀಕ್ಷೆಯಿದೆ. ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳುವ ಮೂಲಕ, ಈ ಸಮುದಾಯಗಳ ಜನರು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಮತ್ತು ಸಮಾಜದ ಮುಖ್ಯವಾಹಿನಿಗೆ ಸೇರಲು ಸಾಧ್ಯವಾಗುತ್ತದೆ.

whatss

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು.

ಸರ್ಕಾರದಿಂದ ಗುರುತಿಸಲ್ಪಟ್ಟ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಸಮುದಾಯಗಳಲ್ಲಿ ಮುಸ್ಲಿಂ, ಕ್ರೈಸ್ತ, ಬೌದ್ಧ, ಸಿಖ್ ಮತ್ತು ಪಾರ್ಸಿ ಸೇರಿವೆ.

ಅರ್ಜಿದಾರರು ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 55 ವರ್ಷ ಮೀರಿರಬಾರದು.

ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. 81000/- ಹಾಗೂ ನಗರ ಪ್ರದೇಶದಲ್ಲಿ ರೂ.1,30,000/- ಮೀರಿರಬಾರದು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ, ಪಿಎಸಯು ಉದ್ಯೋಗಿಯಾಗಿರಬಾರದು.

ಅರ್ಜಿ ಹೇಗೆ ಸಲ್ಲಿಸುವುದು?

ಅರ್ಹ ಅಭ್ಯರ್ಥಿಗಳು https://kmdconline.karnataka.gov.in/Portal/home ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕಡ್ಡಾಯವಾಗಿ ಆನ್‌ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ, ಆದ್ದರಿಂದ ತಡಮಾಡಬೇಡಿ! ಈ ಅವಕಾಶವನ್ನು ಕಳೆದುಕೊಳ್ಳಬೇಡಿ

ಚಿಕ್ಕಮಗಳೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯ(Minority community of Chikmagalur)ದವರು ಈ ಕೆಳಗಿನ ವಿಳಾಸದ ಮೂಲಕ ಸಹಾಯ ಪಡೆಯಬಹುದು.
ಜಿಲ್ಲಾ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(District Karnataka Minority Development Corporation)ವ್ಯವಸ್ಥಾಪಕರ ಕಚೇರಿ(Manager’s office) ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ, 08262-295843 ಈ ಸಂಖ್ಯೆಗೆ ಕರೆ ಮಾಡಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಮಾತನಾಡಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!