Govt Loan Scheme – ಭರ್ಜರಿ ಸಾಲ ಮತ್ತು ಸಹಾಯ ಯೋಜನೆ, 4 ಲಕ್ಷ ರೂ. ವರೆಗೆ ಉಚಿತ ಸಹಾಯಧನ – ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Image 2023 10 04 at 07.55.33

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ  ಲೋನ್ ಸ್ಕೀಮ್(loan schemes)ಗಳಿಗೆ ಅವ್ಹಾನ ಮಾಡಲಾಗಿದೆ. ಆ ಯೋಜನೆಗಳು ಯಾವವು?, ಯಾರು ಅರ್ಹರಾಗಿರುತ್ತಾರೆ?, ಹೀಗೆ ಆಯಾ ಯೋಜನೆಗಳಿಗೆ ಸೇರಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ದೇವರಾಜ ಅರಸು ನಿಗಮದಿಂದ ಅನೇಕ ಯೋಜನೆಗಳ ಸಹಾಯಧನ ಲಭ್ಯ :

Loan Schemes by Devaraja Arasu Backward Classes Development Corporation: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಮೂಲಕ ಸಹಾಯಧನ ನೀಡಲು ಹಲವಾರು ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅಹ್ವಾನಿಸಿದ ಯೋಜನೆಗಳು ಇಂತಿವೆ
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,
ಸ್ವಾವಲಂಬಿ ಸಾರಥಿ ಯೋಜನೆ,
ಗಂಗಾ ಕಲ್ಯಾಣ ನೀರಾವರಿ ಯೋಜನೆ,
ಅರಿವು –  ಶೈಕ್ಷಣಿಕ ಸಾಲ ಯೋಜನೆ,
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ

chanel

ಈ ಎಲ್ಲಾ ಯೋಜನೆಗಳ ಕುರಿತು ಒಂದೊಂದಾಗಿ ಪ್ರಮುಖ ಮಾಹಿತಿಗಳನ್ನು ನಮ್ಮ ಲೇಖನದಲ್ಲಿ ನೀಡಲಾಗಿದೆ.

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

ವಿವಿಧ ನಿಗಮಗಳಿಂದ ಈ ಸಾಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ನಿರುದ್ಯೋಗ ಯುವಕರು ಈ ಯೋಜನೆಯ  ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಆರ್ಥಿಕ ಚಟುವಟಿಕೆಗಳು ಕೈಗೊಳ್ಳಲು 2 ಲಕ್ಷದ ವರೆಗೂ ಸಹಾಯಧನವನ್ನು ಪಡೆದುಕೊಳ್ಳಬಹುದು.ಇದರಲ್ಲಿ ಫಲಾನುಭವಿಗಳು ಕನಿಷ್ಠ ರೂ.1 ಲಕ್ಷಗಳವರೆಗಿನ ಸಾಲದಲ್ಲಿ ಶೇಕಡ.20 ರಷ್ಟು ಅಂದರೆ 20,000 ರೂ. ಮತ್ತು ಗರಿಷ್ಠ ರೂ. 2 ಲಕ್ಷಗಳವರೆಗಿನ ಸಾಲದಲ್ಲಿ 15 ರಷ್ಟು ಅಂದರೆ 30,000 ರೂ. ಸಹಾಯಧನವನ್ನು ಪಡೆಯುತ್ತಾರೆ ಮತ್ತು ಉಳಿದ ಮೊತ್ತವನ್ನು ವಾರ್ಷಿಕ 4% ಬಡ್ಡಿದರದಲ್ಲಿ ಸಾಲದ ರೂಪದಲ್ಲಿ ಪಡೆಯುತ್ತಾರೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

ಈ ಯೋಜನೆಯ ಲಾಭವನ್ನು ಪಡೆಯಲು ಅರ್ಜಿದಾರರ  ವಯಸ್ಸು 18 ರಿಂದ 55 ವರ್ಷಗಳೊಳಗಿರಬೇಕು. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ, ಗ್ರಾಮಾಂತರ ಪ್ರದೇಶದವರಿಗೆ ರೂ. 98,000  ಮತ್ತು ನಗರ ಪ್ರದೇಶದವರಿಗೆ ರೂ. 1,20,000 ಮಿತಿಯಲ್ಲಿರಿಬೇಕು.

ಸ್ವಾವಲಂಬಿ ಸಾರಥಿ ಯೋಜನೆ:

ಕರ್ನಾಟಕದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸ್ವಾವಲಂಬಿ ಸಾರಥಿ ಯೋಜನೆ ಎಂಬ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತರು, SC ಮತ್ತು ST ಗಳ ನಿರುದ್ಯೋಗಿ ಯುವಕರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಮತ್ತು ನಾಲ್ಕು ಚಕ್ರ ವಾಹನಗಳನ್ನು ಖರೀದಿಸಲು ಸಹಾಯಧನವನ್ನು ಪಡೆಯುತ್ತಾರೆ. ರಾಜ್ಯದಲ್ಲಿನ ನಿರುದ್ಯೋಗಿ ಯುವಕರು ಈ ಯೋಜನೆಯ ಅಡಿಯಲ್ಲಿ ನಾಲ್ಕು ಚಕ್ರಗಳ ಖರೀದಿಯಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸುವವರೆಗೆ 50% ರಿಂದ 75% ವರೆಗೆ ಸಹಾಯಧನವನ್ನು ನೀಡಲಾಗುವುದು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಯುವಕರಿಗೆ ನಾಲ್ಕು ಚಕ್ರ ವಾಹನಗಳನ್ನು ಖರೀದಿಸಲು 3 ಲಕ್ಷ ರೂಪಾಯಿಗಳ ವರೆಗಿನ ಸಾಲಕ್ಕೆ 50% ಸಬ್ಸಿಡಿಯನ್ನು ಒದಗಿಸಲಾಗುತ್ತದೆ. ಆದರೆ, SC/ST ವಿಭಾಗಕ್ಕೆ ಸೇರಿದ ಯುವಕರಿಗೆ 4 ಲಕ್ಷ ರೂಪಾಯಿಗಳು ವರೆಗಿನ ಸಾಲಕ್ಕೆ 75% ಸಬ್ಸಿಡಿಯನ್ನು ಒದಗಿಸಲಾಗುತ್ತದೆ.

ಅರ್ಹತೆಗಳು:

ಈ ಯೋಜನೆಯ ಲಾಭ ಪಡೆಯಲು ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಮತ್ತು ಅಭ್ಯರ್ಥಿಗಳು 21 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿರಬೇಕು. ಇನ್ನು ಅಭ್ಯರ್ಥಿಯೂ SC / ST ವರ್ಗಕ್ಕೆ ಸೇರಿದವಾರಗಿಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ:

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ  ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ನಿರ್ಮಾಣ ಕಾರ್ಯಕ್ಕೆ ಸಹಾಯ ಧನವನ್ನು ನೀಡಲಾಗುತ್ತದೆ. ಕೆಲವು ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇರುವುದಿಲ್ಲ ಅಂತಹ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ  ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರುವ ರೈತರಿಗೆ  ವೈಯಕ್ತಿಕ ಕೊಳವೆ ಬಾವಿ ನಿರ್ಮಾಣ ಮಾಡಲು ರೂ. 2.50 ಲಕ್ಷಗಳು, ಇದರಲ್ಲಿ 2 ಲಕ್ಷ ರೂ. ಸಹಾಯಧನ ವಾಗಿರುತ್ತದೆ ಹಾಗೂ ಹೆಚ್ಚುವಾರಿಯಾಗಿ 50,000 ರೂ. ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತವಾಗಿರುತ್ತದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ  ಕೊರೆಯಲು ಘಟಕದ ವೆಚ್ಚ ರೂ. 4 ಲಕ್ಷಗಳು ಇದರಲ್ಲಿ ರೂ. 3.50ಲಕ್ಷ ಸಹಾಯಧನ ಹಾಗೂ 50,000 ರೂ. ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತವಾಗಿರುತ್ತದೆ.

tel share transformed

ಅರ್ಜಿದಾರರಿಗೆ ಇರಬೇಕಾದ ಅರ್ಹತೆಗಳು :

ಈ ಯೋಜನೆಯ ಪ್ರಯೋಜನೆಯನ್ನು ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗೆ ಸೇರಿದವರಾಗಿರಬೇಕು.  ಅಭ್ಯರ್ಥಿಯು  ಕನಿಷ್ಠ 1.20 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ 1 ಎಕರೆ ಜಮೀನು ಇದ್ದರೆ ಸಾಕು.

ಅರಿವು –  ಶೈಕ್ಷಣಿಕ ಸಾಲ ಯೋಜನೆ(Arivu Educational Loan Scheme):

ಅರಿವು ಶಿಕ್ಷಣ ಸಾಲ ಯೋಜನೆಯು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ಯೋಜನೆಯಡಿಯಲ್ಲಿ, ಕರ್ನಾಟಕದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್‌ಗಳಿಗಾಗಿ ವಾರ್ಷಿಕ 2%  ಬಡ್ಡಿದರದೊಂದಿಗೆ  3 ಲಕ್ಷದವರೆಗಿನ ಶಿಕ್ಷಣ ಸಾಲವನ್ನು ಪಡೆಯಬಹುದು.

CET /NEET ಪರೀಕ್ಷೆಯಲ್ಲಿ ಉತ್ತಿರ್ಣರಾಗಿ  ಉತ್ತಮ ಮೆರಿಟ್ ನಿಂದ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಮ್.ಬಿ.ಬಿ.ಎಸ್.) ಹಾಗೂ ಬಿ.ಡಿ.ಎಸ್., ಬಿ.ಇ., ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್‍ದಂತಹ ಪದವಿ ಕೋರ್ಸ್‍ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ ”ಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷವನ್ನು ಮೀರಬಾರದು.  ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ(Loan) ಯೋಜನೆ:

ಈ ಯೋಜನೆಯು ವಿದೇಶಿ  ವಿಶ್ವವಿದ್ಯಾಲಯಗಳಲ್ಲಿ ಪಿ .ಹೆಚ್‌ಡಿ, ಪೋಸ್ಟ್‌ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ ಯನ್ನು ಪಡೆಯಲು ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಸರ್ಕಾರವು ಸಾಲ ವನ್ನು ನೀಡುತ್ತದೆ. ಇಂಜಿನಿಯರಿಂಗ್, ಟೆಕ್ನಾಲಜಿ, ಮ್ಯಾನೇಜ್ಮೆಂಟ್, ಕಾಮರ್ಸ್‌, ಸೈನ್ಸ್‌ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಅಲೈಡ್ ಸೈನ್ಸಸ್ / ಟೆಕ್ನಾಲಜಿ, ಮೆಡಿಸಿನ್, ಹ್ಯೂಮ್ಯಾನಿಟೀಸ್ ಮತ್ತು ಸೋಷಿಯಲ್ ಸೈನ್ಸ್‌ ಗಳಿಗೆ ಸೇರಿದಂತ ಉನ್ನತ ವ್ಯಾಸಂಗ ಅಧ್ಯಯನಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್‌ನ ಅವಧಿಗೆ ರೂ.20.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.

Picsart 23 07 16 14 24 41 584 transformed 1

ಅರ್ಹತೆಗಳು :

ವಿದ್ಯಾರ್ಥಿಯ ವಾರ್ಷಿಕ ಕುಟುಂಬದ ಆದಾಯ 8 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಮಾನ್ಯ ಅರ್ಹತಾ ಪರೀಕ್ಷೆಯಲ್ಲಿ ಶೇಕಡ.60 ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಮತ್ತು QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದವರಾಗಿರಬೇಕು.

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

 

WhatsApp Group Join Now
Telegram Group Join Now

Related Posts

2 thoughts on “Govt Loan Scheme – ಭರ್ಜರಿ ಸಾಲ ಮತ್ತು ಸಹಾಯ ಯೋಜನೆ, 4 ಲಕ್ಷ ರೂ. ವರೆಗೆ ಉಚಿತ ಸಹಾಯಧನ – ಇಲ್ಲಿದೆ ಕಂಪ್ಲೀಟ್ ಮಾಹಿತಿ

Leave a Reply

Your email address will not be published. Required fields are marked *

error: Content is protected !!