ಕೇಂದ್ರದಿಂದ ಯಾವುದೇ ಗ್ಯಾರಂಟಿ ಇಲ್ಲದೆ ಸಿಗಲಿದೆ 2 ಲಕ್ಷ ರವರೆಗೆ ಸಾಲ!! ಮೋದಿ ಸರ್ಕಾರದ ಹೊಸ ಗ್ಯಾರಂಟಿ

Loan scheme 2

ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ, ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲು 13 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆ  ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ’ ಅಥವಾ ‘ಪಿಎಂ ವಿಶ್ವಕರ್ಮ ಯೋಜನೆ. ಕರಕುಶಲಿಗಳ ಸಮುದಾಯ ಒಂದು ಬಹುದೊಡ್ಡ ಅಸಂಘಟಿತ ಸಮುದಾಯ. ಇದೀಗ ಕೇಂದ್ರ ಸರ್ಕಾರವು, ಈ ಸಮುದಾಯದ ಅಭಿವೃದ್ಧಿಗೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ–2023’ ಎಂಬ ಪ್ರಮುಖ ಯೋಜನೆ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ ನಿಮಗೆ ಬಿಸಿನೆಸ್ ಮಾಡಲು 3 ಲಕ್ಷದವರೆಗೆ ಸಾಲವನ್ನು ( Loan ) ನೀಡುತ್ತಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪಿಎಂ ವಿಶ್ವಕರ್ಮ ಯೋಜನೆ – PM Vishwakarma Scheme 

pmv

ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ, ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸುವ ನಿಟ್ಟಿನಲ್ಲಿ 13 ಕೋಟಿಯನ್ನು ಮೀಸಲಿರಿಸಿದ ಒಂದು ಉತ್ತಮ ಯೋಜನೆ ಇದಾಗಿದೆ. ದೇಶದಾದ್ಯಂತ ಇರುವ ಗ್ರಾಮೀಣ ಹಾಗೂ ನಗರ ಪ್ರದೇಶದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್‌ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದೆ. ಅವರು ತಯಾರಿಸುವ ಉತ್ಪನ್ನಗಳಿಗೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಯೋಜನೆಯ ಮೂಲ ಗುರಿಯಾಗಿದೆ.

whatss

ಈ ಯೋಜನೆಯ ಪ್ರಯೋಜನಗಳು

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ( PM Vishwa karma yojana ) ಮೂಲಕ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು, ಅಕ್ಕಸಾಲಿಗ, ಕಮ್ಮಾರ, ಕ್ಷೌರಿಕ ಮತ್ತು ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರು ಅನೇಕ ರೀತಿಯಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆಯಡಿಯಲ್ಲಿ 3 ಲಕ್ಷದವರೆಗೆ ಯಾವುದೇ ಆಧಾರವಿಲ್ಲದೆ ಸಾಲವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ಎರಡು ಕಂತುಗಳಲ್ಲಿ ನೀಡಲಾಗುವುದು. ಮತ್ತು ಜನರಿಗೆ ಮೊದಲ ಹಂತದಲ್ಲಿ 1 ಲಕ್ಷದವರೆಗೆ ಮತ್ತು ಎರಡನೇ ಹಂತದಲ್ಲಿ 2 ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ ಮತ್ತು ಅದು ಕೂಡ ಕೇವಲ 5 % ರಿಯಾಯಿತಿ ಬಡ್ಡಿದರದಲ್ಲಿ (with 5% intrest) ನೀಡಲಾಗುತ್ತದೆ.

ಪಿಎಂ ವಿಶ್ವಕರ್ಮ ಯೋಜನೆ – ಅರ್ಹತೆಗಳು 

ಅರ್ಜಿ ಸಲ್ಲಿಸಲು ಬಯಸುವವರು 18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರಬೇಕು.

– 18 ವರ್ಷ ಮೇಲ್ಪಟ್ಟವರಾಗಿರಬೇಕು.
– ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರಾಗಿರುತ್ತಾರೆ.
– ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು.
– ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಮತ್ತು ಪಿಎಂ-ಸ್ವನಿಧಿ ಸಾಲಗಳನ್ನು ಪಡೆದಿರಬಾರದು.
– ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ವಿಶ್ವಕರ್ಮ ಯೋಜನೆಯ‌ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

pmv1

ದಾಖಲೆಗಳ ವಿವರ ( Documents ) :

– ಆಧಾರ್ ಕಾರ್ಡ್
– ಮತದಾರರ ಗುರುತಿನ ಚೀಟಿ
– ಪ್ಯಾನ್ ಕಾರ್ಡ್
– ನಿವಾಸದ ಪ್ರಮಾಣ ಪತ್ರ
– ಮೊಬೈಲ್ ನಂಬ‌ರ್ ಮತ್ತು ಇಮೇಲ್ ಐಡಿ
– ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
– ಕೆಲಸಕ್ಕೆ ಸಂಬಂಧಿಸಿದ ದಾಖಲೆಗಳು
– ಆದಾಯ ಮತ್ತು ಜಾತಿ ಪ್ರಮಾಣ ಪತ್ರ
– ಬ್ಯಾಂಕ್ ಖಾತೆ ವಿವರಗಳು

tel share transformed

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಅರ್ಜಿ ಸಲ್ಲಿಸುವ ವಿಧಾನ ( steps for applying application ) :

ಪಿಎಂ ವಿಶ್ವಕರ್ಮ ಯೋಜನೆಯನ್ನು ಜನರು ಸುಲಭವಾಗಿ ನೋಂದಣಿ ಮಾಡಲು ಅನುಕೂಲ ಕಲ್ಪಿಸಲಾಗಿದೆ. ಪ್ರತೀ ಗ್ರಾಮಗಳಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಯೋಜನೆಯ ನೋಂದಣಿ ( Application ) ಕೇಂದ್ರಗಳಾಗಿ ಗುರುತಿಸಲಾಗಿದೆ. ಹಾಗೆಯೇ ಆನ್ ಲೈನ್ ( Online ) ಮೂಲಕ ಕೂಡ ಅರ್ಜಿ ಸಲ್ಲಿಸಬಹುದು.

ಮೊದಲು ಅರ್ಜಿ ಸಲ್ಲಿಸಲು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ ಸೈಟ್ ( Website ) ಆದ www.pmvishwakarma.gov.in ಸೈಟ್ ಗೆ ಭೇಟಿ ನೀಡಿ.
ನಂತರ ಈ ಕೆಳಗಿನ ಹಂತಗಳನ್ನ ಪೂರ್ಣಗೊಳಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹಂತ 1: ಮೊಬೈಲ್ ಮತ್ತು ಆಧಾರ್ ( Adhar ) ಪರಿಶೀಲನೆ ಮಾಡಿ.

ಹಂತ 2: ಕುಶಲಕರ್ಮಿಗಳ ನೋಂದಣಿ ಫಾರ್ಮ್ ಭರ್ತಿ ಮಾಡಿ.

ಹಂತ 3: ಪಿಎಂ ವಿಶ್ವಕರ್ಮ ಯೋಜನೆಯ ಡಿಜಿಟಲ್ ಐಡಿ ( Digital I’d ) ಮತ್ತು ಪ್ರಮಾಣಪತ್ರವನ್ನು ( Certificate ) ಡೌನ್‌ಲೋಡ್ ಮಾಡಿ.

ಹಂತ 4: ಸ್ಟೀಮ್ ಘಟಕಗಳಿಗೆ ಅನ್ವಯಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!